ಕಳೆದ ಮಾರ್ಚ್ ತಿಂಗಳ ಅಂತ್ಯದಲ್ಲಿ ಶುರುವಾದ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಕ್ತಾಯವಾಗಿದ್ದು, ಎರಡನೇ ಕ್ವಾಲಿಫಯರ್ ಹಾಗೂ ಫೈನಲ್ ಪಂದ್ಯಗಳು ಮಾತ್ರ ಬಾಕಿ ಉಳಿದುಕೊಂಡಿವೆ.
ನಿನ್ನೆ ( ಮೇ 24 ) ಚೆನ್ನೈನ ಎಂ ಎ ಚಿದಂಬರಂ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಜಯ ಸಾಧಿಸಿತು.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 182 ರನ್ ಕಲೆಹಾಕಿ ಎದುರಾಳಿ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಗೆಲ್ಲಲು 183 ರನ್‌ಗಳ ಗುರಿಯನ್ನು ನೀಡಿತು. ಆದರೆ ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾದ ಲಕ್ನೋ ಸೂಪರ್ ಜೈಂಟ್ಸ್ 16.3 ಓವರ್‌ಗಳಲ್ಲಿ 101 ರನ್‌ಗಳಿಗೆ ಆಲ್‌ಔಟ್ ಆಯಿತು. ಈ ಮೂಲಕ ಮುಂಬೈ ಇಂಡಿಯನ್ಸ್ 81 ರನ್‌ಗಳ ಭರ್ಜರಿ ಗೆಲುವನ್ನು ಕಂಡು ಎರಡನೇ ಕ್ವಾಲಿಫಯರ್ ಆಡುವ ಅವಕಾಶವನ್ನು ಪಡೆದುಕೊಂಡಿದೆ.
ಇನ್ನು ಮೊನ್ನೆ ನಡೆದ ಒಂದನೇ ಕ್ವಾಲಿಫಯರ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋತ ಗುಜರಾತ್ ಟೈಟನ್ಸ್ ಎರಡನೇ ಕ್ವಾಲಿಫಯರ್ ಆಡಲು ಸಜ್ಜಾಗಿದ್ದು, ನಾಳೆ ( ಮೇ 26 ) ಮುಖಾಮುಖಿಯಾಗಲಿವೆ.
ಹೀಗೆ ಟೂರ್ನಿಯ ಒಂದನೇ ಕ್ವಾಲಿಫಯರ್ ಹಾಗೂ ಎಲಿಮಿನೇಟರ್ ಪಂದ್ಯಗಳು ಮುಕ್ತಾಯವಾದ ಬಳಿಕ ಆರೆಂಜ್ ಕ್ಯಾಪ್ ಹಾಗೂ ಪರ್ಪಲ್ ಕ್ಯಾಪ್‌ಗಳಲ್ಲಿ ಯಾವ ಆಟಗಾರರು ಎಷ್ಟನೇ ಸ್ಥಾನದಲ್ಲಿದ್ದಾರೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
1. 14 ಇನ್ನಿಂಗ್ಸ್‌ನಲ್ಲಿ ಕಣಕ್ಕಿಳಿದು 730 ರನ್ ಬಾರಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಅಗ್ರಸ್ಥಾನದಲ್ಲಿದ್ದಾರೆ.
2. 15 ಇನ್ನಿಂಗ್ಸ್‌ನಲ್ಲಿ ಕಣಕ್ಕಿಳಿದು 722 ರನ್ ಬಾರಿಸಿದರು ಗುಜರಾತ್ ಟೈಟನ್ಸ್ ತಂಡದ ಶುಬ್‌ಮನ್ ಗಿಲ್ ಎರಡನೇ ಸ್ಥಾನದಲ್ಲಿದ್ದಾರೆ.
3. 14 ಇನ್ನಿಂಗ್ಸ್‌ನಲ್ಲಿ ಕಣಕ್ಕಿಳಿದು 639 ರನ್ ಬಾರಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ.
4. 14 ಇನ್ನಿಂಗ್ಸ್‌ನಲ್ಲಿ ಕಣಕ್ಕಿಳಿದು 625 ರನ್ ಬಾರಿಸಿರುವ ರಾಜಸ್ಥಾನ್ ರಾಯಲ್ಸ್ ತಂಡದ ಯಶಸ್ವಿ ಜೈಸ್ವಾಲ್ ನಾಲ್ಕನೇ ಸ್ಥಾನದಲ್ಲಿದ್ದಾರೆ.
5. 14 ಇನ್ನಿಂಗ್ಸ್‌ನಲ್ಲಿ ಕಣಕ್ಕಿಳಿದು 625 ರನ್ ಬಾರಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಡಿವಾನ್ ಕಾನ್ವೆ ಐದನೇ ಸ್ಥಾನದಲ್ಲಿದ್ದಾರೆ.
1. 15 ಇನ್ನಿಂಗ್ಸ್‌ನಲ್ಲಿ 26 ವಿಕೆಟ್ ಪಡೆದಿರುವ ಗುಜರಾತ್ ಟೈಟನ್ಸ್ ತಂಡದ ಮೊಹಮ್ಮದ್ ಶಮಿ ಅಗ್ರಸ್ಥಾನದಲ್ಲಿದ್ದಾರೆ.
2. 15 ಇನ್ನಿಂಗ್ಸ್‌ನಲ್ಲಿ 25 ವಿಕೆಟ್ ಪಡೆದಿರುವ ಗುಜರಾತ್ ಟೈಟನ್ಸ್ ತಂಡದ ರಶೀದ್ ಖಾನ್ ಎರಡನೇ ಸ್ಥಾನದಲ್ಲಿದ್ದಾರೆ.
3. 15 ಇನ್ನಿಂಗ್ಸ್‌ನಲ್ಲಿ 21 ವಿಕೆಟ್ ಪಡೆದಿರುವ ಮುಂಬೈ ಇಂಡಿಯನ್ಸ್ ತಂಡದ ಪಿಯೂಷ್ ಚಾವ್ಲಾ ಐದನೇ ಸ್ಥಾನದಲ್ಲಿದ್ದಾರೆ.
4. 14 ಇನ್ನಿಂಗ್ಸ್‌ನಲ್ಲಿ 21 ವಿಕೆಟ್ ಪಡೆದಿರುವ ರಾಜಸ್ಥಾನ್ ರಾಯಲ್ಸ್ ತಂಡದ ಯುಜ್ವೇಂದ್ರ ಚಾಹಲ್ ಮೂರನೇ ಸ್ಥಾನದಲ್ಲಿದ್ದಾರೆ.
5. 15 ಇನ್ನಿಂಗ್ಸ್‌ನಲ್ಲಿ 21 ವಿಕೆಟ್ ಪಡೆದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ತುಷಾರ್ ದೇಶಪಾಂಡೆ ನಾಲ್ಕನೆ ಸ್ಥಾನದಲ್ಲಿದ್ದಾರೆ.