
ನಿನ್ನೆ ( ಮೇ 20 ) ಎರಡು ಪಂದ್ಯಗಳು ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಜರುಗಿದವು. ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾದವು ಹಾಗೂ ಎರಡನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾದವು.
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 77 ರನ್‌ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದ ಚೆನ್ನೈ ಸೂಪರ್ ಕಿಂಗ್ಸ್ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಆಕ್ರಮಿಸಿಕೊಂಡು ಪ್ಲೇಆಫ್ ತಲುಪಿದರೆ, ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 1 ರನ್‌ನ ರೋಚಕ ಗೆಲುವು ಸಾಧಿಸಿದ ಲಕ್ನೋ ಸೂಪರ್ ಜೈಂಟ್ಸ್ ಸಹ ಮೂರನೇ ಸ್ಥಾನ ಪಡೆದುಕೊಂಡು ಪ್ಲೇಆಫ್ ತಲುಪಿದೆ.
ಹೀಗೆ ಟೂರ್ನಿಯ 68 ಲೀಗ್ ಹಂತದ ಪಂದ್ಯಗಳು ಮುಕ್ತಾಯವಾದ ಬಳಿಕ ಅಂಕಪಟ್ಟಿಯಲ್ಲಿ ಯಾವ ತಂಡಗಳು ಯಾವ ಸ್ಥಾನದಲ್ಲಿವೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
1. 13 ಪಂದ್ಯಗಳನ್ನಾಡಿ 9 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಗುಜರಾತ್ ಟೈಟನ್ಸ್ ತಂಡ 18 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
2. 14 ಪಂದ್ಯಗಳನ್ನಾಡಿ 8 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಚೆನ್ನೈ ಸೂಪರ್ ಕಿಂಗ್ಸ್ 17 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
3. 14 ಪಂದ್ಯಗಳನ್ನಾಡಿ 8 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಲಕ್ನೋ ಸೂಪರ್ ಜೈಂಟ್ಸ್ ತಂಡ 17 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ.
4. 13 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 14 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.
5. 14 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋತಿರುವ ರಾಜಸ್ಥಾನ್ ರಾಯಲ್ಸ್ ತಂಡ 14 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
6. 13 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಮುಂಬೈ ಇಂಡಿಯನ್ಸ್ ತಂಡ 14 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.
7. 14 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 8 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.
8. 14 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 8 ಪಂದ್ಯಗಳಲ್ಲಿ ಸೋತಿರುವ ಪಂಜಾಬ್ ಕಿಂಗ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದ್ದು, ಟೂರ್ನಿಯಿಂದ ಹೊರಬಿದ್ದಿದೆ.
9. 14 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 9 ಪಂದ್ಯಗಳಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದ್ದು, ಟೂರ್ನಿಯಿಂದ ಹೊರಬಿದ್ದಿದೆ.
10. 13 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 9 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದು, ಟೂರ್ನಿಯಿಂದ ಹೊರಬಿದ್ದಿದೆ.