IPL 2023: ಕೆಎಲ್ ರಾಹುಲ್ ಹೆಸರಿನಲ್ಲಿದ್ದ ಅತಿವೇಗದ ಐಪಿಎಲ್ ಅರ್ಧಶತಕ ದಾಖಲೆ ಮುರಿದ ಜೈಸ್ವಾಲ್!

ಇಂದು ( ಮೇ 11 ) ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಗೆಲುವನ್ನು ಸಾಧಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 149 ರನ್ ಕಲೆಹಾಕಿ ಎದುರಾಳಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 150 ರನ್‌ಗಳ ಗುರಿಯನ್ನು ನೀಡಿತ್ತು.
ಈ ಗುರಿಯನ್ನು ಕೇವಲ 13.1 ಓವರ್‌ಗಳಲ್ಲಿಯೇ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ 13.1 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 151 ರನ್ ಕಲೆಹಾಕಿ ರನ್ ಕಲೆಹಾಕಿ ಅಬ್ಬರಿಸಿದೆ. ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಕೇವಲ 13 ಎಸೆತಗಳಲ್ಲಿಯೇ 50 ರನ್ ಬಾರಿಸುವುದರ ಮೂಲಕ ಕೆಎಲ್ ರಾಹುಲ್ ಹೆಸರಿನಲ್ಲಿದ್ದ ಅತಿವೇಗದ ಐಪಿಎಲ್ ಅರ್ಧಶತಕದ ದಾಖಲೆಯನ್ನು ಯಶಸ್ವಿ ಜೈಸ್ವಾಲ್ ಮುರಿದು ಹಾಕಿದ್ದಾರೆ.
ಈ ಹಿಂದೆ 2018ರಲ್ಲಿ ನಡೆದಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕೆಎಲ್ ರಾಹುಲ್ ಮೊಹಾಲಿಯಲ್ಲಿ ನಡೆದಿದ್ದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿದು 14 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಅತಿವೇಗದ ಐಪಿಎಲ್ ಅರ್ಧಶತಕ ಬಾರಿಸಿದ ಆಟಗಾರ ಎಂಬ ದಾಖಲೆಯನ್ನು ಬರೆದಿದ್ದರು.
ಐಪಿಎಲ್ ಇತಿಹಾಸದಲ್ಲಿ ಅತಿವೇಗವಾಗಿ ಅರ್ಧಶತಕ ಬಾರಿಸಿರುವ ಆಟಗಾರರು
1. ಯಶಸ್ವಿ ಜೈಸ್ವಾಲ್ 13 ಎಸೆತಗಳಲ್ಲಿ ( ರಾಜಸ್ಥಾನ್ ರಾಯಲ್ಸ್ vs ಪಂಜಾಬ್ ಕಿಂಗ್ಸ್ 2023 )
2. ಕೆಎಲ್ ರಾಹುಲ್ 14 ಎಸೆತಗಳಲ್ಲಿ ( ಕಿಂಗ್ಸ್ ಇಲೆವೆನ್ ಪಂಹಾಬ್ vs ಡೆಲ್ಲಿ ಕ್ಯಾಪಿಟಲ್ಸ್ 2018 )
3. ಪ್ಯಾಟ್ ಕಮಿನ್ಸ್ 14 ಎಸೆತಗಳಲ್ಲಿ ( ಕೊಲ್ಕತ್ತಾ ನೈಟ್ ರೈಡರ್ಸ್ vs ಮುಂಬೈ ಇಂಡಿಯನ್ಸ್ 2022 )
4. ಯೂಸುಫ್ ಪಠಾಣ್ 15 ಎಸೆತಗಳಲ್ಲಿ ( ಕೊಲ್ಕತ್ತಾ ನೈಟ್ ರೈಡರ್ಸ್ vs ಸನ್ ರೈಸರ್ಸ್ ಹೈದರಾಬಾದ್ 2014 )
5. ಸುನಿಲ್ ನರೇನ್ 15 ಎಸೆತಗಳಲ್ಲಿ ( ಕೊಲ್ಕತ್ತಾ ನೈಟ್ ರೈಡರ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು 2017 )
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications