Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Umesh Yadav Wickets In IPL: ಐಪಿಎಲ್‌ನಲ್ಲಿ ವಿಶೇಷ ದಾಖಲೆ ಬರೆದ ಉಮೇಶ್ ಯಾದವ್

ಶನಿವಾರ, ಏಪ್ರಿಲ್ 1ರಂದು ಮೊಹಾಲಿಯ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಎರಡನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾದವು.



ಈ ವೇಳೆ ಕೆಕೆಆರ್ ತಂಡದ ವೇಗಿ ಉಮೇಶ್ ಯಾದವ್ ತಮ್ಮ ಹೆಸರನ್ನು ವಿಶೇಷ ದಾಖಲೆ ಪುಸ್ತಕದಲ್ಲಿ ನೋಂದಾಯಿಸಿಕೊಂಡರು. ಐಪಿಎಲ್‌ನಲ್ಲಿ ಒಂದೇ ತಂಡದ ವಿರುದ್ಧ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದರು.
 Umesh Yadav Becomes Most Wickets Taker

ಉಮೇಶ್ ಯಾದವ್ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ತಮ್ಮ ನಾಲ್ಕು ಓವರ್‌ಗಳ ಕೋಟಾದಲ್ಲಿ 27 ರನ್‌ಗೆ 1 ವಿಕೆಟ್ ಪಡೆದರು ಮತ್ತು ಆ ಒಂದು ವಿಕೆಟ್ ಮೂಲಕ ಐಪಿಎಲ್ ಇತಿಹಾಸದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 34 ವಿಕೆಟ್‌ಗಳನ್ನು ಪಡೆದ ಮೈಲುಗಲ್ಲು ಸ್ಥಾಪಿಸಿದರು.

ಇದಕ್ಕೂ ಮುನ್ನ 33 ವಿಕೆಟ್‌ಗಳೊಂದಿಗೆ ಡ್ವೇನ್ ಬ್ರಾವೋ ಮತ್ತು ಸುನಿಲ್ ನರೈನ್ ಜೊತೆ ಜಂಟಿ ಮೊದಲ ಸ್ಥಾನದಲ್ಲಿದ್ದರು. ಪಂಜಾಬ್ ಕಿಂಗ್ಸ್‌ನ ಭಾನುಕ ರಾಜಪಕ್ಸ ಅವರನ್ನು ಔಟ್ ಮಾಡುವ ಮೂಲಕ 34 ವಿಕೆಟ್‌ಗಳೊಂದಿಗೆ ಏಕಾಂಗಿಯಾಗಿ ಅಗ್ರಸ್ಥಾನಕ್ಕೇರಿದರು.

ಉಮೇಶ್ ಯಾದವ್ ಇಂಡಿಯನ್ ಪ್ರೀಮಿಯರ್ ಲೀಗ್‌ನ ಇತಿಹಾಸದಲ್ಲಿ ಏಕೈಕ ಎದುರಾಳಿಯ ವಿರುದ್ಧ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದ ಆಟಗಾರರ ಪಟ್ಟಿಯಲ್ಲಿ ಡ್ವೇನ್ ಬ್ರಾವೋ ಮತ್ತು ಸುನಿಲ್ ನರೈನ್ ಅವರ 33 ವಿಕೆಟ್‌ಗಳ ಜಂಟಿ ದಾಖಲೆಯನ್ನು ಮೀರಿಸಿದರು. ಶ್ರೀಲಂಕಾದ ಮಾಜಿ ಬೌಲರ್ ಲಸಿತ್ ಮಾಲಿಂಗ ಅವರು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 31 ವಿಕೆಟ್ ಪಡೆಯುವುದರೊಂದಿಗೆ ಒಂದೇ ಎದುರಾಳಿಯ ವಿರುದ್ಧ ಮೂರನೇ ಅತಿ ಹೆಚ್ಚು ವಿಕೆಟ್ ಪಡೆದಿದ್ದಾರೆ.

 Umesh Yadav Becomes Most Wickets Taker


ಒಂದೇ ತಂಡದ ವಿರುದ್ಧ ಅತಿ ಹೆಚ್ಚು ವಿಕೆಟ್‌ ಪಡೆದ ಬೌಲರ್‌ಗಳು
ಉಮೇಶ್ ಯಾದವ್ - ಪಂಜಾಬ್ ಕಿಂಗ್ಸ್ ವಿರುದ್ಧ - 34 ವಿಕೆಟ್‌ಗಳು

ಡ್ವೇನ್ ಬ್ರಾವೋ - ಮುಂಬೈ ಇಂಡಿಯನ್ಸ್ ವಿರುದ್ಧ- 33 ವಿಕೆಟ್‌ಗಳು

ಸುನಿಲ್ ನರೈನ್ ಪಂಜಾಬ್ ಕಿಂಗ್ಸ್ ವಿರುದ್ಧ - 33 ವಿಕೆಟ್‌ಗಳು

ಲಸಿತ್ ಮಾಲಿಂಗ - ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ - 31 ವಿಕೆಟ್‌ಗಳು

ಭುವನೇಶ್ವರ್ ಕುಮಾರ್ - ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ - 30 ವಿಕೆಟ್‌ಗಳು

ಕೆಕೆಆರ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡಕ್ಕೆ ಭರ್ಜರಿ ಗೆಲುವು
ಕೋಲ್ಕತ್ತಾ ನೈಟ್ ರೈಡರ್ಸ್ ಬ್ಯಾಟಿಂಗ್ ಇನ್ನಿಂಗ್ಸ್‌ನ 16 ಓವರ್‌ಗಳ ನಂತರ ಸುರಿದ ಭಾರೀ ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಿತು. ಆಗ ಎರಡು ತಂಡಗಳ ರನ್ ಹಾಗೂ ವಿಕೆಟ್ ಲೆಕ್ಕಾಚಾರದಲ್ಲಿ ಪಂಜಾಬ್ ಕಿಂಗ್ಸ್ ಮುನ್ನಡೆ ಸಾಧಿಸಿದ್ದರಿಂದ ಡಿಎಲ್ಎಸ್ ವಿಧಾನದಡಿಯಲ್ಲಿ 7 ರನ್‌ಗಳ ಜಯ ಕಂಡಿತು.

ಪಂಜಾಬ್ ಕಿಂಗ್ಸ್ ತಂಡ ನೀಡಿದ್ದ 192 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಕೆಕೆಆರ್ ತಂಡ 16 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 146 ರನ್ ಗಳಿಸಿತ್ತು. ಗೆಲುವಿಗೆ ಇನ್ನೂ 24 ಎಸೆತಗಳಲ್ಲಿ ಕಷ್ಟಸಾಧ್ಯವೆನಿಸಿದ 46 ರನ್‌ಗಳ ಅವಶ್ಯಕತೆ ಇತ್ತು. ಆದರೆ ಕೇವಲ ಮೂರು ವಿಕೆಟ್‌ಗಳು ಮಾತ್ರ ಕೈಯಲ್ಲಿದ್ದವು. ಮಳೆ ಅವರ ಗೆಲುವಿನ ಅದೃಷ್ಟವನ್ನು ಕಸಿದುಕೊಂಡಿತು.

ಪಂಜಾಬ್ ಕಿಂಗ್ಸ್ ಬೃಹತ್ ಮೊತ್ತ
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ ಭಾನುಕ ರಾಜಪಕ್ಸ ಅವರ ಭರ್ಜರಿ ಅರ್ಧಶತಕ ಮತ್ತು ಶಿಖರ್ ಧವನ್ ಅವರ ನಾಯಕದ ಆಟದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 191 ರನ್‌ಗಳನ್ನು ಕಲೆಹಾಕಿತು.

ಆರಂಭಿಕ ಬ್ಯಾಟರ್ ಪ್ರಭಾಸಿಮ್ರಾನ್ ಸಿಂಗ್ ಅವರು ಟಿಮ್ ಸೌಥಿ ಬೌಲಿಂಗ್‌ನಲ್ಲಿ ಔಟಾಗುವ ಮುನ್ನ ಕೇವಲ 12 ಎಸೆತಗಳಲ್ಲಿ 2 ಬೌಂಡರಿ ಮತ್ತು 2 ಸಿಕ್ಸರ್ ಸಹಾಯದಿಂದ 23 ರನ್ ಗಳಿಸಿದರು. ನಂತರ ಜೊತೆಗೂಡಿದ ಭಾನುಕಾ ರಾಜಪಕ್ಸ ಮತ್ತು ನಾಯಕ ಶಿಖರ್ ಧವನ್ ಎರಡನೇ ವಿಕೆಟ್‌ಗೆ 86 ರನ್‌ಗಳ ಜೊತೆಯಾಟ ನೀಡಿದರು.

ಭಾನುಕ ರಾಜಪಕ್ಸ ಉಮೇಶ್ ಯಾದವ್ ಬೌಲಿಂಗ್‌ನಲ್ಲಿ ವಿಕೆಟ್ ಒಪ್ಪಿಸುವ ಮುನ್ನ ಕೇವಲ 32 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್‌ಗಳ ಸಮೇತ 50 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನು ನಾಯಕ ಶಿಖರ್ ಧವನ್ 29 ಎಸೆತಗಳಲ್ಲಿ 6 ಬೌಂಡರಿಗಳ ಸಮೇತ 40 ರನ್ ಗಳಿಸಿ ಔಟಾದರು.

ಬೌಲಿಂಗ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಟಿಮ್ ಸೌಥಿ 4 ಓವರ್‌ಗಳಲ್ಲಿ 54 ರನ್ ನೀಡಿ 2 ವಿಕೆಟ್ ಪಡೆದರೆ, ವರುಣ್ ಚಕ್ರವರ್ತಿ 4 ಓವರ್‌ಗಳಲ್ಲಿ 26 ರನ್ ನೀಡಿ 1 ವಿಕೆಟ್ ಪಡೆದರು. ಇನ್ನು ಉಮೇಶ್ ಯಾದವ್ 4 ಓವರ್‌ಗಳಲ್ಲಿ 27 ರನ್ ನೀಡಿ 1 ವಿಕೆಟ್ ಪಡೆದರೆ, ಸುನಿಲ್ ನರೈನ್ 4 ಓವರ್‌ಗಳಲ್ಲಿ 40 ರನ್ ನೀಡಿ 1 ವಿಕೆಟ್ ಪಡೆದರು.

Story first published: Sunday, April 2, 2023, 5:40 [IST]
Other articles published on Apr 2, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+