
ನಿನ್ನೆ ( ಮೇ 15 ) ಅಹ್ಮದಾಬಾದ್ ನಗರದಲ್ಲಿರುವ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಗುಜರಾತ್ ಟೈಟನ್ಸ್ 34 ರನ್ನುಗಳ ಅಂತರದಿಂದ ಗೆದ್ದು ಅಧಿಕೃತವಾಗಿ ಪ್ಲೇಆಫ್ ಪ್ರವೇಶಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ ಶುಭ್‌ಮನ್ ಗಿಲ್ ಅಬ್ಬರದ ಶತಕದ ನೆರವಿನಿಂದ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 188 ರನ್ ಕಲೆಹಾಕಿ ಎದುರಾಳಿ ಸನ್ ರೈಸರ್ಸ್ ಹೈದರಾಬಾದ್‌ಗೆ 189 ರನ್‌ಗಳ ಕಠಿಣ ಗುರಿಯನ್ನು ನೀಡಿತ್ತು.
ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾದ ಸನ್ ರೈಸರ್ಸ್ ಹೈದರಾಬಾದ್ ತಂಡ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿತು. ಈ ಸೋಲಿನೊಂದಿಗೆ ಸನ್ ರೈಸರ್ಸ್ ಹೈದರಾಬಾದ್ ಅಧಿಕೃತವಾಗಿ ಟೂರ್ನಿಯಿಂದ ಹೊರಬಿದ್ದರೆ, ಗುಜರಾತ್ ಟೈಟನ್ಸ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪ್ಲೇಆಫ್ ಸುತ್ತಿಗೆ ಲಗ್ಗೆ ಇಟ್ಟ ಮೊದಲ ತಂಡ ಎನಿಸಿಕೊಂಡಿತು.
ಹೀಗೆ ಗುಜರಾತ್ ಟೈಟನ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯ ಮುಕ್ತಾಯವಾದ ಬಳಿಕ ಅಂಕಪಟ್ಟಿ ಹೇಗಿದೆ ಎಂಬ ಮಾಹಿತಿ ಕೆಳಕಂಡಂತಿದೆ..
1. 13 ಪಂದ್ಯಗಳನ್ನಾಡಿ 9 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಗುಜರಾತ್ ಟೈಟನ್ಸ್ ತಂಡ 18 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
2. 13 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಚೆನ್ನೈ ಸೂಪರ್ ಕಿಂಗ್ಸ್ 15 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
3. 12 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತಿರುವ ಮುಂಬೈ ಇಂಡಿಯನ್ಸ್ ತಂಡ 14 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.
4. 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಲಕ್ನೋ ಸೂಪರ್ ಜೈಂಟ್ಸ್ ತಂಡ 13 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.
5. 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
6. 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಜಸ್ಥಾನ್ ರಾಯಲ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.
7. 13 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.
8. 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಪಂಜಾಬ್ ಕಿಂಗ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.
9. 12 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 8 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.
10. 12 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 8 ಪಂದ್ಯಗಳಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.