Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

RCB vs LSG: ಕೊಹ್ಲಿ, ಮ್ಯಾಕ್ಸಿ, ಡುಪ್ಲೆಸಿಸ್ ಅಬ್ಬರ: ಬೃಹತ್ ಮೊತ್ತ ಕಲೆಹಾಕಿದ ಆರ್‌ಸಿಬಿ

ಚಿನ್ನಸ್ವಾಮಿ ಅಂಗಳದಲ್ಲಿ ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್, ಮ್ಯಾಕ್ಸ್‌ವೆಲ್ ಅಬ್ಬರಿಸಿದರು. ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 20 ಓವರ್ ಗಳಲ್ಲಿ2 ವಿಕೆಟ್ ಕಳೆದುಕೊಂಡು 212 ರನ್ ಕಲೆಹಾಕಿದೆ. ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು.

ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ತಂಡಕ್ಕೆ ವಿರಾಟ್ ಕೊಹ್ಲಿ ಮತ್ತು ಫಾಫ್ ಡುಪ್ಲೆಸಿಸ್ ಉತ್ತಮ ಆರಂಭ ಒದಗಿಸಿದರು. ವಿರಾಟ್ ಕೊಹ್ಲಿ ಆರಂಭದಿಂದಲೇ ವೇಗವಾಗಿ ರನ್ ಗಳಿಸಿದರೆ, ಫಾಫ್ ಡುಪ್ಲೆಸಿಸ್ ಎಚ್ಚರಿಕೆಯ ಬ್ಯಾಟಿಂಗ್ ಮಾಡಿದರು. ಈ ಜೋಡಿ ಮೊದಲನೇ ವಿಕೆಟ್‌ಗೆ 11.3 ಓವರ್ ಗಳಲ್ಲಿ 96 ರನ್ ಕಲೆಹಾಕಿತು. ವಿರಾಟ್ ಕೊಹ್ಲಿ 44 ಎಸೆತಗಳಲ್ಲಿ 4 ಬೌಂಡರಿ 4 ಸಿಕ್ಸರ್ ಸಹಿತ 61 ರನ್ ಗಳಿಸಿ ಔಟಾದರು.

 Virat Kohli, DuPlessis

ಆರಂಭದಲ್ಲಿ ಎಚ್ಚರಿಕೆಯಿಂದ ಬ್ಯಾಟಿಂಗ್ ಮಾಡಿದ ಫಾಫ್ ಡುಪ್ಲೆಸಿಸ್ ನಂತರ ಅಬ್ಬರಿಸಿದರು. ರವಿ ಬಿಷ್ಣೋಯಿ ಓವರ್ ನಲ್ಲಿ 115 ಮೀಟರ್ ಸಿಕ್ಸರ್ ಸಿಡಿಸಿ ಮಿಂಚಿದರು. 46 ಎಸೆತಗಳಲ್ಲಿ 5 ಬೌಂಡರಿ 5 ಸಿಕ್ಸರ್ ಸಹಿತ ಅಜೇಯ 79 ರನ್ ಗಳಿಸಿದರು. ಮೊದಲ ಪಂದ್ಯದಲ್ಲಿ ಆಡಿದ್ದ ಆಟವನ್ನೇ ಇಂದಿನ ಪಂದ್ಯದಲ್ಲಿ ಮುಂದುವರೆಸಿದರು.

ಮತ್ತೊಂದೆಡೆ ಗ್ಲೆನ್ ಮ್ಯಾಕ್ಸ್‌ವೆಲ್ ಕೂಡ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಕೇವಲ 29 ಎಸೆತಗಳಲ್ಲಿ 3 ಬೌಂಡರಿ ಮತ್ತು 6 ಭರ್ಜರಿ ಸಿಕ್ಸರ್ ಸಹಿತ 59 ರನ್ ಗಳಿಸಿ ಮಿಂಚಿದರು. ಕಳೆದ ಎರಡು ಪಂದ್ಯಗಳಲ್ಲಿ ರನ್‌ ಗಳಿಸಲು ಪರದಾಡಿದ್ದ ಮ್ಯಾಕ್ಸ್‌ವೆಲ್ ಇಂದು ಬೌಂಡರಿಗಳ ಸುರಿಮಳೆಗೈದರು. ಕೊನೆಯ ಓವರ್‍ ನಲ್ಲಿ ಮಾರ್ಕ್‌ವುಡ್ ಬೌಲಿಂಗ್‌ನಲ್ಲಿ ಬೌಲ್ಡ್ ಆದರು.

 Virat Kohli, DuPlessis

ಉಭಯ ತಂಡಗಳ ಆಡುವ ಬಳಗ:

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅನುಜ್ ರಾವತ್, ಡೇವಿಡ್ ವಿಲ್ಲಿ, ವೇಯ್ನ್ ಪಾರ್ನೆಲ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್.

ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ನಾಯಕ), ಕೈಲ್ ಮೇಯರ್ಸ್, ದೀಪಕ್ ಹೂಡಾ, ಮಾರ್ಕಸ್ ಸ್ಟೊಯಿನಿಸ್, ಕೃನಾಲ್ ಪಾಂಡ್ಯ, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಜಯದೇವ್ ಉನದ್ಕತ್, ಅಮಿತ್ ಮಿಶ್ರಾ, ಅವೇಶ್ ಖಾನ್, ಮಾರ್ಕ್ ವುಡ್, ರವಿ ಬಿಷ್ಣೋಯ್.

Story first published: Monday, April 10, 2023, 21:23 [IST]
Other articles published on Apr 10, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+