
ನಿನ್ನೆ ( ಮೇ 14 ) ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಎರಡು ಪಂದ್ಯಗಳು ಜರುಗಿದವು.
ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ರಾಜಸ್ಥಾನ್ ರಾಯಲ್ಸ್ ವಿರುದ್ಧ ಬರೋಬ್ಬರಿ 112 ರನ್ನುಗಳ ಅಂತರದ ಗೆಲುವನ್ನು ಸಾಧಿಸಿತು. ಈ ಮೂಲಕ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಏರಿಕೆ ಕಂಡಿದೆ.
ಇನ್ನು ಒಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ರಚಂಡ ಜಯ ಸಾಧಿಸಿದರೆ ಮತ್ತೊಂದೆಡೆ ರಾತ್ರಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೋತಿದೆ. ಹೀಗೆ ಈ ಎರಡು ಪಂದ್ಯಗಳ ಮುಕ್ತಾಯದ ಬಳಿಕ ಅಂಕಪಟ್ಟಿಯಲ್ಲಿ ಯಾವ ತಂಡಗಳು ಎಷ್ಟು ಅಂಕಗಳನ್ನು ಪಡೆದುಕೊಂಡು ಎಷ್ಟನೇ ಸ್ಥಾನಗಳಲ್ಲಿವೆ ಎಂಬ ಮಾಹಿತಿ ಇಲ್ಲಿದೆ.
1. 12 ಪಂದ್ಯಗಳನ್ನಾಡಿ 8 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಗುಜರಾತ್ ಟೈಟನ್ಸ್ ತಂಡ 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
2. 13 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಚೆನ್ನೈ ಸೂಪರ್ ಕಿಂಗ್ಸ್ 15 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
3. 12 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತಿರುವ ಮುಂಬೈ ಇಂಡಿಯನ್ಸ್ ತಂಡ 14 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.
4. 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಲಕ್ನೋ ಸೂಪರ್ ಜೈಂಟ್ಸ್ ತಂಡ 13 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.
5. 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
6. 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಜಸ್ಥಾನ್ ರಾಯಲ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.
7. 13 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.
8. 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಪಂಜಾಬ್ ಕಿಂಗ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.
9. 11 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.
10. 12 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 8 ಪಂದ್ಯಗಳಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.