IPL 2023: ಈ ಬಾರಿ RCB ತಂಡದ ಪರ ಅತಿ ಹೆಚ್ಚು ರನ್ ಬಾರಿಸುವ ಬ್ಯಾಟರ್ ಹೆಸರಿಸಿದ ಆಕಾಶ್ ಚೋಪ್ರಾ

2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 16ನೇ ಆವೃತ್ತಿಗೆ ದಿನಗಣನೆ ಆರಂಭವಾಗಿದ್ದು, ಇದೇ ಮಾರ್ಚ್ 31ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗುವ ಮೂಲಕ ಅದ್ಧೂರಿ ಚಾಲನೆ ಸಿಗಲಿದೆ.
ಇನ್ನು ಈ ಬಾರಿ ಚೊಚ್ಚಲ ಪ್ರಶಸ್ತಿ ನಿರೀಕ್ಷೆಯಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ತನ್ನ ಮೊದಲ ಪಂದ್ಯವನ್ನು ಮುಂಬೈ ಇಂಡಿಯನ್ಸ್ ವಿರುದ್ಧ ಎಪ್ರಿಲ್ 2ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಲಿದೆ.
ಇದೇ ವೇಳೆ ಭಾರತ ತಂಡದ ಮಾಜಿ ಕ್ರಿಕೆಟಿಗ ಮತ್ತು ಪ್ರಸಿದ್ಧ ಕ್ರಿಕೆಟ್ ವಿಶ್ಲೇಷಕ ಆಕಾಶ್ ಚೋಪ್ರಾ ಅವರು ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ಪ್ರದರ್ಶನದ ಬಗ್ಗೆ ಮಾತನಾಡಿದ್ದಾರೆ.
ವಿರಾಟ್ ಕೊಹ್ಲಿ 2023ರ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡದ ಪರ ಅತಿ ಹೆಚ್ಚು ರನ್ ಗಳಿಸಲಿದ್ದಾರೆ. ಅಷ್ಟೇ ಅಲ್ಲದೇ ವಿರಾಟ್ ಕೊಹ್ಲಿ ಅವರು ಐಪಿಎಲ್ 2023ರಲ್ಲಿ ಆರೆಂಜ್ ಕ್ಯಾಪ್ ಗೆಲ್ಲುವ ಪ್ರಮುಖ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು ಎಂಬ ಸುಳಿವನ್ನು ಆಕಾಶ್ ಚೋಪ್ರಾ ನೀಡಿದ್ದಾರೆ.

ಆರ್‌ಸಿಬಿ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಕಳೆದೆರಡು ವರ್ಷಗಳಲ್ಲಿ ಕಳೆದುಕೊಂಡಿದ್ದ ಫಾರ್ಮ್‌ಗೆ ಕೊನೆಗೂ ಮರಳಿದ್ದಾರೆ. 2022ರ ಏಷ್ಯಾ ಕಪ್‌ನಿಂದ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 55ರ ಸರಾಸರಿಯಲ್ಲಿ 5 ಶತಕಗಳನ್ನು ಗಳಿಸಿದ್ದಾರೆ.
ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಟೆಸ್ಟ್ ಕ್ರಿಕೆಟ್‌ನ ಶತಕದ ಬರವನ್ನು ಕೊನೆಗೊಳಿಸಿದರು. 2023ರ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಬೃಹತ್ ಮೊತ್ತ ದಾಖಲಿಸುವಲ್ಲಿ ವಿರಾಟ್ ಕೊಹ್ಲಿ ಶತಕ ಸಹಾಯವಾಗಿತ್ತು.
'ಭಾರತ ತಂಡದಲ್ಲಿ ಕೆಲವು ಆಟಗಾರರಿಗೆ ಮಾತ್ರ ರಕ್ಷಣೆ'; ಸೂರ್ಯಕುಮಾರ್ ಅವಕಾಶದ ಬಗ್ಗೆ ಮಾಜಿ ಕ್ರಿಕೆಟಿಗ ಹೇಳಿದ್ದೇನು?
ಆಸ್ಟ್ರೇಲಿಯಾದಲ್ಲಿ ನಡೆದ 2022ರ ಟಿ20 ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಅತಿ ಹೆಚ್ಚು ರನ್ ಬಾರಿಸಿದ ಆಟಗಾರನಾಗಿದ್ದಾರೆ. ವಿಶ್ವಕಪ್‌ನ ಪ್ರತಿ ಪಂದ್ಯದಲ್ಲೂ ಭಾರತ ತಂಡದ ಪರ ಉತ್ತಮವಾಗಿ ಬ್ಯಾಟ್ ಬೀಸಿದರು. ಪಾಕಿಸ್ತಾನದ ವಿರುದ್ಧದ ಮೊದಲ ಪಂದ್ಯದಲ್ಲಿ ನೀಡಿದ ಅದ್ಭುತ ಪ್ರದರ್ಶನ ಜೀವಮಾನದ ಶ್ರೇಷ್ಠ ಆಟವೆನಿಸಿದೆ.
ಇದೀಗ ಅದೇ ಫಾರ್ಮ್‌ನೊಂದಿಗೆ ರನ್ ಮಷಿನ್ ವಿರಾಟ್ ಕೊಹ್ಲಿ 2023ರ ಐಪಿಎಲ್ ಪಂದ್ಯಾವಳಿ ಆಡುತ್ತಿದ್ದಾರೆ. ವಿಶ್ವದ ಯಾವುದೇ ಬೌಲರ್‌ಗಳನ್ನು ಧೈರ್ಯವಾಗಿ ಎದುರಿಸುವ ಬ್ಯಾಟರ್ ಯಾರಾದರೂ ಇದ್ದರೆ ಅದು ವಿರಾಟ್ ಕೊಹ್ಲಿ ಎನ್ನಬಹುದು.

2022ರ ಏಷ್ಯಾಕಪ್ ಮೊದಲು ವಿರಾಟ್ ಕೊಹ್ಲಿ ತೆಗೆದುಕೊಂಡ ವಿಶ್ರಾಂತಿಯು ಆಟದ ಮೇಲಿನ ಪ್ರೀತಿಯನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಲು ಸಹಾಯ ಮಾಡಿತು ಎಂದು ಸ್ವತಃ ವಿರಾಟ್ ಕೊಹ್ಲಿ ಹೇಳಿದ್ದರು.
ತಮ್ಮ ಬ್ಯಾಟಿಂಗ್‌ನಲ್ಲಿ ಸಾಕಷ್ಟು ಸುಧಾರಣೆಗೆ ಅವಕಾಶವಿದೆ ಮತ್ತು ಈ ವರ್ಷದ ಐಪಿಎಲ್‌ನಲ್ಲಿ ಪರಿಪೂರ್ಣತೆಯನ್ನು ಸಾಧಿಸಲು ಪ್ರಯತ್ನಿಸುತ್ತೇನೆ ಎಂದು ವಿರಾಟ್ ಕೊಹ್ಲಿ ತಿಳಿಸಿದ್ದಾರೆ. ಐಪಿಎಲ್ 2016ರಲ್ಲಿ ಆಡಿದ್ದನ್ನು ಪುನರಾವರ್ತಿಸಲು ಬಯಸಿರುವ ವಿರಾಟ್ ಕೊಹ್ಲಿ ಬಗ್ಗೆ ಇತರ ಐಪಿಎಲ್ ತಂಡಗಳು ಎಚ್ಚರಿಕೆಯಿಂದಿರಬೇಕು.
ಹೊಸ ಹೇರ್ ಸ್ಟೈಲ್‌ನಲ್ಲಿ ವಿರಾಟ್ ಕೊಹ್ಲಿ
2023ರ ಐಪಿಎಲ್‌ಗಾಗಿ ಎಲ್ಲ ತಂಡಗಳು ಭರ್ಜರಿ ತಯಾರಿ ನಡೆಸುತ್ತಿರುವ ಇದೇ ಸಮಯದಲ್ಲಿ ಭಾರತ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಹೊಸ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.
ಹೀಗಾಗಿ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಹೊಸ ಹೇರ್ ಸ್ಟೈಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆರ್‌ಸಿಬಿ ಶಿಬಿರ ಸೇರುವ ಮುನ್ನ ಕೂದಲು ಕತ್ತರಿಸಿ ತಾವು ಪಂದ್ಯಾವಳಿಗೆ ಸಿದ್ಧ ಎಂಬ ಸೂಚನೆ ರವಾನಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications