Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023: ಲಕ್ನೋ ವಿರುದ್ಧ ಸೋತು ಅಂಕಪಟ್ಟಿಯಲ್ಲಿ ಕುಸಿತ ಕಂಡ ಮುಂಬೈ ಇಂಡಿಯನ್ಸ್

IPL 2023: Updated points table after Mumbai Indians vs Lucknow Super Giants match

ಇಂದು ( ಮೇ 16 ) ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 63ನೇ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿ ಲಕ್ನೋ ಸೂಪರ್ ಜೈಂಟ್ಸ್ 5 ರನ್‌ಗಳ ರೋಚಕ ಗೆಲುವು ಕಂಡಿದೆ.

ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡು ಎದುರಾಳಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದರು.

ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ಮಾರ್ಕಸ್ ಸ್ಟಾಯಿನಿಸ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 177 ರನ್ ಕಲೆಹಾಕಿ ಎದುರಾಳಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಗೆಲ್ಲಲು 178 ರನ್‌ಗಳ ಗುರಿಯನ್ನು ನೀಡಿತ್ತು.

ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲಗೊಂಡ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 172 ರನ್ ಕಲೆಹಾಕಿತು. ಈ ಮೂಲಕ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದ ಲಕ್ನೋ ಸೂಪರ್ ಜೈಂಟ್ಸ್ ಮೂರನೇ ಸ್ಥಾನಕ್ಕೆ ಏರಿಕೆ ಕಂಡಿದ್ದು, ಮೂರನೇ ಸ್ಥಾನದಲ್ಲಿದ್ದ ಮುಂಬೈ ಇಂಡಿಯನ್ಸ್ ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡಿದೆ.

ಈ ಪಂದ್ಯ ಮುಕ್ತಾಯವಾದ ಬಳಿಕ ಅಂಕಪಟ್ಟಿಯಲ್ಲಿ ಯಾವ ತಂಡ ಎಷ್ಟು ಅಂಕಗಳನ್ನು ಪಡೆದುಕೊಂಡು ಎಷ್ಟನೇ ಸ್ಥಾನದಲ್ಲಿದೆ ಎಂಬ ಮಾಹಿತಿ ಈ‌ ಕೆಳಕಂಡಂತಿದೆ..

1. 13 ಪಂದ್ಯಗಳನ್ನಾಡಿ 9 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಗುಜರಾತ್ ಟೈಟನ್ಸ್ ತಂಡ 18 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
2. 13 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಚೆನ್ನೈ ಸೂಪರ್ ಕಿಂಗ್ಸ್ 15 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
3. 13 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಲಕ್ನೋ ಸೂಪರ್ ಜೈಂಟ್ಸ್ ತಂಡ 15 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ.

4. 13 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತಿರುವ ಮುಂಬೈ ಇಂಡಿಯನ್ಸ್ ತಂಡ 14 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.
5. 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
6. 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಜಸ್ಥಾನ್ ರಾಯಲ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.
7. 13 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.
8. 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಪಂಜಾಬ್ ಕಿಂಗ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.
9. 12 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 8 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.
10. 12 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 8 ಪಂದ್ಯಗಳಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

Story first published: Tuesday, May 16, 2023, 23:50 [IST]
Other articles published on May 16, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+