Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

GT vs RCB: ಮಹತ್ವದ ಪಂದ್ಯ ಮಳೆಯಿಂದ ರದ್ದಾದರೆ ಆರ್‌ಸಿಬಿ ಪ್ಲೇಆಫ್ ಪ್ರವೇಶಿಸಲು ಹೀಗೆ ನಡೆಯಲೇಬೇಕು!

IPL 2023: What will happen if RCB vs GT match at Chinnaswamy is called off due to rain?

ಕಳೆದ ಮಾರ್ಚ್ ತಿಂಗಳ ಅಂತ್ಯದಲ್ಲಿ ಆರಂಭಗೊಂಡ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತ ಇಂದು ( ಮೇ 21 ) ನಡೆಯಲಿರುವ ಎರಡು ಪಂದ್ಯಗಳ ಮೂಲಕ ಮುಕ್ತಾಯಗೊಳ್ಳಲಿದೆ.

ಹೌದು, ಇಂದು ನಡೆಯಲಿರುವ ಮುಂಬೈ ಇಂಡಿಯನ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಟೂರ್ನಿಯ ಲೀಗ್ ಹಂತ ಮುಕ್ತಾಯಗೊಳ್ಳಲಿದ್ದು, ಗುಜರಾತ್ ಟೈಟನ್ಸ್, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ಬಳಿಕ ಪ್ಲೇಆಫ್ ಪ್ರವೇಶಿಸಲಿರುವ ತಂಡ ಯಾವುದು ಎಂಬ ಉತ್ತರ ಸಹ ಸಿಗಲಿದೆ.

ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ಪ್ಲೇಆಫ್ ಪ್ರವೇಶಕ್ಕಾಗಿ ಪೈಪೋಟಿ ಏರ್ಪಟ್ಟಿದೆ. ಇನ್ನು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಮುಂಬೈ ಇಂಡಿಯನ್ಸ್ ಸೋತು ಗುಜರಾತ್ ಟೈಟನ್ಸ್ ವಿರುದ್ಧ ರಾಯಲ್ ಚಾಲೆಂಜ್ಸ್ ಬೆಂಗಳೂರು ಗೆದ್ದರೆ ಆರ್‌ಸಿಬಿ ಸುಲಭವಾಗಿ ಪ್ಲೇಆಫ್ ತಲುಪಲಿದೆ.

ಹಾಗೆಯೇ ಗುಜರಾತ್ ಟೈಟನ್ಸ್ ವಿರುದ್ಧ ರಾಯಲ್ ಚಾಲೆಂಜ್ಸ್ ಬೆಂಗಳೂರು ಸೋತು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆದ್ದರೆ ಮುಂಬೈ ಇಂಡಿಯನ್ಸ್ ಪ್ಲೇಆಫ್ ತಲುಪಲಿದೆ. ಒಂದುವೇಳೆ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎರಡೂ ತಂಡಗಳೂ ಸಹ ಸೋತರೆ ಅಂಕಪಟ್ಟಿಯಲ್ಲಿ ತಲಾ 14 ಅಂಕಗಳನ್ನು ಹೊಂದಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಈ 3 ತಂಡಗಳ ಪೈಕಿ ಹೆಚ್ಚಿನ ನೆಟ್ ರನ್ ರೇಟ್ ಪಡೆಯುವ ತಂಡ ಪ್ಲೇಆಫ್‌ಗೆ ಲಗ್ಗೆ ಇಡಲಿದೆ.

ಇನ್ನು ಇಷ್ಟೆಲ್ಲಾ ಸಾಧ್ಯತೆಗಳು ಒಂದೆಡೆಯಾದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಪಂದ್ಯ ಮಳೆಗೆ ಆಹುತಿಯಾಗುವ ಸಾಧ್ಯತೆ ಮತ್ತೊಂದೆಡೆ ಇದೆ. ಹೌದು, ನಿನ್ನೆಯೂ ಬೆಂಗಳೂರು ನಗರದಲ್ಲಿ ಮಳೆ ಸುರಿದಿದ್ದು, ಇಂದು ಮಧ್ಯಾಹ್ನವೂ ಸಹ ಮಳೆಯಾಗಿದೆ. ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿಯೂ ಸಹ ಮಳೆ ಸುರಿದಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ.

ಒಂದುವೇಳೆ ಈ ಪಂದ್ಯ ಮಳೆಯಿಂದ ರದ್ದಾಗಿ ಎರಡೂ ತಂಡಗಳಿಗೂ ತಲಾ ಒಂದೊಂದು ಅಂಕ ಬರಲಿದ್ದು, ಆಗಲೂ ಸಹ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಆಫ್‌ಗೆ ಲಗ್ಗೆ ಇಡುವ ಅವಕಾಶ ಇಡಲಿದೆಯಾ ಎಂಬ ಚರ್ಚೆಗಳು ಆರಂಭವಾಗಿದೆ. ಆದರೆ ಈ ಕೆಳಕಂಡ ರೀತಿಯಲ್ಲಿ ನಡೆದರೆ ಮಾತ್ರ ಆರ್‌ಸಿಬಿ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಪಂದ್ಯ ಮಳೆಗೆ ಆಹುತಿಯಾದರೂ ಪ್ಲೇಆಫ್ ಪ್ರವೇಶಿಸಲಿದೆ..

ಆರ್‌ಸಿಬಿ ಪಂದ್ಯ ರದ್ದಾದರೂ ತಂಡ ಪ್ಲೇಆಫ್ ಪ್ರವೇಶಿಸಬೇಕೆಂದರೆ ಸನ್ ರೈಸರ್ಸ್ ಹೈದರಾಬಾದ್ ತಂಡ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಬೇಕು. ಹೀಗೆ ನಡೆದರೆ ಮುಂಬೈ ಇಂಡಿಯನ್ಸ್ ತಂಡ 14 ಅಂಕಗಳೊಂದಿಗೆ ಟೂರ್ನಿ ಮುಗಿಸಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು 15 ಅಂಕಗಳನ್ನು ಪಡೆಯಲಿದೆ ಹಾಗೂ ಯಾವುದೇ ಅಡೆತಡೆ ಇಲ್ಲದೇ ನೇರವಾಗಿ ಪ್ಲೇಆಫ್ ತಲುಪಬಹುದಾಗಿದೆ.

ಇನ್ನು ಒಂದುವೇಳೆ ಎರಡೂ ತಂಡಗಳೂ ಸಹ ಗೆದ್ದರೆ ನೆಟ್ ರನ್ ರೇಟ್ ಮತ್ತೊಮ್ಮೆ ದೊಡ್ಡ ಪಾತ್ರವನ್ನು ನಿರ್ವಹಿಸಲಿದೆ. ಯಾವ ತಂಡ ಹೆಚ್ಚಿನ ನೆಟ್ ರನ್ ರೇಟ್ ಹೊಂದಿರಲಿದೆಯೋ ಆ ತಂಡ ಪ್ಲೇಆಫ್ ತಲುಪಲಿದೆ..

Story first published: Sunday, May 21, 2023, 16:58 [IST]
Other articles published on May 21, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+