IPL 2024: ಮುಂಬೈ ಇಂಡಿಯನ್ಸ್‌ಗೆ ಮತ್ತೆ ರೋಹಿತ್ ಶರ್ಮಾ ನಾಯಕ?; ಎಬಿಡಿ ಹೇಳಿದ್ದೇನು?
ಬಹು ನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 17ನೇ ಆವೃತ್ತಿಗೆ ದಿನಗಣನೆ ಆರಂಭವಾಗಿದ್ದು, ಇದಕ್ಕಾಗಿ ಎಲ್ಲಾ ಹತ್ತು ಫ್ರಾಂಚೈಸಿಗಳು ತಮ್ಮ ತಂಡಗಳನ್ನು ಒಗ್ಗೂಡಿಸುತ್ತಿವೆ. ಮಾರ್ಚ್ 22ರಂದು ಆರ್‌ಸಿಬಿ ಮತ್ತು ಸಿಎಸ್‌ಕೆ ನಡುವಿನ ಪಂದ್ಯದ ಮೂಲಕ ಅದ್ಧೂರಿ ಚಾಲನೆ ಸಿಗಲಿದೆ.
ಇದೇ ವೇಳೆ ಮುಂಬರುವ ಐಪಿಎಲ್ ಆರಂಭಕ್ಕೂ ಮೊದಲು, ಆರ್‌ಸಿಬಿ ತಂಡದ ಮಾಜಿ ಸ್ಫೋಟಕ ಬ್ಯಾಟರ್ ಎಬಿ ಡಿವಿಲಿಯರ್ಸ್ ಅವರು ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವದ ಬದಲಾವಣೆಯ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಗಾಗಿ ನಡೆದ ಮಿನಿ ಹರಾಜಿಗೂ ಎರಡು ದಿನಗಳ ಮುನ್ನ ಮುಂಬೈ ಇಂಡಿಯನ್ಸ್ ಒಂದು ದೊಡ್ಡ ಬದಲಾವಣೆಯನ್ನು ಮಾಡಿತು. ರೋಹಿತ್ ಶರ್ಮಾ ಅವರಿಂದ ಕಿತ್ತು ಹಾರ್ದಿಕ್ ಪಾಂಡ್ಯಗೆ ನಾಯಕತ್ವದ ಜವಾಬ್ದಾರಿ ನೀಡಿತು.

ಗುಜರಾತ್ ಟೈಟನ್ಸ್ ತಂಡದಲ್ಲಿದ್ದ ಹಾರ್ದಿಕ್ ಪಾಂಡ್ಯ ಅವರನ್ನು ವಾಪಸ್ ಕರೆತಂದು ಮುಂಬೈ ಇಂಡಿಯನ್ಸ್ ತಂಡದ ನಾಯಕನನ್ನಾಗಿ ನೇಮಿಸಿದೆ. ಇದೀಗ ಆರ್‌ಸಿಬಿ ಮಾಜಿ ಸ್ಟಾರ್ ಬ್ಯಾಟರ್ ಎಬಿ ಡಿವಿಲಿಯರ್ಸ್ ಅವರು ಮುಂಬೈ ಇಂಡಿಯನ್ಸ್ ನಾಯಕತ್ವ ಬದಲಾವಣೆಯಲ್ಲಿ ದೊಡ್ಡ ವಿವಾದವನ್ನು ಪರಿಹರಿಸಿದ್ದಾರೆ.
ತಮ್ಮ ವಿವಾದಾತ್ಮಕ ನಾಯಕತ್ವ ಬದಲಾವಣೆಯ ನಂತರ, ಮುಂಬೈ ಇಂಡಿಯನ್ಸ್ ಕ್ರಿಕೆಟ್ ಜಗತ್ತಿನ ಗಮನ ಸೆಳೆಯಿತು. ಮುಂಬೈ ತಂಡದ ನಾಯಕನ ಹುದ್ದೆಯಿಂದ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಿದ್ದನ್ನು ನೋಡಿದ ಅವರ ಅಭಿಮಾನಿಗಳು ಕೂಡ ನಿರಾಶೆಗೊಂಡಿದ್ದರು.
ಮುಂಬರುವ ಪಂದ್ಯಾವಳಿಯಲ್ಲಿ ಉತ್ತಮವಾಗಿ ಆಡಲು ಮುಂಬೈ ಇಂಡಿಯನ್ಸ್‌ನ ಸ್ಟಾರ್ ಸ್ಟಡ್ಡ್ ಸ್ಕ್ವಾಡ್ ಎಲ್ಲಾ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಅಗತ್ಯವಿದೆ ಎಂದು ದಕ್ಷಿಣ ಆಫ್ರಿಕಾ ತಂಡದ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ಹೇಳಿದ್ದಾರೆ.

"ಮುಂಬೈ ಇಂಡಿಯನ್ಸ್ ಐಪಿಎಲ್‌ನ ನಂಬಲಾಗದಷ್ಟು ಯಶಸ್ವಿ ತಂಡ ಮತ್ತು ಅವರು ಐದು ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಪಾಂಡ್ಯ ಹೊಸ ನಾಯಕನಾಗಿ ಬರುತ್ತಿದ್ದಾರೆ ಎಂಬುದು ದೊಡ್ಡ ವಿವಾದವಾಗಿತ್ತು. ಆದರೂ ತಂಡವು ಸಂತೋಷವಾಗಿರುವಂತೆ ತೋರುತ್ತದೆ," ಎಂದು ಎಬಿ ಡಿವಿಲಿಯರ್ಸ್ ತಿಳಿಸಿದರು.
"ಫ್ರಾಂಚೈಸಿ ಮುಂದೆ ಹೋದಂತೆ ತೋರುತ್ತಿದೆ. ಹಾರ್ದಿಕ್ ಪಾಂಡ್ಯ ಅವರ ತಮ್ಮ ಮೂಲ ತಂಡವಾದ ಮುಂಬೈ ಇಂಡಿಯನ್ಸ್‌ನ ನೀಲಿ ಜೆರ್ಸಿಯಲ್ಲಿ ನೋಡುವುದು ಅದ್ಭುತವಾಗಿದೆ. ತಮ್ಮ ಮೊದಲ ಪಂದ್ಯವನ್ನು ಗುಜರಾತ್ ಟೈಟನ್ಸ್ ವಿರುದ್ಧ ಪ್ರಾರಂಭಿಸಲಿದ್ದಾರೆ. ಇದು ಎಷ್ಟು ವಿಪರ್ಯಾಸ ನೋಡಿ," ಎಂದು ಎಬಿ ಡಿವಿಲಿಯರ್ಸ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹೇಳಿದ್ದಾರೆ.
"ಮುಂಬೈ ಇಂಡಿಯನ್ಸ್ ತಮ್ಮ ನಾಯಕತ್ವ ಬದಲಾವಣೆ ನಿರ್ಧಾರದಿಂದ ಹಿಂದೆ ಸರಿಯಬಹುದೆಂದು" ದಕ್ಷಿಣ ಆಫ್ರಿಕಾ ಕ್ರಿಕೆಟ್ ಲೆಜೆಂಡ್ ಒತ್ತಿ ಹೇಳಿದರು. ಆದಾಗ್ಯೂ, ತಮ್ಮ ಆರಂಭಿಕ ಪಂದ್ಯದಲ್ಲಿ ತಂಡವು ಹೇಗೆ ಮೇಳೈಸುತ್ತದೆ ಎಂಬುದನ್ನು ನೋಡಲು ಆಸಕ್ತಿದಾಯಕವಾಗಿದೆ.
ಕಳೆದ ವರ್ಷದ ರನ್ನರ್-ಅಪ್ ಗುಜರಾತ್ ಟೈಟನ್ಸ್ ಮತ್ತು ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮಾರ್ಚ್ 24ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ಮುಖಾಮುಖಿಯಲ್ಲಿ ಮುಖಾಮುಖಿಯಾಗಲಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications