
ಪ್ರಸ್ತುತ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದ ಪಂದ್ಯಗಳ 40 ಪಂದ್ಯಗಳು ನಿನ್ನೆಗೆ ( ಏಪ್ರಿಲ್ 29 ) ಮುಕ್ತಾಯಗೊಂಡಿವೆ. ನಿನ್ನೆ ಎರಡು ಪಂದ್ಯಗಳು ಜರುಗಿದ್ದು, ಮೊದಲು ನಡೆದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಗುಜರಾತ್ ಟೈಟನ್ಸ್ ಗೆದ್ದರೆ, ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ಗೆಲುವನ್ನು ಕಂಡಿತು.
ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯದ ಫಲಿತಾಂಶ ಅಂಕಪಟ್ಟಿಯಲ್ಲಿ ಹೆಚ್ಚೇನೂ ಪರಿಣಾಮವನ್ನು ಬೀರಲಿಲ್ಲ. ಆದರೆ ಅದಕ್ಕೂ ಮುನ್ನ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಪಂದ್ಯ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆಗೆ ಕಾರಣವಾಯಿತು. ಹೌದು, ಈ ಗೆಲುವಿನ ಮೂಲಕ ಗುಜರಾತ್ ಟೈಟನ್ಸ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಚೆನ್ನೈ ಸೂಪರ್ ಕಿಂಗ್ಸ್ ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡಿತು.
ಹೀಗೆ ಟೂರ್ನಿಯ 40 ಪಂದ್ಯಗಳು ಮುಗಿದ ಬಳಿಕ ಅಂಕಪಟ್ಟಿಯಲ್ಲಿ ಯಾವ ತಂಡಗಳು ಯಾವ ಸ್ಥಾನದಲ್ಲಿದೆ ಹಾಗೂ ಎಷ್ಟು ಅಂಕಗಳನ್ನು ಪಡೆದುಕೊಂಡಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ.
1. 8 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 2 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಗುಜರಾತ್ ಟೈಟನ್ಸ್ ತಂಡ 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
2. 8 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಜಸ್ಥಾನ್ ರಾಯಲ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
3. 8 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.
4. 8 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 3 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.
5. 8 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
6. 8 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋಲನ್ನು ಕಂಡಿರುವ ಪಂಜಾಬ್ ಕಿಂಗ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.
7. 9 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 6 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.
8. 8 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ 6 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.
9. 7 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋತಿರುವ ಮುಂಬೈ ಇಂಡಿಯನ್ಸ್ ತಂಡ 6 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.
10. 8 ಪಂದ್ಯಗಳನ್ನಾಡಿ 2 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 4 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.
8 ಪಂದ್ಯಗಳಲ್ಲಿ 14 ವಿಕೆಟ್ ಪಡೆದುಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೊಹಮ್ಮದ್ ಸಿರಾಜ್ ಪರ್ಪಲ್ ಕ್ಯಾಪ್ ಹೋಲ್ಡರ್ ಎನಿಸಿಕೊಂಡಿದ್ದರೆ, 8 ಪಂದ್ಯಗಳನ್ನಾಡಿ 422 ರನ್ ಗಳಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫಾಫ್ ಡು ಪ್ಲೆಸಿಸ್ ಆರೆಂಜ್ ಕ್ಯಾಪ್ ಹೋಲ್ಡರ್ ಆಗಿದ್ದಾರೆ.