ಇಂಡಿಯನ್ ಪ್ರೀಮಿಯರ್ ಲೀಗ್‌ನ 16ನೇ ಆವೃತ್ತಿ ಕುತೂಹಲ ಹೆಚ್ಚಿಸುತ್ತಾ ಸಾಗುತ್ತಿದೆ. ಇಂದು(ಭಾನುವಾರ) ಐಪಿಎಲ್‌ನಲ್ಲಿ ಎರಡು ಪಂದ್ಯಗಳೂ ಆಯೋಜನೆಯಾಗಲಿದೆ. ಮೊದಲ ಮುಖಾಮುಖಿಯಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟನ್ಸ್ ತಂಡದ ಸವಾಲವನ್ನು ನಿತೀಶ್ ರಾಣಾ ನೇತೃತ್ವದ ಕೊಲ್ಕತ್ತಾ ನೈಟ್ ರೈಡರ್ಸ್ ಎದುರಿಸಿದರೆ ಎರಡನೇ ಮುಖಾಮೂಖಿಯಲ್ಲಿ ಐಡೆನ್ ಮಾರ್ಕ್ರಮ್ ನೇತೃತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಶಿಖರ್ ಧವನ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡ ಸೆಣೆಸಾಡಲಿದೆ.
ಗುಜರಾತ್ ಟೈಟನ್ಸ್ vs ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ಮುಖಾಮುಖಿ ಮಧ್ಯಾಹ್ನ 3:30ಕ್ಕೆ ಆರಂಭವಾಗಲಿದ್ದು ಈ ಪಂದ್ಯ ಗುಜರಾತ್ ಟೈಟನ್ಸ್‌ನ ತವರು ಕ್ರೀಡಾಂಗಣವಾದ ಅಹ್ಮದಾಬಾದ್‌ನಲ್ಲಿ ಆಯೋಜನೆಯಾಗಲಿದೆ. ಬಳಿಕ ಸನ್‌ರೈಸರ್ಸ್ ಹೈದರಾಬಾದ್ vs ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯ ಸಂಜೆ 7:30ಕ್ಕೆ ಹೈದರಾಬಾದ್‌ನಲ್ಲಿ ಆಯೋಜನೆಯಾಗಲಿದೆ.

GT vs KKR: ಗುಜರಾತ್ ಟೈಟನ್ಸ್ ಹಾಲಿ ಚಾಂಪಿಯನ್ ಆಗಿ ಈ ಭಾರಿಯ ಐಪಿಎಲ್ ಟೂರ್ನಿಗೆ ಕಣಕ್ಕಿಳಿದಿದ್ದು ಸತತವಾಗಿ ಅದ್ಭುತ ಪ್ರದರ್ಶನ ನೀಡಿದೆ., ಆಡಿರುವ ಎರಡು ಪಂದ್ಯಗಳಲ್ಲಿಯೂ ಉತ್ತಮ ಆಲ್‌ರೌಂಡ್ ಪ್ರದರ್ಶನ ನೀಡಿರುವ ಜಿಟಿ ಭರ್ಜರಿ ಗೆಲುವು ಸಾಧಿಸಿದೆ. ಡೆಲ್ಲಿ ತಂಡದ ವಿರುದ್ಧ ತವರಿನಾಚೆಗಿನ ಪಂದ್ಯವನ್ನು ಗೆದ್ದುಕೊಂಡ ಬಳಿಕ ಜಿಟಿ ತಂಡ ಈಗ ಮತ್ತೆ ತವರಿನಲ್ಲಿ ಆಡಲು ಸಜ್ಜಾಗಿದೆ.
ಮತ್ತೊಂದೆಡೆ ಕೆಕೆಆರ್ ಆರಂಭಿಕ ಪಂದ್ಯದಲ್ಲಿ ಸೋಲಿನ ಬಳಿಕ ಎರಡನೇ ಪಂದ್ಯದಲೊ್ಲಿ ಆರ್‌ಸಿಬಿ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಕಮ್‌ಬ್ಯಾಕ್ ಮಾಡಿದೆ. ಈ ಬಾರಿ ನಿತೀಶ್ ರಾಣಾ ನಾಯಕತ್ವದಲ್ಲಿ ಕೊಲ್ಕತ್ತಾ ಬೈಟ್ ರೈಡರ್ಸ್ ತಂಡ ಕಣಕ್ಕಿಳಿಯುತ್ತಿದ್ದು ಮೊದಲ ಪಂದ್ಯವನ್ನು ಪಂಜಾಬ್ ಕಿಂಗ್ಸ್ ವಿರುದ್ಧ ಸೋತುತ್ತು.
ಸಂಭಾವ್ಯ ಆಡುವ ಬಳಗ:
ಗುಜರಾತ್ ಟೈಟಾನ್ಸ್: ಶುಬ್ಮನ್ ಗಿಲ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಅಲ್ಜಾರಿ ಜೋಸೆಫ್, ಮೊಹಮ್ಮದ್ ಶಮಿ, ಜೋಶುವಾ ಲಿಟಲ್, ಯಶ್ ದಯಾಳ್.
ಕೋಲ್ಕತ್ತಾ ನೈಟ್ ರೈಡರ್ಸ್: ವೆಂಕಟೇಶ್ ಅಯ್ಯರ್, ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಮನ್ದೀಪ್ ಸಿಂಗ್/ಎನ್ ಜಗದೀಸನ್, ನಿತೀಶ್ ರಾಣಾ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ಶಾರ್ದೂಲ್ ಠಾಕೂರ್, ಸುನಿಲ್ ನರೈನ್, ಟಿಮ್ ಸೌಥಿ, ಉಮೇಶ್ ಯಾದವ್, ವರುಣ್ ಚಕ್ರವರ್ತಿ.
SRH vs PBKS: ಸನ್‌ರೈಸರ್ಸ್ ಹೈದರಾಬಾದ್ ಈ ಭಾರಿಯ ಐಪಿಎಲ್ ಆವೃತ್ತಿಯನ್ನು ಕೂಡ ಕಳಪೆಯಾಗಿ ಆರಂಭಿಸಿದೆ. ಆರಂಭಿಕ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದ ಬಳಿಕ ಮೂರನೇ ಪಂದ್ಯವನ್ನು ಗೆಲ್ಲಬೇಕೆಂದು ಸಜ್ಜಾಗಿರುವ ಹೈದರಾಬಾದ್ ಪಡೆ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವಿಗಾಗಿ ಸೆಣಸಾಡಲಿದೆ. ಮೊದಲಿಗೆ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋಲು ಕಂಡಿದ್ದ ಎಸ್‌ಆರ್‌ಹೆಚ್ ತಂಡ ಬಳಿಕ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೋಲು ಕಂಡಿತ್ತು.
ಮತ್ತೊಂದೆಡೆ ಪಂಜಾಬ್ ಕಿಂಗ್ಸ್ ತಂಡಕ್ಕೆ ಈ ಬಾರಿ ಅದ್ಭುತ ಆರಂಭ ದೊರೆತಿದೆ. ಶಿಖರ್ ಧವನ್ ನಾಯಕತ್ವದಲ್ಲಿ ಕಣಕ್ಕಿಳಿದಿರುವ ಪಂಜಾಬ್ ಕಿಂಗ್ಸ್ ತಂಡ ಆರಂಭಿಕ ಎರಡು ಪಂದ್ಯಗಳಲ್ಲಿಯೂ ಗೆದ್ದು ಬೀಗಿದೆ. ಕೆಕೆಆರ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಪಡೆ ಗೆಲುವು ಸಾಧಿಸಿದ್ದು ಆಲ್‌ರೌಂಡ್ ಸಾಮರ್ಥ್ಯವನ್ನು ಪ್ರದರ್ಶಿಸಿದೆ. ಎಸ್‌ಆರ್‌ಹೆಚ್ ವಿರುದ್ಧವೂ ಅಂಥಾದ್ದೇ ಪ್ರದರ್ಶನದ ನಿರೀಕ್ಷೆಯಲ್ಲಿದೆ ಪಂಜಾಬ್ ಕಿಂಗ್ಸ್.
ಸಂಭಾವ್ಯ ಆಡುವ ಬಳಗ:
ಸನ್‌ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಮಯಾಂಕ್ ಅಗರ್ವಾಲ್, ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್ (ನಾಯಕ), ಹ್ಯಾರಿ ಬ್ರೂಕ್, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಆದಿಲ್ ರಶೀದ್/ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಟಿ ನಟರಾಜನ್, ಉಮ್ರಾನ್ ಮಲಿಕ್
ಪಂಜಾಬ್ ಕಿಂಗ್ಸ್: ಶಿಖರ್ ಧವನ್ (ನಾಯಕ), ಪ್ರಭಾಸಿಮ್ರಾನ್ ಸಿಂಗ್, ಭಾನುಕಾ ರಾಜಪಕ್ಸೆ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಿಕಂದರ್ ರಜಾ, ಶಾರುಖ್ ಖಾನ್, ಸ್ಯಾಮ್ ಕರನ್, ಹರ್‌ಪ್ರೀತ್ ಬ್ರಾರ್, ರಾಹುಲ್ ಚಾಹರ್, ನಾಥನ್ ಎಲ್ಲಿಸ್, ಅರ್ಶ್‌ದೀಪ್ ಸಿಂಗ್