For Quick Alerts
ALLOW NOTIFICATIONS  
For Daily Alerts
 

RCB vs RR: ರಾಜಸ್ಥಾನ್ ವಿರುದ್ಧ 112 ರನ್‌ಗಳ ಭರ್ಜರಿ ಜಯ ಸಾಧಿಸಿ ಅಂಕಪಟ್ಟಿಯಲ್ಲಿ ಭಾರೀ ಏರಿಕೆ ಕಂಡ ಆರ್‌ಸಿಬಿ

IPL 2023: Updated points table after RCB beats Rajasthan Royals by 112 runs

ಇಂದು ( ಮೇ 14 ) ಜೈಪುರದ ಜೈಪುರದ ಸಾವೈ ಮಾನ್ ಸಿಂಗ್ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 112 ರನ್‌ಗಳ ಭರ್ಜರಿ ಗೆಲುವನ್ನು ಕಂಡಿದೆ.

ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ಫಾಫ್ ಡು ಪ್ಲೆಸಿಸ್ ಕೈ ಹಿಡಿದ ಕಾರಣ 5 ವಿಕೆಟ್ ನಷ್ಟಕ್ಕೆ 171 ರನ್ ಕಲೆಹಾಕಿ ಎದುರಾಳಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಗೆಲ್ಲಲು 172 ರನ್‌ಗಳ ಗುರಿಯನ್ನು ನೀಡಿತು.

ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲಗೊಂಡ ರಾಜಸ್ಥಾನ್ ರಾಯಲ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲಿಂಗ್ ದಾಳಿಗೆ ನಲುಗಿ 10.3 ಓವರ್‌ಗಳಲ್ಲಿ ಕೇವಲ 59 ರನ್‌ಗಳಿಗೆ ಆಲ್ಔಟ್ ಆಗಿದೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು 112 ರನ್‌ಗಳ ಬೃಹತ್ ಜಯವನ್ನು ಸಾಧಿಸಿದೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂಕಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ಏರಿಕೆ ಕಂಡಿದ್ದು ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.

ಹೌದು, ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಗೆಲುವಿನಿಂದ ಎರಡು ಅಂಕಗಳನ್ನು ಪಡೆದುಕೊಳ್ಳುವುದು ಮಾತ್ರವಲ್ಲದೇ ನೆಟ್ ರನ್ ರೇಟ್‌ನಲ್ಲಿಯೂ ಬೃಹತ್ ಗಳಿಕೆ ಸಾಧಿಸಿ ಐದನೇ ಸ್ಥಾನಕ್ಕೆ ಏರಿಕೆ ಕಂಡಿದೆ. ಹೀಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ರಚಂಡ ಗೆಲುವು ಸಾಧಿಸಿದ ಬಳಿಕ ಅಂಕಪಟ್ಟಿ ಹೇಗಿದೆ, ಯಾವ ತಂಡ ಎಷ್ಟು ಅಂಕಗಳನ್ನು ಪಡೆದುಕೊಂಡು ಎಷ್ಟನೇ ಸ್ಥಾನದಲ್ಲಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

1. 12 ಪಂದ್ಯಗಳನ್ನಾಡಿ 8 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಗುಜರಾತ್ ಟೈಟನ್ಸ್ ತಂಡ 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
2. 12 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಚೆನ್ನೈ ಸೂಪರ್ ಕಿಂಗ್ಸ್ 15 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

3. 12 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತಿರುವ ಮುಂಬೈ ಇಂಡಿಯನ್ಸ್ ತಂಡ 14 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.
4. 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಲಕ್ನೋ ಸೂಪರ್ ಜೈಂಟ್ಸ್ ತಂಡ 13 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.

5. 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
6. 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಜಸ್ಥಾನ್ ರಾಯಲ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.

7. 12 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಪಂಜಾಬ್ ಕಿಂಗ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.
8. 12 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋತಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.

9. 11 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.
10. 12 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 8 ಪಂದ್ಯಗಳಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

Story first published: Sunday, May 14, 2023, 19:17 [IST]
Other articles published on May 14, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+