For Quick Alerts
ALLOW NOTIFICATIONS  
For Daily Alerts
 

IPL 2023: ಕ್ವಾಲಿಫಯರ್ 1 ಪಂದ್ಯದ ಬಳಿಕ ಹೇಗಿದೆ ಆರೆಂಜ್ ಕ್ಯಾಪ್, ಪರ್ಪಲ್ ಕ್ಯಾಪ್ ಪಟ್ಟಿ?

IPL 2023: Updated orange cap and purple cap details after the end of qualifier 1 match

ಸದ್ಯ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಕ್ತಾಯದ ಸನಿಹಕ್ಕೆ ಬಂದಿದೆ. ನಿನ್ನೆ ( ಮೇ 23 ) ನಡೆದ ಒಂದನೇ ಕ್ವಾಲಿಫಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಪರಸ್ಪರ ಮುಖಾಮುಖಿಯಾಗಿ ಪಂದ್ಯ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಫೈನಲ್ ಪ್ರವೇಶಿಸಿದ್ದರೆ, ಸೋತ ಗುಜರಾತ್ ಟೈಟನ್ಸ್ ಎರಡನೇ ಕ್ವಾಲಿಫಯರ್ ಪಂದ್ಯಕ್ಕೆ ಪ್ರವೇಶಿಸಿದೆ.

ಇನ್ನು ಈ ಪಂದ್ಯದಲ್ಲಿ ಶುಬ್‌ಮನ್ ಗಿಲ್ 38 ಎಸೆತಗಳಲ್ಲಿ 42 ರನ್ ಬಾರಿಸಿದ ಶುಬ್‌ಮನ್ ಗಿಲ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಯಲ್ಲಿ 700 ರನ್‌ಗಳನ್ನು ಪೂರೈಸಿದ್ದಾರೆ. ಈ ಮೂಲಕ ಐಪಿಎಲ್ ಸೀಸನ್‌ವೊಂದರಲ್ಲಿ 700 ರನ್‌ಗಳನ್ನು ಪೂರೈಸಿದ ಎರಡನೇ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ. ಈ ಹಿಂದೆ 2016ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ 973 ರನ್ ಬಾರಿಸುವ ಮೂಲಕ ಈ ದಾಖಲೆ ಬರೆದ ಭಾರತದ ಮೊದಲ ಆಟಗಾರ ಎನಿಸಿಕೊಂಡಿದ್ದರು.

15 ಇನ್ನಿಂಗ್ಸ್‌ನಲ್ಲಿ ಬ್ಯಾಟ್ ಬೀಸಿರುವ ಶುಬ್‌ಮನ್ ಗಿಲ್ 2 ಶತಕ ಹಾಗೂ 4 ಅರ್ಧಶತಕಗಳ ನೆರವಿನಿಂದ 722 ರನ್ ಕಲೆಹಾಕಿದ್ದು, ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲು ಇನ್ನು ಕೇವಲ 8 ರನ್ ಗಳಿಸಬೇಕಾದ ಸ್ಥಿತಿಯಲ್ಲಿದ್ದಾರೆ. ಹೀಗೆ ಒಂದನೇ ಕ್ವಾಲಿಫಯರ್ ಪಂದ್ಯ ಮುಕ್ತಾಯವಾದ ಬಳಿಕ ಆರೆಂಜ್ ಕ್ಯಾಪ್ ಹಾಗೂ ಪರ್ಪಲ್ ಕ್ಯಾಪ್‌ ಆಟಗಾರರ ಪಟ್ಟಿಯಲ್ಲಿ ಯಾವ ಆಟಗಾರ ಯಾವ ಸ್ಥಾನದಲ್ಲಿದ್ದಾರೆ ಎಂಬ ಮಾಹಿತಿ ಈ ಕೆಳಕಂಡಂತಿದೆ.

ಆರೆಂಜ್ ಕ್ಯಾಪ್:

1. 14 ಇನ್ನಿಂಗ್ಸ್‌ನಲ್ಲಿ ಕಣಕ್ಕಿಳಿದು 730 ರನ್ ಬಾರಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಅಗ್ರಸ್ಥಾನದಲ್ಲಿದ್ದಾರೆ.
2. 15 ಇನ್ನಿಂಗ್ಸ್‌ನಲ್ಲಿ ಕಣಕ್ಕಿಳಿದು 722 ರನ್ ಬಾರಿಸಿದರು ಗುಜರಾತ್ ಟೈಟನ್ಸ್ ತಂಡದ ಶುಬ್‌ಮನ್ ಗಿಲ್ ಎರಡನೇ ಸ್ಥಾನದಲ್ಲಿದ್ದಾರೆ.
3. 14 ಇನ್ನಿಂಗ್ಸ್‌ನಲ್ಲಿ ಕಣಕ್ಕಿಳಿದು 639 ರನ್ ಬಾರಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ.
4. 14 ಇನ್ನಿಂಗ್ಸ್‌ನಲ್ಲಿ ಕಣಕ್ಕಿಳಿದು 625 ರನ್ ಬಾರಿಸಿರುವ ರಾಜಸ್ಥಾನ್ ರಾಯಲ್ಸ್ ತಂಡದ ಯಶಸ್ವಿ ಜೈಸ್ವಾಲ್ ನಾಲ್ಕನೇ ಸ್ಥಾನದಲ್ಲಿದ್ದಾರೆ.
5. 14 ಇನ್ನಿಂಗ್ಸ್‌ನಲ್ಲಿ ಕಣಕ್ಕಿಳಿದು 625 ರನ್ ಬಾರಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಡಿವಾನ್ ಕಾನ್ವೆ ಐದನೇ ಸ್ಥಾನದಲ್ಲಿದ್ದಾರೆ.

ಪರ್ಪಲ್ ಕ್ಯಾಪ್:

1. 15 ಇನ್ನಿಂಗ್ಸ್‌ನಲ್ಲಿ 26 ವಿಕೆಟ್ ಪಡೆದಿರುವ ಗುಜರಾತ್ ಟೈಟನ್ಸ್ ತಂಡದ ಮೊಹಮ್ಮದ್ ಶಮಿ ಅಗ್ರಸ್ಥಾನದಲ್ಲಿದ್ದಾರೆ.
2. 15 ಇನ್ನಿಂಗ್ಸ್‌ನಲ್ಲಿ 25 ವಿಕೆಟ್ ಪಡೆದಿರುವ ಗುಜರಾತ್ ಟೈಟನ್ಸ್ ತಂಡದ ರಶೀದ್ ಖಾನ್ ಎರಡನೇ ಸ್ಥಾನದಲ್ಲಿದ್ದಾರೆ.
3. 14 ಇನ್ನಿಂಗ್ಸ್‌ನಲ್ಲಿ 21 ವಿಕೆಟ್ ಪಡೆದಿರುವ ರಾಜಸ್ಥಾನ್ ರಾಯಲ್ಸ್ ತಂಡದ ಯುಜ್ವೇಂದ್ರ ಚಾಹಲ್ ಮೂರನೇ ಸ್ಥಾನದಲ್ಲಿದ್ದಾರೆ.
4. 15 ಇನ್ನಿಂಗ್ಸ್‌ನಲ್ಲಿ 21 ವಿಕೆಟ್ ಪಡೆದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ತುಷಾರ್ ದೇಶಪಾಂಡೆ ನಾಲ್ಕನೆ ಸ್ಥಾನದಲ್ಲಿದ್ದಾರೆ.
5. 14 ಇನ್ನಿಂಗ್ಸ್‌ನಲ್ಲಿ 20 ವಿಕೆಟ್ ಪಡೆದಿರುವ ಮುಂಬೈ ಇಂಡಿಯನ್ಸ್ ತಂಡದ ಪಿಯೂಷ್ ಚಾವ್ಲಾ ಐದನೇ ಸ್ಥಾನದಲ್ಲಿದ್ದಾರೆ.

Story first published: Wednesday, May 24, 2023, 16:27 [IST]
Other articles published on May 24, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+