IPL 2023: ಈ ಬಾರಿ ಯಾರು ಗೆಲ್ತಾರೆ ಆರೆಂಜ್ ಕ್ಯಾಪ್, ಪರ್ಪಲ್ ಕ್ಯಾಪ್?

ಇಂದು ( ಮೇ 29 ) ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಫೈನಲ್ ಪಂದ್ಯದ ಮೂಲಕ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ತೆರೆ ಬೀಳಲಿದೆ.
ಎಲ್ಲಾ ಯೋಜನೆಯಂತೆ ನಡೆದಿದ್ದರೆ ನಿನ್ನೆಯೇ ಪಂದ್ಯ ಮುಗಿದು ಇಷ್ಟೊತ್ತಿಗೆ ಚಾಂಪಿಯನ್ ತಂಡ ಯಾವುದು ಎಂದು ಬಹಿರಂಗವಾಗಬೇಕಿತ್ತು. ಆದರೆ ನಿನ್ನೆ ಅಹ್ಮದಾಬಾದ್ ನಗರದಲ್ಲಿ ವಿಪರೀತ ಮಳೆಯಾದ ಕಾರಣ ಪಂದ್ಯ ನಡೆಯದೇ ಇಂದಿನ ರಿಸರ್ವ್ ಡೇಗೆ ಮುಂದೂಡಲ್ಪಟ್ಟಿದೆ.
ಇನ್ನು ಎರಡೂ ತಂಡಗಳು ಬಲಿಷ್ಠವಾಗಿದ್ದು, ಯಾವ ತಂಡ ಗೆಲ್ಲಲಿದೆ ಎಂಬ ಚರ್ಚೆ ಹಾಗೂ ಕುತೂಹಲ ಹೆಚ್ಚಾಗಿದೆ. ಅಲ್ಲದೇ ಒಂದನೇ ಕ್ವಾಲಿಫಯರ್ ಪಂದ್ಯದಲ್ಲಿ ಮುಖಾಮುಖಿಯಾಗಿದ್ದಾಗ ಚೆನ್ನೈ ಸೂಪರ್ ಕಿಂಗ್ಸ್ 15 ರನ್‌ಗಳ ಗೆಲುವನ್ನು ಸಾಧಿಸಿತ್ತು. ಹೀಗೆ ಅದೇ ರೀತಿಯ ಪ್ರದರ್ಶನವನ್ನು ಚೆನ್ನೈ ಸೂಪರ್ ಕಿಂಗ್ಸ್ ಈ ಪಂದ್ಯದಲ್ಲಿಯೂ ತೋರಿ ಐದನೇ ಬಾರಿಗೆ ಟ್ರೋಫಿ ಗೆಲ್ಲುತ್ತಾ ಅಥವಾ ಗುಜರಾತ್ ಟೈಟನ್ಸ್ ಗೆದ್ದು ಸತತ ಎರಡನೇ ಬಾರಿಗೆ ಚಾಂಪಿಯನ್ ಆಗುತ್ತಾ ಎಂಬ ಚರ್ಚೆಗಳು ಆರಂಭಗೊಂಡಿವೆ.
ಪಂದ್ಯದಲ್ಲಿ ಶುಬ್‌ಮನ್ ಗಿಲ್ ಅಬ್ಬರಿಸುವ ಸಾಧ್ಯತೆ ಹೆಚ್ಚಾಗಿದ್ದು, ಟೂರ್ನಿಯಲ್ಲಿ ಅತಿಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದು ಆರೆಂಜ್ ಕ್ಯಾಪ್ ಗೆಲ್ಲುವುದು ಪಕ್ಕಾ ಆಗಿದೆ. ಅತ್ತ ಅತಿಹೆಚ್ಚು ವಿಕೆಟ್ ಪಡೆದುಕೊಂಡಿರುವ ಆಟಗಾರರ ಪಟ್ಟಿಯಲ್ಲಿ 28 ವಿಕೆಟ್ ಪಡೆದುಕೊಂಡು ಮೊದಲ ಸ್ಥಾನದಲ್ಲಿರುವ ಮೊಹಮ್ಮದ್ ಶಮಿ ಹಾಗೂ 27 ವಿಕೆಟ್‌ಗಳನ್ನು ಪಡೆದುಕೊಂಡು ಎರಡನೇ ಸ್ಥಾನದಲ್ಲಿರುವ ರಶೀದ್ ಖಾನ್ ಇಬ್ಬರ ನಡುವೆ ಪರ್ಪಲ್ ಕ್ಯಾಪ್‌ಗಾಗಿ ಪೈಪೋಟಿ ಶುರುವಾಗಿದೆ.
ಫೈನಲ್ ಪಂದ್ಯದ ಆರಂಭಕ್ಕೂ ಮುನ್ನ ಆರೆಂಜ್ ಕ್ಯಾಪ್ ಹಾಗೂ ಪರ್ಪಲ್ ಕ್ಯಾಪ್ ಪಟ್ಟಿ ಈ ಕೆಳಕಂಡಂತಿದೆ..
ಆರೆಂಜ್ ಕ್ಯಾಪ್:
1. 16 ಇನ್ನಿಂಗ್ಸ್‌ನಲ್ಲಿ ಕಣಕ್ಕಿಳಿದು 851 ರನ್ ಬಾರಿಸಿರುವ ಗುಜರಾತ್ ಟೈಟನ್ಸ್ ತಂಡದ ಶುಬ್‌ಮನ್ ಗಿಲ್ ಅಗ್ರಸ್ಥಾನದಲ್ಲಿದ್ದಾರೆ.
2. 14 ಇನ್ನಿಂಗ್ಸ್‌ನಲ್ಲಿ ಕಣಕ್ಕಿಳಿದು 730 ರನ್ ಬಾರಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಫಾಫ್ ಡು ಪ್ಲೆಸಿಸ್ ಎರಡನೇ ಸ್ಥಾನದಲ್ಲಿದ್ದಾರೆ.
3. 14 ಇನ್ನಿಂಗ್ಸ್‌ನಲ್ಲಿ ಕಣಕ್ಕಿಳಿದು 639 ರನ್ ಬಾರಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ.
4. 14 ಇನ್ನಿಂಗ್ಸ್‌ನಲ್ಲಿ ಕಣಕ್ಕಿಳಿದು 625 ರನ್ ಬಾರಿಸಿರುವ ರಾಜಸ್ಥಾನ್ ರಾಯಲ್ಸ್ ತಂಡದ ಯಶಸ್ವಿ ಜೈಸ್ವಾಲ್ ನಾಲ್ಕನೇ ಸ್ಥಾನದಲ್ಲಿದ್ದಾರೆ.
5. 15 ಇನ್ನಿಂಗ್ಸ್‌ನಲ್ಲಿ ಕಣಕ್ಕಿಳಿದು 625 ರನ್ ಬಾರಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಡಿವಾನ್ ಕಾನ್ವೆ ಐದನೇ ಸ್ಥಾನದಲ್ಲಿದ್ದಾರೆ.
ಪರ್ಪಲ್ ಕ್ಯಾಪ್:
1. 16 ಇನ್ನಿಂಗ್ಸ್‌ನಲ್ಲಿ 28 ವಿಕೆಟ್ ಪಡೆದಿರುವ ಗುಜರಾತ್ ಟೈಟನ್ಸ್ ತಂಡದ ಮೊಹಮ್ಮದ್ ಶಮಿ ಅಗ್ರಸ್ಥಾನದಲ್ಲಿದ್ದಾರೆ.
2. 16 ಇನ್ನಿಂಗ್ಸ್‌ನಲ್ಲಿ 27 ವಿಕೆಟ್ ಪಡೆದಿರುವ ಗುಜರಾತ್ ಟೈಟನ್ಸ್ ತಂಡದ ರಶೀದ್ ಖಾನ್ ಎರಡನೇ ಸ್ಥಾನದಲ್ಲಿದ್ದಾರೆ.
3. 13 ಇನ್ನಿಂಗ್ಸ್‌ನಲ್ಲಿ 24 ವಿಕೆಟ್ ಪಡೆದಿರುವ ಗುಜರಾತ್ ಟೈಟನ್ಸ್ ತಂಡದ ಮೋಹಿತ್ ಶರ್ಮಾ 3ನೇ ಸ್ಥಾನದಲ್ಲಿದ್ದಾರೆ.
4. 16 ಇನ್ನಿಂಗ್ಸ್‌ನಲ್ಲಿ 22 ವಿಕೆಟ್ ಪಡೆದಿರುವ ಮುಂಬೈ ಇಂಡಿಯನ್ಸ್ ತಂಡದ ಪಿಯೂಷ್ ಚಾವ್ಲಾ 4ನೇ ಸ್ಥಾನದಲ್ಲಿದ್ದಾರೆ.
5. 14 ಇನ್ನಿಂಗ್ಸ್‌ನಲ್ಲಿ 21 ವಿಕೆಟ್ ಪಡೆದಿರುವ ರಾಜಸ್ಥಾನ್ ರಾಯಲ್ಸ್ 5ನೆ ಸ್ಥಾನದಲ್ಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications