
ನಿನ್ನೆ ( ಮೇ 12 ) ಮುಂಬೈನ ವಾಂಖೆಡೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಹಾಲಿ ಚಾಂಪಿಯನ್ಸ್ ಗುಜರಾತ್ ಟೈಟನ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 27 ರನ್‌ಗಳ ಭರ್ಜರಿ ಗೆಲುವನ್ನು ಕಂಡಿದೆ.
ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ಸೂರ್ಯಕುಮಾರ್ ಯಾದವ್ ಅಬ್ಬರದ ಶತಕದ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 218 ರನ್ ಗಳಿಸಿ ಎದುರಾಳಿ ಗುಜರಾತ್ ಟೈಟನ್ಸ್ ತಂಡಕ್ಕೆ ಗೆಲ್ಲಲು 219 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲಗೊಂಡ ಗುಜರಾತ್ ಟೈಟನ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 191 ರನ್ ಕಲೆಹಾಕಿ ಸೋಲನ್ನು ಕಂಡಿತು.
ಈ ಮೂಲಕ ಟೇಬಲ್ ಟಾಪರ್ಸ್ ಗುಜರಾತ್ ಟೈಟನ್ಸ್ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ನಾಲ್ಕನೇ ಸೋಲನ್ನು ಕಂಡಿದ್ದು, ಮುಂಬೈ ಇಂಡಿಯನ್ಸ್ ತನ್ನ ಏಳನೇ ಗೆಲುವನ್ನು ಕಂಡು ಪ್ಲೇಆಫ್ ಹಾದಿಯನ್ನು ಮತ್ತಷ್ಟು ಸುಲಭ ಮಾಡಿಕೊಂಡಿದೆ. ಈ ಪಂದ್ಯ ಮುಕ್ತಾಯವಾದ ಬಳಿಕ ಯಾವ ತಂಡಗಳು ಎಷ್ಟು ಅಂಕಗಳನ್ನು ಪಡೆದುಕೊಂಡು ಎಷ್ಟನೇ ಸ್ಥಾನದಲ್ಲಿವೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
1. 12 ಪಂದ್ಯಗಳನ್ನಾಡಿ 8 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಗುಜರಾತ್ ಟೈಟನ್ಸ್ ತಂಡ 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
2. 12 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಚೆನ್ನೈ ಸೂಪರ್ ಕಿಂಗ್ಸ್ 15 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
3. 12 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತಿರುವ ಮುಂಬೈ ಇಂಡಿಯನ್ಸ್ ತಂಡ 14 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.
4. 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ರಾಜಸ್ಥಾನ್ ರಾಯಲ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.
5. 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಲಕ್ನೋ ಸೂಪರ್ ಜೈಂಟ್ಸ್ ತಂಡ 11 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
6. 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.
7. 12 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 10 ಅಂಕಗಳನ್ನು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.
8. 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಪಂಬಾಬ್ ಕಿಂಗ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.
9. 10 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.
10. 11 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.