Irfan Pathan On Virat Kohli: 2023ರ ಐಪಿಎಲ್‌ಗಾಗಿ ವಿರಾಟ್ ಕೊಹ್ಲಿಗೆ ಈ ಸಲಹೆ ನೀಡಿದ ಇರ್ಫಾನ್ ಪಠಾಣ್
ಸೋಮವಾರ, ಏಪ್ರಿಲ್ 10ರಂದು ಬೆಂಗಳೂರಿನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 15ನೇ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ತಂಡಗಳು ಸೆಣಸಾಡಲಿವೆ.
ಈ ಪಂದ್ಯಕ್ಕೂ ಮುನ್ನ ಭಾರತದ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಅವರು ಆರ್‌ಸಿಬಿ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿಗೆ ಸಲಹೆಯೊಂದನ್ನು ನೀಡಿದ್ದು, 2023ರ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡಕ್ಕೆ ಇನ್ನಿಂಗ್ಸ್ ತೆರೆಯುವುದು ಬೇಡವೆಂದಿದ್ದಾರೆ.

ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ ಸದ್ಯ ತಮ್ಮ ವೃತ್ತಿಜೀವನದ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ಜೊತೆಗೂಡಿ ಮುಂಬೈ ಇಂಡಿಯನ್ಸ್ ವಿರುದ್ಧ 148 ರನ್‌ಗಳ ಆರಂಭಿಕ ಜೊತೆಯಾಟ ನೀಡಿ ಗುರಿಯನ್ನು ಹೇಗೆ ಬೆನ್ನಟ್ಟಬೇಕು ಎಂಬುದನ್ನು ವಿರಾಟ್ ಕೊಹ್ಲಿ ತೋರಿಸಿ ಕೊಟ್ಟಿದ್ದಾರೆ.
ಆರ್‌ಸಿಬಿ ತಂಡ ತನ್ನ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದು ಬೀಗಿತು. ಈ ವೇಳೆ ವಿರಾಟ್ ಕೊಹ್ಲಿ ಐಪಿಎಲ್ ಇತಿಹಾಸದಲ್ಲಿ 800 ಬೌಂಡರಿಗಳನ್ನು ಬಾರಿಸಿದ ಒಟ್ಟಾರೆ ಮೂರನೇ ಆಟಗಾರ ಹಾಗೂ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ 50 ಬಾರಿ 50 ಪ್ಲಸ್ ರನ್ ಗಳಿಸಿದರು. ಈ ಮೂಲಕ ಡೇವಿಡ್ ವಾರ್ನರ್ ನಂತರ ಐಪಿಎಲ್‌ನಲ್ಲಿ ಈ ಮೈಲಿಗಲ್ಲು ಸಾಧಿಸಿದ ಎರಡನೇ ಆಟಗಾರರಾದರು. ಡೇವಿಡ್ ವಾರ್ನರ್ 61 ಬಾರಿ ಈ ಸಾಧನೆ ಮಾಡಿದ್ದಾರೆ. ಇದೇ ವೇಳೆ ಆರ್‌ಸಿಬಿಯ ಬ್ಯಾಟರ್ ವಿರಾಟ್ ಕೊಹ್ಲಿ ಅದೇ ವೇಗದಲ್ಲಿ ರನ್ ಗಳಿಸಲು ಎದುರು ನೋಡುತ್ತಿದ್ದಾರೆ.

ಐಪಿಎಲ್ 2023ರ ಉಳಿದ ಎಲ್ಲಾ ಪಂದ್ಯಗಳಲ್ಲಿ ಆರ್‌ಸಿಬಿ ತಂಡ ಗೆಲ್ಲುತ್ತದೆ ಎಂಬುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ ಎಂದು ಇರ್ಫಾನ್ ಪಠಾಣ್ ಅಭಿಪ್ರಾಯಪಟ್ಟಿದ್ದು, ಕೆಕೆಆರ್ ವಿರುದ್ಧ ಆರ್‌ಸಿಬಿ ತಂಡ 81 ರನ್‌ಗಳ ಹೀನಾಯ ಸೋಲಿನಲ್ಲಿ ವಿರಾಟ್ ಕೊಹ್ಲಿ ಕೇವಲ 21 ರನ್‌ಗಳಿಗೆ ಔಟಾದ ನಂತರ ಇರ್ಫಾನ್ ಪಠಾಣ್ ಈ ಮಾತು ಹೇಳಿದ್ದಾರೆ.
"ಮೊದಲ ಕೆಲವು ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರ ಬ್ಯಾಟ್‌ನಿಂದ ರನ್ ಬರುತ್ತಿರುವ ಕಾರಣ, ಆರ್‌ಸಿಬಿ ತಂಡ ಈ ಬಾರಿ ಗೆಲುವಿನ ನಗೆ ಬೀರುತ್ತಿದೆ. ಆದರೆ, ಉಳಿದ ಪಂದ್ಯಗಳಲ್ಲಿ ಇದೇ ವೇಗದಲ್ಲಿ ರನ್ ಗಳಿಸುವುದನ್ನು ಮುಂದುವರೆಸುತ್ತಾರೆ ಅಥವಾ ಪ್ರತಿ ಬಾರಿಯೂ ಪಂದ್ಯವನ್ನು ಗೆಲ್ಲುತ್ತಾರೆ ಎಂಬುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ," ಎಂದು ಇರ್ಫಾನ್ ಪಠಾಣ್ ಅಭಿಪ್ರಾಯಪಟ್ಟರು.

"ಐಪಿಎಲ್‌ನಂತಹ ಪಂದ್ಯಾವಳಿಯಲ್ಲಿ ಆರ್‌ಸಿಬಿ ತಂಡದಲ್ಲಿರುವ ಉಳಿದ್ ಬ್ಯಾಟ್ಸ್‌ಮನ್‌ಗಳು ಸವಾಲಿಗೆ ಸಿದ್ಧವಾಗಿರಬೇಕು. ತಮ್ಮ ಪ್ರತಿಭೆಗೆ ತಕ್ಕಂತೆ ಪಾತ್ರ ನಿರ್ವಹಿಸಬೇಕು. ವಿರಾಟ್ ಕೊಹ್ಲಿ ಆರ್‌ಸಿಬಿ ತಂಡಕ್ಕೆ ಬ್ಯಾಟಿಂಗ್ ಇನ್ನಿಂಗ್ಸ್ ತೆರೆಯುವುದು ಬೇಡವೆಂದು ನನಗನ್ನಿಸುತ್ತಿದೆ," ಎಂದು ಹೇಳಿದರು.
"ಏಪ್ರಿಲ್ 10ರಂದು ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆತಿಥ್ಯ ವಹಿಸಲಿರುವ ಆರ್‌ಸಿಬಿಯ ಮಧ್ಯಮ ಕ್ರಮಾಂಕ ದುರ್ಬಲವಾಗಿದೆ. ವಿರಾಟ್ ಕೊಹ್ಲಿ ಮತ್ತು ಫಾಫ್ ಡು ಪ್ಲೆಸಿಸ್ ಅವರ ವಿಕೆಟ್ ಪ್ರಮುಖವಾಗಿದ್ದು, ಇವರು ಔಟಾದ ನಂತರ ಎದುರಾಳಿಗಳು ಅದರ ಲಾಭ ಪಡೆಯಲು ಪ್ರಯತ್ನಿಸುತ್ತಾರೆ," ಎಂದು ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಟಾಮ್ ಮೂಡಿ ತಿಳಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications