
ಇಂದು ( ಏಪ್ರಿಲ್ 27 ) ಜೈಪುರದ ಸಾವೈ ಮಾನ್‌ಸಿಂಗ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದವು.
ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ಯಶಸ್ವಿ ಜೈಸ್ವಾಲ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 202 ರನ್ ಕಲೆಹಾಕಿ, ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಗೆಲ್ಲಲು 203 ರನ್‌ಗಳ ಗುರಿಯನ್ನು ನೀಡಿತ್ತು. ಆದರೆ ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲಗೊಂಡ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 170 ರನ್ ಕಲೆಹಾಕಿದ್ದು 32 ರನ್‌ಗಳ ಅಂತರದಿಂದ ಸೋಲನ್ನು ಅನುಭವಿಸಿದೆ.
ಈ ಮೂಲಕ ಅಂಕಪಟ್ಟಿಯಲ್ಲಿ ನಂಬರ್ 1 ಸ್ಥಾನದಲ್ಲಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮೂರನೇ ಸ್ಥಾನಕ್ಕೆ ಕುಸಿತ ಕಂಡಿದೆ. ಮೂರನೇ ಸ್ಥಾನದಲ್ಲಿದ್ದ ರಾಜಸ್ಥಾನ್ ರಾಯಲ್ಸ್ ಅಗ್ರಸ್ಥಾನಕ್ಕೇರಿದೆ. ಹಾಗಿದ್ದರೆ ಈ ಪಂದ್ಯ ಮುಕ್ತಾಯವಾದ ಬಳಿಕ ಅಂಕಪಟ್ಟಿಯಲ್ಲಿ ಯಾವ ತಂಡಗಳು ಯಾವ ಸ್ಥಾನದಲ್ಲಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
1. 8 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಜಸ್ಥಾನ್ ರಾಯಲ್ಸ್ ತಂಡ 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
2. 7 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 2 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಗುಜರಾತ್ ಟೈಟನ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
3. 8 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.
4. 7 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.
5. 8 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
6. 7 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಪಂಜಾಬ್ ಕಿಂಗ್ಸ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.
7. 8 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 6 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.
8. 7 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತಿರುವ ಮುಂಬೈ ಇಂಡಿಯನ್ಸ್ ತಂಡ 6 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.
9. 7 ಪಂದ್ಯಗಳನ್ನಾಡಿ ಎರಡು ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ 4 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.
10. 7 ಪಂದ್ಯಗಳನ್ನಾಡಿ ಎರಡು ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 4 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.