
ನಿನ್ನೆ ( ಮೇ 6 ) ದೆಹಲಿಯ ಅರುಣ್ ಜೇಟ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವೆ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ತಂಡ ತಂಡದ ವಿರುದ್ಧ ಅಂತರದ ಗೆಲುವನ್ನು ಸಾಧಿಸಿತು.
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆರಂಭಿಕ ಆಟಗಾರರಾಗಿ ನಾಯಕ ಫಾಫ್ ಡು ಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಕಣಕ್ಕಿಳಿದರು. ಡು ಪ್ಲೆಸಿಸ್ 32 ಎಸೆತಗಳಲ್ಲಿ 45 ರನ್ ಬಾರಿಸಿದರೆ, ವಿರಾಟ್ ಕೊಹ್ಲಿ 46 ಎಸೆತಗಳಲ್ಲಿ 55 ರನ್ ಬಾರಿಸಿದರು.
ಈ ಮೂಲಕ ವಿರಾಟ್ ಕೊಹ್ಲಿ ತಂಡಕ್ಕೆ ಉತ್ತಮ ಆಟದ ಮೂಲಕ ಆಸರೆಯಾಗಿದ್ದು ಮಾತ್ರವಲ್ಲದೇ ಮೂರು ದಾಖಲೆಗಳನ್ನೂ ಸಹ ನಿರ್ಮಿಸಿದ್ದಾರೆ. ವಿರಾಟ್ ಕೊಹ್ಲಿ ನಿರ್ಮಿಸಿದ ದಾಖಲೆಗಳ ಪಟ್ಟಿ ಈ ಕೆಳಕಂಡಂತಿದೆ..
1. 7000 ಐಪಿಎಲ್ ರನ್ಸ್
ವಿರಾಟ್ ಕೊಹ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕಣಕ್ಕಿಳಿದ ಈ ಪಂದ್ಯ ಕೊಹ್ಲಿಯ 233ನೇ ಐಪಿಎಲ್ ಪಂದ್ಯವಾಗಿದ್ದು, ಈ ಪಂದ್ಯದ ಮೂಲಕ ಕೊಹ್ಲಿ 7000 ಐಪಿಎಲ್ ರನ್‌ಗಳನ್ನು ಪೂರೈಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ದಾಖಲೆ ಬರೆದರು. ಈ ಪಂದ್ಯದಲ್ಲಿ ಅರ್ಧಶಕತ ಬಾರಿಸಿದ ಕೊಹ್ಲಿ ಒಟ್ಟು 7043 ರನ್‌ಗಳನ್ನು ಸದ್ಯಕ್ಕೆ ತಮ್ಮ ಖಾತೆಯಲ್ಲಿ ಹೊಂದಿದ್ದಾರೆ.
ಅತಿಹೆಚ್ಚು ರನ್ ಬಾರಿಸಿದ ಐವರು ಬ್ಯಾಟ್ಸ್‌ಮನ್‌ಗಳು:
1. ವಿರಾಟ್ ಕೊಹ್ಲಿ - 7043 ರನ್
2. ಶಿಖರ್ ಧವನ್ - 6536 ರನ್
3. ಡೇವಿಡ್ ವಾರ್ನರ್ - 6211 ರನ್
4. ರೋಹಿತ್ ಶರ್ಮಾ - 6063 ರನ್
5. ಸುರೇಶ್ ರೈನಾ - 5528 ರನ್
2. ಸೀಸನ್‌ನಲ್ಲಿ ಅತಿಹೆಚ್ಚು ಅರ್ಧಶತಕ
ಇನ್ನು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಒಟ್ಟು 10 ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡಿರುವ ವಿರಾಟ್ ಕೊಹ್ಲಿ 6 ಬಾರಿ ಅರ್ಧಶತಕ ಬಾರಿಸಿದ್ದಾರೆ. ಈ ಮೂಲಕ ಸದ್ಯ ಈ ಬಾರಿ ಐಪಿಎಲ್‌ನಲ್ಲಿ ಅತಿಹೆಚ್ಚು ಬಾರಿ ಅರ್ಧಶತಕ ಬಾರಿಸಿದ ಆಟಗಾರ ಎಂಬ ಮೈಲಿಗಲ್ಲನ್ನು ಕೊಹ್ಲಿ ನೆಟ್ಟಿದ್ದಾರೆ.
ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅತಿಹೆಚ್ಚು ಅರ್ಧಶತಕ ಬಾರಿಸಿದ ಐದು ತಂಡಗಳ ಪಟ್ಟಿ ಈ ಕೆಳಕಂಡಂತಿದೆ..
1. ವಿರಾಟ್ ಕೊಹ್ಲಿ - 10 ಪಂದ್ಯಗಳಲ್ಲಿ 6 ಅರ್ಧಶತಕಗಳು
2. ಡಿವಾನ್ ಕಾನ್ವೆ - 10 ಪಂದ್ಯಗಳಲ್ಲಿ 5 ಅರ್ಧಶತಕಗಳು
3. ಫಾಫ್ ಡು ಪ್ಲೆಸಿಸ್ - 10 ಪಂದ್ಯಗಳಲ್ಲಿ 5 ಅರ್ಧಶತಕಗಳು
4. ಡೇವಿಡ್ ವಾರ್ನರ್ - 10 ಪಂದ್ಯಗಳಲ್ಲಿ 4 ಅರ್ಧಶತಕಗಳು
5. ಕೈಲ್ ಮೇಯರ್ಸ್ - 10 ಪಂದ್ಯಗಳಲ್ಲಿ 4 ಅರ್ಧಶತಕಗಳು
3. ತಂಡವೊಂದರ ವಿರುದ್ಧ 1000 ರನ್
ಈ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಮತ್ತೊಂದು ವಿಶಿಷ್ಟ ದಾಖಲೆ ಬರೆದಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 1000 ರನ್‌ಗಳನ್ನು ಬಾರಿಸಿದ ಮೈಲಿಗಲ್ಲನ್ನು ನೆಟ್ಟ ಕೊಹ್ಲಿ ಈ ದಾಖಲೆ ಬರೆದ ಮೊದಲಿಗ ಎನಿಸಿಕೊಂಡಿದ್ದಾರೆ. ಅಷ್ಟೆ ಅಲ್ಲದೇ ಐಪಿಎಲ್ ಇತಿಹಾಸದಲ್ಲಿ ನಿರ್ದಿಷ್ಟ ತಂಡವೊಂದರ ವಿರುದ್ಧ 1000 ರನ್‌ಗಳನ್ನು ಪೂರೈಸಿದ ಭಾರತದ ಏಕೈಕ ಆಟಗಾರ ಎಂಬ ದಾಖಲೆಯನ್ನು ಕೊಹ್ಲಿ ನಿರ್ಮಿಸಿದ್ದಾರೆ.