For Quick Alerts
ALLOW NOTIFICATIONS  
For Daily Alerts
 

IPL 2023: ಚೆನ್ನೈ ವಿರುದ್ಧ ಡೆಲ್ಲಿ ಸೋತ ಬಳಿಕ ಅಂಕಪಟ್ಟಿ ಹೇಗಿದೆ? ಯಾವ ತಂಡಕ್ಕೆ ಎಷ್ಟನೇ ಸ್ಥಾನ?

IPL 2023: Updated points table after Chennai Super Kings vs Delhi Capitals match

ಇಂದು ( ಮೇ 10) ಚೆನ್ನೈನ ಎಂಎ ಚಿದಂಬರಂ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆಲುವನ್ನು ಕಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 167 ರನ್ ಕಲೆಹಾಕಿ ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗೆಲ್ಲಲು 168 ರನ್‌ಗಳ ಗುರಿಯನ್ನು ನೀಡಿತ್ತು.

ಈ ಗುರಿಯನ್ನು ಬೆನ್ನತ್ತಲು ಯತ್ನಿಸಿ ವಿಫಲವಾದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 140 ರನ್ ಕಲೆಹಾಕಿದೆ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ 27 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

ಹೀಗೆ ಚೆನ್ನೈ ಸೂಪರ್ ಕಿಂಗ್ಸ್ ಈ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಳಿಕ ಅಂಕಪಟ್ಟಿ ಹೇಗಿದೆ, ಯಾವ ಸ್ಥಾನದಲ್ಲಿ ಯಾವ ತಂಡಗಳಿವೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

1. 11 ಪಂದ್ಯಗಳನ್ನಾಡಿ 8 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಗುಜರಾತ್ ಟೈಟನ್ಸ್ ತಂಡ 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
2. 12 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಚೆನ್ನೈ ಸೂಪರ್ ಕಿಂಗ್ಸ್ 15 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
3. 11 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತಿರುವ ಮುಂಬೈ ಇಂಡಿಯನ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

4. 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋಲು ಒಂದು ಪಂದ್ಯದಲ್ಲಿ ಫಲಿತಾಂಶ ಪಡೆಯದ ಲಕ್ನೋ ಸೂಪರ್ ಜೈಂಟ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.
5. 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಜಸ್ಥಾನ್ ರಾಯಲ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
6. 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.
7. 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 10 ಅಂಕಗಳನ್ನು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.

8. 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಪಂಬಾಬ್ ಕಿಂಗ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.
9. 10 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.
10. 11 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

Story first published: Wednesday, May 10, 2023, 23:51 [IST]
Other articles published on May 10, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+