For Quick Alerts
ALLOW NOTIFICATIONS  
For Daily Alerts
 

IPL 2023: ಮುಂಬೈ vs ಗುಜರಾತ್ ಪಂದ್ಯ ಮಳೆಯಿಂದ ರದ್ದಾದರೆ ಯಾರಿಗೆ ಸಿಗಲಿದೆ ನೇರ ಫೈನಲ್ ಪ್ರವೇಶ?

IPL 2023: Who will enter Final if MI vs GT qualifier 2 match is washed out due to rain

ಮಾರ್ಚ್ ತಿಂಗಳ ಅಂತಿಮ ಹಂತದಲ್ಲಿ ಶುರುವಾದ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಇದೇ ಭಾನುವಾರ ನಡೆಯಲಿರುವ ಫೈನಲ್ ಪಂದ್ಯದ ಮೂಲಕ ಮುಕ್ತಾಯಗೊಳ್ಳಲಿದೆ.

ಒಂದನೇ ಕ್ವಾಲಿಫಯರ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಗುಜರಾತ್ ಟೈಟನ್ಸ್ ತಂಡವನ್ನು ಸೋಲಿಸಿದ್ದ ಚೆನ್ನೈ ಸೂಪರ್ ಕಿಂಗ್ಸ್ ಫೈನಲ್ ಪಂದ್ಯಕ್ಕೆ ಅರ್ಹತೆ ಪಡೆದುಕೊಂಡಿದ್ದು, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋತ ಗುಜರಾತ್ ಟೈಟನ್ಸ್ ಫೈನಲ್ ಪ್ರವೇಶಿಸಲು ಮತ್ತೊಂದು ಅವಕಾಶ ಪಡೆದುಕೊಂಡಿದ್ದು, ಎರಡನೇ ಕ್ವಾಲಿಫಯರ್ ಪಂದ್ಯದಲ್ಲಿ ಕಣಕ್ಕಿಳಿಯಲಿದೆ.

ಈ ಎರಡನೇ ಕ್ವಾಲಿಫಯರ್ ಪಂದ್ಯ ಇಂದು ( ಮೇ 26 ) ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ಸ್ ಗುಜರಾತ್ ಟೈಟನ್ಸ್ ವಿರುದ್ಧವಾಗಿ ಫೈವ್ ಟೈಮ್ಸ್ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಕಣಕ್ಕಿಳಿಯಲಿದೆ.

ಕಳೆದ ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 81 ರನ್‌ಗಳ ಭರ್ಜರಿ ಗೆಲುವನ್ನು ಕಂಡಿದ್ದ ಮುಂಬೈ ಇಂಡಿಯನ್ಸ್ ಆರನೇ ಬಾರಿಗೆ ಟ್ರೋಫಿ ಎತ್ತಿ ಹಿಡಿಯುವ ಯೋಜನೆಯಲ್ಲಿದೆ.

ಇನ್ನು ಈ ಪಂದ್ಯದಲ್ಲಿ ಗೆಲ್ಲಲಿರುವ ತಂಡ ಭಾನುವಾರ ನಡೆಯಲಿರುವ ಫೈನಲ್ ಪಂದ್ಯಕ್ಕೆ ಪ್ರವೇಶ ಪಡೆದುಕೊಂಡರೆ ಸೋಲುವ ತಂಡ ಟೂರ್ನಿಯಿಂದ ಹೊರಬೀಳಲಿದೆ. ಹೀಗಾಗಿ ಈ ಪಂದ್ಯ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟುಹಾಕಿದ್ದು, ಯಾವ ತಂಡ ಗೆಲ್ಲಬಹುದು ಎಂಬ ಚರ್ಚೆಗಳು ನಡೆಯುತ್ತಿವೆ. ಅಲ್ಲದೇ ಒಂದು ವೇಳೆ ಈ ಪಂದ್ಯ ಮಳೆ ಕಾರಣದಿಂದಾಗಿ ರದ್ದಾದರೆ ಯಾವ ತಂಡ ಪ್ಲೇಆಫ್ ಪ್ರವೇಶ ಪಡೆದುಕೊಳ್ಳಲಿದೆ ಎಂಬ ಪ್ರಶ್ನೆ ಸಹ ಎದ್ದಿದೆ.

ಹೀಗೆ ಮಳೆ ಬಂದು ಪಂದ್ಯ ರದ್ದಾಗಿದ್ದೇ ಆದರೆ ಅಂಕಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕಿಂತ ಹೆಚ್ಚು ಅಂಕಗಳನ್ನು ಹೊಂದಿದ್ದ ಗುಜರಾತ್ ಟೈಟನ್ಸ್ ನೇರವಾಗಿ ಫೈನಲ್‌ಗೆ ಪ್ರವೇಶ ಪಡೆದುಕೊಳ್ಳಲಿದೆ. ಇನ್ನು ಹವಾಮಾನ ವರದಿಯ ಪ್ರಕಾರ ಇಂದಿನ ಪಂದ್ಯಕ್ಕೆ ಆತಂಕ ಇಲ್ಲ.

ಲೀಗ್ ಹಂತದಲ್ಲಿ ತಂಡಗಳು ಪಡೆದುಕೊಂಡಿದ್ದ ಅಂಕಗಳು ಹಾಗೂ ಸ್ಥಾನ:

1. 14 ಪಂದ್ಯಗಳನ್ನಾಡಿ 10 ಪಂದ್ಯಗಳಲ್ಲಿ ಗೆದ್ದು 4 ಪಂದ್ಯಗಳಲ್ಲಿ ಸೋಲನ್ನು ಕಂಡಿದ್ದ ಗುಜರಾತ್ ಟೈಟನ್ಸ್ ತಂಡ 20 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಪಡೆದುಕೊಂಡಿತ್ತು.
2. 14 ಪಂದ್ಯಗಳನ್ನಾಡಿ 8 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇದ್ದ ಚೆನ್ನೈ ಸೂಪರ್ ಕಿಂಗ್ಸ್ 17 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

3. 14 ಪಂದ್ಯಗಳನ್ನಾಡಿ 8 ಪಂದ್ಯಗಳಲ್ಲಿ ಗೆದ್ದು 5 ಪಂದ್ಯಗಳಲ್ಲಿ ಸೋತು ಒಂದು ಪಂದ್ಯದಲ್ಲಿ ಫಲಿತಾಂಶ ಕಾಣದೇ ಇರುವ ಲಕ್ನೋ ಸೂಪರ್ ಜೈಂಟ್ಸ್ ತಂಡ 17 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ.
4. 14 ಪಂದ್ಯಗಳನ್ನಾಡಿ 8 ಪಂದ್ಯಗಳಲ್ಲಿ ಗೆದ್ದು 6 ಪಂದ್ಯಗಳಲ್ಲಿ ಸೋತಿದ್ದ ಮುಂಬೈ ಇಂಡಿಯನ್ಸ್ ತಂಡ 16 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 4ನೇ ಸ್ಥಾನ ಪಡೆದುಕೊಂಡಿತ್ತು.

5. 14 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋತಿದ್ದ ರಾಜಸ್ಥಾನ್ ರಾಯಲ್ಸ್ ತಂಡ 14 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನ ಪಡೆದುಕೊಂಡಿತ್ತು.
6. 14 ಪಂದ್ಯಗಳನ್ನಾಡಿ 7 ಪಂದ್ಯಗಳಲ್ಲಿ ಗೆದ್ದು 7 ಪಂದ್ಯಗಳಲ್ಲಿ ಸೋತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 14 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಆರನೇ ಸ್ಥಾನ ಪಡೆದುಕೊಂಡಿತ್ತು.

7. 14 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 8 ಪಂದ್ಯಗಳಲ್ಲಿ ಸೋಲನ್ನು ಕಂಡಿದ್ದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಏಳನೇ ಸ್ಥಾನ ಪಡೆದುಕೊಂಡಿತ್ತು.
8. 14 ಪಂದ್ಯಗಳನ್ನಾಡಿ 6 ಪಂದ್ಯಗಳಲ್ಲಿ ಗೆದ್ದು 8 ಪಂದ್ಯಗಳಲ್ಲಿ ಸೋತಿದ್ದ ಪಂಜಾಬ್ ಕಿಂಗ್ಸ್ ತಂಡ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 8ನೇ ಸ್ಥಾನ ಪಡೆದುಕೊಂಡಿತ್ತು.

9. 14 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 9 ಪಂದ್ಯಗಳಲ್ಲಿ ಸೋತಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ 10 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 9ನೇ ಸ್ಥಾನ ಪಡೆದುಕೊಂಡಿತ್ತು.
10. 13 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಗೆದ್ದು 9 ಪಂದ್ಯಗಳಲ್ಲಿ ಸೋತಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡ 8 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದುಕೊಂಡಿತ್ತು.

Story first published: Friday, May 26, 2023, 12:47 [IST]
Other articles published on May 26, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+