
2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 16ನೇ ಸೀಸನ್ ಸಮೀಪಿಸುತ್ತಿದ್ದು, ಇದೇ ಮಾರ್ಚ್ 31ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಚಾಲನೆ ಸಿಗಲಿದೆ.
ಕ್ರಿಕೆಟ್ ಅಭಿಮಾನಿಗಳ ಬಹುನಿರೀಕ್ಷಿತ ಪಂದ್ಯಾವಳಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ಮತ್ತು ಮಾಜಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಇನ್ನು 2023ರಲ್ಲಿ ತಮ್ಮ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿಯಲು ಎದುರು ನೋಡುತ್ತಿರುವ ಮೂರು ಬಾರಿಯ ಫೈನಲಿಸ್ಟ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಎಲ್ಲ ಸಿದ್ಧತೆ ಆರಂಭಿಸಿದೆ. ತನ್ನ ಮೊದಲ ಪಂದ್ಯವನ್ನು ಏಪ್ರಿಲ್ 2ರಂದು ತವರಿನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ.
ಇದಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಭಾನುವಾರ, ಮಾರ್ಚ್ 26ರಂದು ಅನ್‌ಬಾಕ್ಸ್ ಇವೆಂಟ್ ಆಯೋಜಿಸಿದ್ದು, ತನ್ನ ಪೂರ್ಣ ತಂಡದ ಅಭ್ಯಾಸ ಪಂದ್ಯವನ್ನು ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಯೋಜಿಸಿದೆ. ಈ ವೇಳೆ ಮಾಜಿ ಆಟಗಾರರಾದ ಕ್ರಿಸ್ ಗೇಲ್ ಮತ್ತು ಎಬಿ ಡಿವಿಲಿಯರ್ಸ್ ಅವರನ್ನು ಗೌರವಿಸಲಿದೆ.
2023ರ ಐಪಿಎಲ್‌ಗಾಗಿ ಎಲ್ಲ ತಂಡಗಳು ಭರ್ಜರಿ ತಯಾರಿ ನಡೆಸುತ್ತಿರುವ ಇದೇ ಸಮಯದಲ್ಲಿ ಭಾರತ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಹೊಸ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.
ಕಳೆದ ಹದಿನಾರು ವರ್ಷಗಳಿಂದ ಆರ್‌ಸಿಬಿ ಪ್ರತಿನಿಧಿಸುತ್ತಿರುವ ವಿರಾಟ್ ಕೊಹ್ಲಿ ಐಪಿಎಲ್‌ಗೂ ಮುನ್ನ ತಮ್ಮ ಕೂದಲಿಗೆ ಕತ್ತರಿ ಹಾಕಿದ್ದಾರೆ. ಅವರ ಹೊಸ ಕೇಶವಿನ್ಯಾಸದ ಫೋಟೋಗಳು ಈಗ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗುತ್ತಿವೆ.
ಹೀಗಾಗಿ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಹೊಸ ಹೇರ್ ಸ್ಟೈಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆರ್‌ಸಿಬಿ ಶಿಬಿರ ಸೇರುವ ಮುನ್ನ ಕೂದಲು ಕತ್ತರಿಸಿ ತಾವು ಪಂದ್ಯಾವಳಿಗೆ ಸಿದ್ಧ ಎಂಬ ಸೂಚನೆ ರವಾನಿಸಿದ್ದಾರೆ. ವಿರಾಟ್ ಕೊಹ್ಲಿ ಅವರ ಹೊಸ ಹೇರ್ ಸ್ಟೈಲ್‌ನ ಫೋಟೋವನ್ನು ಕೇಶ ವಿನ್ಯಾಸಕ ಆಲಿಮ್ ಹಕೀಮ್ ಸೆರೆ ಹಿಡಿದಿದ್ದು, ಅವರನ್ನೂ ಈ ಚಿತ್ರದಲ್ಲಿ ಕಾಣಬಹುದು.

ವಿರಾಟ್ ಕೊಹ್ಲಿಗೆ ಈ ಹೊಸ ಹೇರ್ ಲುಕ್ ನೀಡಿದ ಆಲಿಮ್ ಹಕೀಮ್ ಪ್ರಸಿದ್ಧ ಕೇಶ ವಿನ್ಯಾಸಕ. ಬಾಲಿವುಡ್ ಸೇರಿದಂತೆ ಅನೇಕ ದೊಡ್ಡ ದೊಡ್ಡ ಸೆಲೆಬ್ರಿಟಿಗಳಿಗೆ ಕೇಶ ವಿನ್ಯಾಸ ಮಾಡಿದ್ದಾರೆ. ಈ ಪಟ್ಟಿಯಲ್ಲಿ ಭಾರತೀಯ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಕೂಡ ಸೇರಿದ್ದಾರೆ.
ಐಪಿಎಲ್ 2023: ರಾಯಲ್ ಚಾಲೆಂಜರ್ಸ್ ಬೆಂಗಳೂರು ಪೂರ್ಣ ತಂಡ
ಫಾಫ್ ಡು ಪ್ಲೆಸಿಸ್ (ನಾಯಕ), ಫಿನ್ ಅಲೆನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಅನುಜ್ ರಾವತ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವನಿಂದು ಹಸರಂಗ, ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ಸೋನು ಯಾದವ್, ಮನೋಜ್ ಭಾಂಡಗೆ, ಆಕಾಶ್ ದೀಪ್, ಜೋಶ್ ಹ್ಯಾಝಲ್‌ವುಡ್, ಸಿದ್ದಾರ್ಥ್ ಕೌಲ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ಕರ್ಣ್ ಶರ್ಮಾ, ಡೇವಿಡ್ ವಿಲ್ಲಿ, ಅವಿನಾಶ್ ಸಿಂಗ್, ರಾಜನ್ ಕುಮಾರ್, ರೀಸ್ ಟೋಪ್ಲೆ, ಹಿಮಾಂಶು ಶರ್ಮಾ.