For Quick Alerts
ALLOW NOTIFICATIONS  
For Daily Alerts
 

IPL 2023: ಡೆಲ್ಲಿ ವಿರುದ್ಧ ಪಂಜಾಬ್ ಸೋತು ಪ್ಲೇಆಫ್‌ನಿಂದ ದೂರ ಸರಿದ ಬಳಿಕ ಹೇಗಿದೆ ಅಂಕಪಟ್ಟಿ?

IPL 2023: Updated points table after Delhi Capitals beats Punjab Kings

ನಿನ್ನೆ ( ಮೇ 17 ) ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 64ನೇ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿ ಡೆಲ್ಲಿ ಕ್ಯಾಪಿಟಲ್ಸ್ 15 ರನ್‌ಗಳ ಭರ್ಜರಿ ಗೆಲುವು ಕಂಡಿದೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 213 ರನ್ ಕಲೆಹಾಕಿ ಎದುರಾಳಿ ಪಂಜಾಬ್ ಕಿಂಗ್ಸ್ ತಂಡಕ್ಕೆ ಗೆಲ್ಲಲು 214 ರನ್‌ಗಳ ಕಠಿಣ ಗುರಿಯನ್ನು ನೀಡಿತ್ತು. ಈ ಕಠಿಣ ಗುರಿಯನ್ನು ಬೆನ್ನತ್ತುವಲ್ಲಿ ವಿಫಲಗೊಂಡ ಪಂಜಾಬ್ ಕಿಂಗ್ಸ್ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 198 ರನ್ ಕಲೆಹಾಕಿತು.

ಈ ಗೆಲುವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ಟೂರ್ನಿಯಲ್ಲಿ ತನ್ನ ಐದನೇ ಗೆಲುವನ್ನು ದಾಖಲಿಸಿ ಅಂಕಪಟ್ಟಿಯಲ್ಲಿ ಒಂದು ಹಂತ ಏರಿಕೆ ಕಂಡಿದೆ. ಅಲ್ಲದೇ ಈಗಾಗಲೇ ಪ್ಲೇಆಫ್ ಪ್ರವೇಶಿಸುವ ಅರ್ಹತೆ ಕಳೆದುಕೊಂಡಿರುವ ಡೆಲ್ಲಿ ಕ್ಯಾಪಿಟಲ್ಸ್ ಪಂಜಾಬ್ ಕಿಂಗ್ಸ್ ತಂಡದ ಪ್ಲೇಆಫ್ ಕನಸಿಗೂ ಸಹ ಈ ಗೆಲುವಿನ ಮೂಲಕ ತಣ್ಣೀರೆರಚಿದೆ.

ಹೌದು, ಉಳಿದೆರಡು ಪಂದ್ಯಗಳನ್ನು ಗೆದ್ದು ಪ್ಲೇಆಫ್ ಪ್ರವೇಶಿಸುವ ಆಸೆಯನ್ನು ಹೊತ್ತಿದ್ದ ಪಂಜಾಬ್ ಕಿಂಗ್ಸ್ ತಂಡ ಈ ಪಂದ್ಯದಲ್ಲಿ ಸೋಲುವ ಮೂಲಕ ಪ್ಲೇಆಫ್ ಹಾದಿಯನ್ನು ಮತ್ತಷ್ಟು ಕಠಿಣಪಡಿಸಿಕೊಂಡಿದ್ದು ಪ್ಲೇಆಫ್ ರೇಸ್‌ನಿಂದ ಬಹುತೇಕ ದೂರ ಉಳಿದಿದೆ.

ಈ ಪಂದ್ಯ ಮುಕ್ತಾಯವಾದ ಬಳಿಕ ಅಂಕಪಟ್ಟಿಯಲ್ಲಿ ಯಾವ ತಂಡ ಎಷ್ಟು ಅಂಕಗಳನ್ನು ಪಡೆದುಕೊಂಡು ಎಷ್ಟನೇ ಸ್ಥಾನದಲ್ಲಿದೆ ಎಂಬ ಮಾಹಿತಿ ಈ‌ ಕೆಳಕಂಡಂತಿದೆ..

1. 13 ಪಂದ್ಯಗಳನ್ನಾಡಿ 9 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಗುಜರಾತ್ ಟೈಟನ್ಸ್ ತಂಡ 18 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
2. 13 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಚೆನ್ನೈ ಸೂಪರ್ ಕಿಂಗ್ಸ್ 15 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
3. 13 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಲಕ್ನೋ ಸೂಪರ್ ಜೈಂಟ್ಸ್ ತಂಡ 15 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ.

4. 13 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತಿರುವ ಮುಂಬೈ ಇಂಡಿಯನ್ಸ್ ತಂಡ 14 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.
5. 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
6. 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಜಸ್ಥಾನ್ ರಾಯಲ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.
7. 13 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.
8. 13 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋತಿರುವ ಪಂಜಾಬ್ ಕಿಂಗ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.
9. 13 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 8 ಪಂದ್ಯಗಳಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.
10. 12 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 8 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

Story first published: Thursday, May 18, 2023, 15:30 [IST]
Other articles published on May 18, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+