Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2023: ರಾಜಸ್ಥಾನ್ vs ಆರ್‌ಸಿಬಿ ಕೊನೆಯ ಆವೃತ್ತಿಯಲ್ಲಿ 3 ಬಾರಿ ಎದುರಾದಾಗ ಏನಾಗಿತ್ತು?

IPL 2023: What happened when RCB and RR face eachother 3 times in the last season

ಸದ್ಯ ನಡೆಯುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದಲ್ಲಿ ಇಂದು ( ಏಪ್ರಿಲ್ 23 ) ಎರಡು ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಎರಡನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂದಿನ ಪಂದ್ಯದಲ್ಲಿ ಹಸಿರು ಜರ್ಸಿ ತೊಟ್ಟು ಆಡಲಿದ್ದು, ಪಂದ್ಯ ವಿಶೇಷ ಎನಿಸಲಿದೆ. ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಗೆಲುವು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಪಂದ್ಯದಲ್ಲಿಯೂ ಸಹ ಗೆದ್ದು ಅಂಕಪಟ್ಟಿಯಲ್ಲಿ ಏರಿಕೆ ಕಾಣುವತ್ತ ಚಿತ್ತ ನೆಟ್ಟಿದ್ದು, ತನ್ನ ಕೊನೆಯ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೋತಿರುವ ರಾಜಸ್ಥಾನ್ ರಾಯಲ್ಸ್ ಈ ಪಂದ್ಯದಲ್ಲಿ ಸೋತು ಗೆಲುವಿನ ಹಾದಿಗೆ ಮರಳುವ ಯೋಜನೆಯಲ್ಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಲ್ಲಿಯವರೆಗೂ ಟೂರ್ನಿಯಲ್ಲಿ 6 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು, 3 ಪಂದ್ಯಗಳಲ್ಲಿ ಸೋತಿದ್ದು, 6 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದು, ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 6 ಪಂದ್ಯಗಳನ್ನಾಡಿರುವ ರಾಜಸ್ಥಾನ್ ರಾಯಲ್ಸ್ 4 ಪಂದ್ಯಗಳಲ್ಲಿ ಗೆದ್ದು 2 ಪಂದ್ಯಗಳಲ್ಲಿ ಸೋತು 8 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಇನ್ನು ಇತ್ತಂಡಗಳು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿದ್ದು, ಇತ್ತಂಡಗಳ ನಡುವೆ ನಡೆಯಲಿರುವ 29ನೇ ಮುಖಾಮುಖಿ ಪಂದ್ಯ ಇದಾಗಲಿದೆ. ಹಾಗಿದ್ದರೆ ಎರಡೂ ತಂಡಗಳ ನಡುವೆ ಇಲ್ಲಿಯವರೆಗೂ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಎಷ್ಟು ಪಂದ್ಯಗಳು ನಡೆದಿವೆ ಹಾಗೂ ಈ ಪಂದ್ಯಗಳ ಪೈಕಿ ಯಾವ ತಂಡ ಎಷ್ಟು ಪಂದ್ಯಗಳಲ್ಲಿ ಗೆದ್ದಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ.

rr vs rcn

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವೆ ಐಪಿಎಲ್ ಇತಿಹಾಸದಲ್ಲಿ ಒಟ್ಟು 28 ಪಂದ್ಯಗಳು ನಡೆದಿದ್ದು, ಈ ಪೈಕಿ 13 ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವು ಕಂಡಿದ್ದರೆ, 12 ಪಂದ್ಯಗಳಲ್ಲಿ ರಾಜಸ್ಥಾನ್ ರಾಯಲ್ಸ್ ಗೆಲುವನ್ನು ಕಂಡಿದೆ ಹಾಗೂ ಉಳಿದ 3 ಪಂದ್ಯಗಳು ಯಾವುದೇ ಫಲಿತಾಂಶವಿಲ್ಲದೇ ಅಂತ್ಯಗೊಂಡಿದೆ. ಈ ಮೂಲಕ ಮುಖಾಮುಖಿ ಕಾದಾಟದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ರಾಜಸ್ಥಾನ್ ರಾಯಲ್ಸ್ ತಂಡಕ್ಕಿಂತ ತುಸು ಮುನ್ನಡೆ ಕಾದುಕೊಂಡಿದೆ.

ಇನ್ನು ಕಳೆದ ಬಾರಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮೂರು ಬಾರಿ ಮುಖಾಮುಖಿಯಾಗಿದ್ದವು. ಮೊದಲಿಗೆ ನಡೆದ ಲೀಗ್ ಹಂತದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 4 ವಿಕೆಟ್‌ಗಳ ಗೆಲುವನ್ನು ಕಂಡಿತ್ತು. ಬಳಿಕ ನಡೆದ ಎರಡನೇ ಲೀಗ್ ಮುಖಾಮುಖಿಯಲ್ಲಿ ರಾಜಸ್ಥಾನ್ ರಾಯಲ್ಸ್ 29 ರನ್‌ಗಳ ಗೆಲುವನ್ನು ಕಂಡಿತ್ತು.

ಮೂರನೇ ಬಾರಿಗೆ ಎರಡೂ ತಂಡಗಳು ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸೆಣಸಾಡಿದ್ದವು. ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ 7 ವಿಕೆಟ್‌ಗಳ ಅಂತರದಿಂದ ಗೆದ್ದಿತ್ತು. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೂರ್ನಿಯಿಂದ ಹೊರಬಿದ್ದಿತ್ತು. ಹೀಗೆ ಕಳೆದ ಬಾರಿ ಟೂರ್ನಿಯಿಂದ ಹೊರಬೀಳಲು ಕಾರಣವಾಗಿದ್ದ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂದಿನ ಪಂದ್ಯದ ಮೂಲಕ ಸೇಡು ತೀರಿಸಿಕೊಳ್ಳುತ್ತಾ ಕಾದು ನೋಡಬೇಕಿದೆ.

Story first published: Sunday, April 23, 2023, 13:33 [IST]
Other articles published on Apr 23, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+