
ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 56ನೇ ಪಂದ್ಯದಲ್ಲಿ ಇಂದು ( ಮೇ 11 ) ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದ್ದು, ರಾಜಸ್ಥಾನ್ ರಾಯಲ್ಸ್ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಗೆಲವನ್ನು ಸಾಧಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 149 ರನ್ ಕಲೆಹಾಕಿ ಎದುರಾಳಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 150 ರನ್‌ಗಳ ಗುರಿಯನ್ನು ನೀಡಿತ್ತು.
ಈ ಗುರಿಯನ್ನು ಕೇವಲ 13.1 ಓವರ್‌ಗಳಲ್ಲಿಯೇ ಬೆನ್ನತ್ತಿರುವ ರಾಜಸ್ಥಾನ್ ರಾಯಲ್ಸ್ 9 ವಿಕೆಟ್‌ಗಳ ಭರ್ಜರಿ ಗೆಲುವನ್ನು ಸಾಧಿಸಿದೆ. ಹೌದು, ಯಶಸ್ವಿ ಜೈಸ್ವಾಲ್ ಹಾಗೂ ನಾಯಕ ಸಂಜು ಸ್ಯಾಮ್ಸನ್ ಅಬ್ಬರದ ಆಟದ ನೆರವಿನಿಂದ ರಾಜಸ್ಥಾನ್ ರಾಯಲ್ಸ್ 13.1 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 151 ರನ್ ಕಲೆಹಾಕಿದೆ.
ಈ ಗೆಲುವಿನ ಮೂಲಕ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದ ರಾಜಸ್ಥಾನ್ ರಾಯಲ್ಸ್ ಮೂರನೇ ಸ್ಥಾನಕ್ಕೆ ಏರಿಕೆ ಕಂಡಿದ್ದು, ಮೊನ್ನೆಯಷ್ಟೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಭರ್ಜರಿ ಗೆಲುವು ಕಂಡು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ಅಲಂಕರಿಸಿದ್ದ ಮುಂಬೈ ಇಂಡಿಯನ್ಸ್ ಕುರಿತ ಕಂಡಿದೆ.
ಅಲ್ಲದೇ ಈ ಹೀನಾಯ ಸೋಲಿನೊಂದಿಗೆ ನೆಟ್ ರನ್ ರೇಟ್ ಕಳೆದುಕೊಂಡ ಕೊಲ್ಕತ್ತಾ ನೈಟ್ ರೈಡರ್ಸ್ ಕುಸಿತ ಕಂಡಿದ್ದು ಏಳನೇ ಸ್ಥಾನದಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆರನೇ ಸ್ಥಾನಕ್ಕೆ ಏರಿಕೆ ಕಂಡಿದೆ. ಹೀಗೆ ಈ ಪಂದ್ಯದ ಬಳಿಕ ಅಂಕಪಟ್ಟಿಯಲ್ಲಿ ಅನೇಕ ಬದಲಾವಣೆಗಳು ಆಗಿದ್ದು, ಯಾವ ತಂಡ ಎಷ್ಟು ಪಂದ್ಯಗಳನ್ನು ಗೆದ್ದು, ಎಷ್ಟು ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಯಾವ ಸ್ಥಾನದಲ್ಲಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
1. 11 ಪಂದ್ಯಗಳನ್ನಾಡಿ 8 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಗುಜರಾತ್ ಟೈಟನ್ಸ್ ತಂಡ 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
2. 12 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಚೆನ್ನೈ ಸೂಪರ್ ಕಿಂಗ್ಸ್ 15 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
3. 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ರಾಜಸ್ಥಾನ್ ರಾಯಲ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.
4. 11 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತಿರುವ ಮುಂಬೈ ಇಂಡಿಯನ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.
5. 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಲಕ್ನೋ ಸೂಪರ್ ಜೈಂಟ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
6. 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.
7. 12 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 10 ಅಂಕಗಳನ್ನು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.
8. 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಪಂಬಾಬ್ ಕಿಂಗ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.
9. 10 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.
10. 11 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.