
ಇಂದು ( ಮೇ 7 ) ಭಾನುವಾರ ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ 51 ಹಾಗೂ 52ನೇ ಪಂದ್ಯಗಳು ನಡೆದವು. ಮೊದಲ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗುಜರಾತ್ ಟೈಟನ್ಸ್ 56 ರನ್‌ಗಳ ಭರ್ಜರಿ ಗೆಲುವು ಸಾಧಿಸಿದರೆ, ಎರಡನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ರಾಜಸ್ಥಾನ್ ರಾಯಲ್ಸ್ ವಿರುದ್ಧ 4 ವಿಕೆಟ್‌ಗಳ ಭರ್ಜರಿ ಗೆಲುವು ಕಂಡಿದೆ.
ಗುಜರಾತ್ ಟೈಟನ್ಸ್ ಸರಾಗವಾಗಿ ಗೆಲುವು ಸಾಧಿಸುವುದರ ಮೂಲಕ ನಿರೀಕ್ಷೆಯಂತೆ ಮತ್ತೆರಡು ಅಂಕಗಳನ್ನು ಪಡೆದುಕೊಂಡು ಪ್ಲೇಆಫ್‌ಗೆ ಮತ್ತಷ್ಟು ಸನಿಹವಾದರೆ, ಎರಡನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ರಾಜಸ್ಥಾನ್ ರಾಯಲ್ಸ್ ತಂಡ ನೀಡಿದ್ದ 215 ರನ್‌ಗಳ ಟಾರ್ಗೆಟ್ ಅನ್ನು ಬೆನ್ನತ್ತುವ ಮೂಲಕ ಆಶ್ಚರ್ಯ ಮೂಡಿಸಿದೆ ಹಾಗೂ ದೊಡ್ಡ ಮಟ್ಟದಲ್ಲಿ ಕಮ್‌ಬ್ಯಾಕ್ ಮಾಡಿದೆ.
ಈ ಗೆಲುವುಗಳ ಮೂಲಕ ಅಂಕಪಟ್ಟಿಯಲ್ಲಿ ಕೆಲ ಬದಲಾವಣೆಗಳಾಗಿವೆ. ಸನ್ ರೈಸರ್ಸ್ ಹೈದರಾಬಾದ್ ತಂಡ ಅಂಕಪಟ್ಟಿಯಲ್ಲಿ ಹತ್ತನೇ ಸ್ಥಾನದಿಂದ ಒಂಬತ್ತನೇ ಸ್ಥಾನಕ್ಕೆ ಏರಿಕೆ ಕಂಡಿದೆ. ಸೋತ ರಾಜಸ್ಥಾನ್ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಇದ್ದ ಸ್ಥಾನಗಳಲ್ಲಿಯೇ ಇದ್ದು ಒಂಬತ್ತನೇ ಸ್ಥಾನದಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮಾತ್ರ ಒಂಬತ್ತರಿಂದ ಹತ್ತನೇ ಸ್ಥಾನಕ್ಕೆ ಕುಸಿದಿದೆ.
ಈ ಎರಡು ಪಂದ್ಯಗಳ ಮುಕ್ತಾಯದ ನಂತರ ಐಪಿಎಲ್ ಅಂಕಪಟ್ಟಿ ಹೇಗಿದೆ ಹಾಗೂ ಯಾವ ತಂಡಗಳು ಯಾವ ಸ್ಥಾನದಲ್ಲಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..
1. 11 ಪಂದ್ಯಗಳನ್ನಾಡಿ 8 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಗುಜರಾತ್ ಟೈಟನ್ಸ್ ತಂಡ 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
2. 11 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಚೆನ್ನೈ ಸೂಪರ್ ಕಿಂಗ್ಸ್ 13 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
3. 10 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಲಕ್ನೋ ಸೂಪರ್ ಜೈಂಟ್ಸ್ ತಂಡ 11 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.
4. 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಜಸ್ಥಾನ್ ರಾಯಲ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.
5. 10 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 5ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
6. 10 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 5ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಮುಂಬೈ ಇಂಡಿಯನ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.
7. 10 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 5ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಪಂಜಾಬ್ ಕಿಂಗ್ಸ್ ತಂಡ 10 ಅಂಕಗಳನ್ನು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.
8. 10 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಕೊಲ್ಕತ್ತಾ ನೈಟ್ ರೈಡರ್ಸ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.
9. 10 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.
10. 10 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.