Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

RR vs RCB: ಟಿ20 ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಹೆಸರಿಗೆ ಮತ್ತೊಂದು ದಾಖಲೆ

ಜೈಪುರದ ಸವಾಯ್ ಮಾನ್‌ಸಿಂಗ್ ಸ್ಟೇಡಿಯಂನಲ್ಲಿ ಇಂದು ರಾಜಸ್ಥಾನ್ ರಾಯಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಐಪಿಎಲ್ ಇತಿಹಾಸದ ಅಪರೂಪದ ಸಾಧನೆಯೊಂದು ಮಾಡಿದ್ದಾರೆ. ಕೇವಲ ಐಪಿಎಲ್ ಮಾತ್ರವಲ್ಲ ಟಿ20 ಮಾದರಿಯಲ್ಲಿಯೇ ವಿರಾಟ್ ಕೊಹ್ಲಿ ಮಾಡಿದ ಈ ಸಾಧನೆಯನ್ನು ಬೇರೆ ಯಾವ ಆಟಗಾರ ಕೂಡ ಮಾಡಿಲ್ಲ ಎಂಬುದು ಗಮನಾರ್ಹ.

ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಐಪಿಎಲ್‌ನಲ್ಲಿ ಆರ್‌ಸಿಬಿ ಪರವಾಗಿ 250ನೇ ಪಂದ್ಯದಲ್ಲಿ ಕಣಕ್ಕಿಳಿದಂತಾಗಿದೆ. ಇದು ಒಟ್ಟಾರೆ ಟಿ20 ಮಾದರಿಕೆಟ್ ಮಾದರಿಯಲ್ಲಿ ಆಟಗಾರನೋರ್ವ ಒಂದೇ ತಂಡದ ಪರವಾಗಿ ಆಡಿದ ಅತ್ಯಂತ ಹೆಚ್ಚಿನ ಪಂದ್ಯ ಎನಿಸಿಕೊಂಡಿದೆ. ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಎಂಎಸ್ ಧೋನಿಯಿದ್ದು ಚೆನ್ನೈ ಸೂಪರ್ ಕಿಂಗ್ಸ್ ಪರವಾಗಿ ಧೋನಿ 240 ಪಂದ್ಯಗಳನ್ನು ಆಡಿದ್ದಾರೆ.

IPL 2023: Virat Kohli special milestone in t20 cricket playing 250th match for single team

ಇನ್ನು ರಾಜಸ್ಥಾನ್ ರಾಯಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಈ ಪಂದ್ಯದಲ್ಲಿ ಆರ್‌ಸಿಬಿ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಆದರೆ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮಿಂಚಲು ವಿಫಲವಾಗಿದ್ದು 19 ಎಸೆತಗಳಲ್ಲಿ 18 ರನ್ ಮಾತ್ರವೇ ಗಳಿಸಲು ಯಶಸ್ವಿಯಾದರು. ಆದರೆ ಮತ್ತೊಮ್ಮೆ ಆರ್‌ಸಿಬಿಗೆ ಆಸರೆಯಾಗಿದ್ದು ಫಾಫ್ ಡು ಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಲ್ಸ್‌ವೆಲ್ ಜೋಡಿ.

ಈ ಇಬ್ಬರು ಆಟಗಾರರು ಕೂಡ ತಲಾ ಅರ್ಧ ಶತಕದ ಕೊಡುಗೆ ನೀಡಿದ್ದಾರೆ. ಫಾಫ್ 44 ಎಸೆತಗಳಲ್ಲಿ 55 ರನ್‌ಗಳಿಸಿದರೆ ಮ್ಯಾಕ್ಸ್‌ವೆಲ್ 33 ಎಸೆತಗಳಲ್ಲಿ 54 ರನ್‌ಗಳಿಸಿ ಮಿಂಚಿದರು. ಇನ್ನು ಕೊನೆಯ ಹಂತದಲ್ಲಿ ಆರ್‌ಸಿಬಿ ಪರವಾಗಿ ಅನುಜ್ ರಾವತ್ ಸ್ಪೋಟಕ ಪ್ರದರ್ಶನ ನೀಡಿದ ಪರಿಣಾಮ ಆರ್‌ಸಿಬಿ ಸವಾಲಿನ ಮೊತ್ತ ಗಳಿಸಲು ಸಾಧ್ಯವಾಯಿತು. ಅನುಜ್ ರಾವತ್ ಅಂತಿಮ ಹಂತದಲ್ಲಿ 11 ಎಸೆತಗಳಲ್ಲಿ 29 ರನ್‌ಗಳಿಸಿ ಮಿಂಚಿದರು. ಹೀಗಾಗಿ ಆರ್‌ಸಿಬಿ ಈ ಪಂದ್ಯದಲ್ಲಿ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 171 ರನ್‌ಗಳಿಸಿದೆ.

ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ & ವಿಕೆಟ್ ಕೀಪರ್), ಜೋ ರೂಟ್, ಧ್ರುವ್ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಆಡಮ್ ಜಂಪಾ, ಸಂದೀಪ್ ಶರ್ಮಾ, ಕೆಎಂ ಆಸಿಫ್, ಯುಜ್ವೇಂದ್ರ ಚಹಾಲ್
ಬೆಂಚ್: ದೇವದತ್ ಪಡಿಕ್ಕಲ್, ರಿಯಾನ್ ಪರಾಗ್, ಕುಲದೀಪ್ ಯಾದವ್, ಡೊನಾವೊನ್ ಫೆರೇರಾ, ನವದೀಪ್ ಸೈನಿ, ಮುರುಗನ್ ಅಶ್ವಿನ್, ಜೇಸನ್ ಹೋಲ್ಡರ್, ಒಬೆದ್ ಮೆಕಾಯ್, ಕೆಸಿ ಕಾರಿಯಪ್ಪ, ಕುಲದೀಪ್ ಸೇನ್, ಅಬ್ದುಲ್ ಬಸಿತ್, ಕುನಾಲ್ ಸಿಂಗ್ ರಾಥೋಡ್, ಆಕಾಶ್ ವಸಿಷ್ತ್, ಟ್ರೆಂಟ್ ಬೌಲ್ಟ್

ಆರ್‌ಸಿಬಿ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮೈಕಲ್ ಬ್ರೇಸ್‌ವೆಲ್, ವೇಯ್ನ್ ಪಾರ್ನೆಲ್, ಕರ್ಣ್ ಶರ್ಮಾ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್
ಬೆಂಚ್: ವಿಜಯ್‌ಕುಮಾರ್ ವೈಶಾಕ್, ಫಿನ್ ಅಲೆನ್, ಶಹಬಾಜ್ ಅಹ್ಮದ್, ಹಿಮಾಂಶು ಶರ್ಮಾ, ಸುಯಶ್ ಪ್ರಭುದೇಸಾಯಿ, ಕೇದಾರ್ ಜಾಧವ್, ಆಕಾಶ್ ದೀಪ್, ರಾಜನ್ ಕುಮಾರ್, ಅವಿನಾಶ್ ಸಿಂಗ್, ಮನೋಜ್ ಭಾಂಡಗೆ, ಸೋನು ಯಾದವ್, ಸಿದ್ದಾರ್ಥ್ ಕೌಲ್, ಜೋಶ್ ಹ್ಯಾಜಲ್‌ವುಡ್, ವನಿಂದು ಹಸರಂಗ

Story first published: Sunday, May 14, 2023, 17:56 [IST]
Other articles published on May 14, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+