Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Virat Kohli: ಐಪಿಎಲ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ವಿರಾಟ್ ಕೊಹ್ಲಿ

ಭಾನುವಾರ, ಏಪ್ರಿಲ್ 2ರಂದು 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಮೂರನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿತು.

ವಿರಾಟ್ ಕೊಹ್ಲಿ ಮತ್ತು ಫಾಫ್ ಡು ಪ್ಲೆಸಿಸ್ ಜೋಡಿ ಮೊದಲ ವಿಕೆಟ್‌ಗೆ 148 ರನ್ ಆರಂಭಿಕ ಜೊತೆಯಾಟದಿಂದ ಮುಂಬೈ ಇಂಡಿಯನ್ಸ್ ನೀಡಿದ್ದ 172 ರನ್‌ಗಳ ಗುರಿಯನ್ನು ಆರ್‌ಸಿಬಿ ತಂಡ ಕೇವಲ 16.2 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು 8 ವಿಕೆಟ್‌ಗಳಿಂದ ಅಮೋಘ ಗೆಲುವು ಸಾಧಿಸಿತು.

Virat Kohli-IPL 2023

ಆರ್‌ಸಿಬಿ ತಂಡದ ಜಯದಲ್ಲಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅದ್ಭುತ ಕೊಡುಗೆ ನೀಡಿದರು. ನಾಯಕ ಫಾಫ್ ಡು ಪ್ಲೆಸಿಸ್ ಅವರೊಂದಿಗೆ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಈ ಐಪಿಎಲ್ ಋತುವನ್ನು ಗೆಲುವಿನ ಮೂಲಕ ಶುಭಾರಂಭ ಮಾಡಿದರು.

ಇದೇ ವೇಳೆ ವಿರಾಟ್ ಕೊಹ್ಲಿ ಐಪಿಎಲ್ ಪಂದ್ಯಾವಳಿ ಇತಿಹಾಸದಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಸೂಪರ್‌ಸ್ಟಾರ್ ಐಪಿಎಲ್‌ನಲ್ಲಿ 50 ಬಾರಿ 50 ಪ್ಲಸ್ ಸ್ಕೋರ್‌ಗಳನ್ನು ಗಳಿಸಿದ ಎರಡನೇ ಆಟಗಾರ ಮತ್ತು ಮೊದಲ ಭಾರತೀಯ ಎನಿಸಿಕೊಂಡರು.

ಭಾನುವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2023ರ ತಮ್ಮ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಬೌಲಿಂಗ್ ದಾಳಿಯನ್ನು ಹಿಮ್ಮಟ್ಟಿಸಿ ಐಪಿಎಲ್‌ನಲ್ಲಿ 50 ಬಾರಿ 50ಕ್ಕೂ ಹೆಚ್ಚಿನ ರನ್ ಗಳಿಸಿದ ಸಾಧನೆ ಮಾಡಿದರು.

Virat Kohli-IPL 2023

ಒಟ್ಟಾರೆಯಾಗಿ, ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಅವರು 60 ಬಾರಿ 50 ಪ್ಲಸ್ ಸ್ಕೋರ್‌ಗಳಿಂದ ಅಗ್ರಸ್ಥಾನದಲ್ಲಿದ್ದಾರೆ. ಇನ್ನು ಪಂಜಾಬ್ ಕಿಂಗ್ಸ್ ನಾಯಕ ಶಿಖರ್ ಧವನ್ 49 ಬಾರಿ 50 ಪ್ಲಸ್ ಸ್ಕೋರ್‌ಗಳೊಂದಿಗೆ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ ಪ್ರಸ್ತುತ 45 ಅರ್ಧಶತಕಗಳು ಮತ್ತು 5 ಶತಕಗಳನ್ನು ಬಾರಿಸಿದ್ದಾರೆ.

ಮುಂಬೈ ಇಂಡಿಯನ್ಸ್ ವಿರುದ್ಧ ಅತ್ಯುತ್ತಮ ಬ್ಯಾಟಿಂಗ್ ಫಾರ್ಮ್‌ಗೆ ಮರಳಿದ ವಿರಾಟ್ ಕೊಹ್ಲಿ ಕೇವಲ 49 ಎಸೆತಗಳಲ್ಲಿ 6 ಬೌಂಡರಿ ಹಾಗೂ 5 ಸಿಕ್ಸರ್‌ಗಳ ನೆರವಿನಿಂದ ಅಜೇಯ 82 ರನ್ ಗಳಿಸಿದರು. ಆರ್‌ಸಿಬಿ ತಂಡದ ಮತ್ತೊಬ್ಬ ಆರಂಭಿಕ ಫಾಫ್ ಡು ಪ್ಲೆಸಿಸ್ 43 ಎಸೆತಗಳಲ್ಲಿ 5 ಬೌಂಡರಿ ಮತ್ತು 6 ಸಿಕ್ಸರ್‌ಗಳ ಸಹಾಯದಿಂದ 73 ರನ್ ಬಾರಿಸಿದರು.

Virat Kohli-IPL 2023


ಇದಕ್ಕೂ ಮೊದಲು ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ, ತಿಲಕ್ ವರ್ಮಾ ಅವರ 46 ಎಸೆತಗಳಲ್ಲಿ 9 ಬೌಂಡರಿ ಮತ್ತು 4 ಸಿಕ್ಸರ್‌ಗಳ ಸಮೇತ 84 ರನ್‌ಗಳ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 171 ರನ್ ಕಲೆ ಹಾಕಿತ್ತು.

ಮೊದಲ ಪಂದ್ಯದಲ್ಲಿ ಅದ್ಭುತ ಜಯ ಮೂಲಕ ಐಪಿಎಲ್ 2023ರ ಅಂಕಪಟ್ಟಿಯಲ್ಲಿ 2 ಅಂಕ ಗಳಿಸಿದೆ. ಆರ್‌ಸಿಬಿ ತಂಡದ ಮುಂದಿನ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ ಏಪ್ರಿಲ್ 6ರಂದು ಕೋಲ್ಕತ್ತಾದಲ್ಲಿ ಎದುರಿಸಲಿದೆ. ಇನ್ನು ಮುಂಬೈ ಇಂಡಿಯನ್ಸ್ ತಂಡದ ಮುಂದಿನ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಏಪ್ರಿಲ್ 8ರಂದು ಮುಂಬೈನಲ್ಲಿ ಆಡಲಿದೆ.

Story first published: Monday, April 3, 2023, 11:19 [IST]
Other articles published on Apr 3, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+