IPL 2024: ಯುವ ನಾಯಕರ ನಡುವೆ ಇಂದು ಹೋರಾಟ; ರೋಚಕ ಹೆಚ್ಚಿಸಿದೆ ಸಿಎಸ್‌ಕೆ, ಗುಜರಾತ್ ಕಾದಾಟ
ಭವಿಷ್ಯದ ತಂಡವನ್ನು ಕಟ್ಟುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಿರುವ ಐಪಿಎಲ್‌ನ ಹಲವು ತಂಡಗಳು ಈ ನಿಟ್ಟಿನಲ್ಲಿ ಈ ಆವೃತ್ತಿಯಲ್ಲೇ ಬದಲಾವಣೆ ಮಾಡಿವೆ. ಈ ಪಟ್ಟಿಯಲ್ಲಿ ಹಲವು ಬದಲಾವಣೆಗಳನ್ನು ಎದ್ದು ಕಾಣುತ್ತವೆ. ಆದರೆ ಪ್ರಮುಖವಾಗಿ ಕಾಣುವ ಚೆಂಜ್ ಅಂದರೆ ಅದು, ನಾಯಕರ ಬದಲಾವಣೆ. ಚೆನ್ನೈ ಸೂಪರ್ ಕಿಂಗ್ಸ್ ತಂಡ ಎಂಎಸ್ ಧೋನಿ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಯುವ ಆಟಗಾರ ರುತುರಾಜ್ ಗಾಯಕ್ವಾಡ್ ಅವರಿಗೆ ಪಟ್ಟ ಕಟ್ಟಿದೆ.
ನಾಯಕರ ಬದಲಾವಣೆಯಲ್ಲಿ ಗುಜರಾತ್ ಟೈಟನ್ಸ್ ತಂಡ ಸಹ ಎದ್ದು ಕಾಣುತ್ತದೆ. ಈ ತಂಡವನ್ನು ಎರಡು ಬಾರಿ ಫೈನಲ್‌ಗೆ ಕೊಂಡಯ್ದ ನಾಯಕ ಹಾರ್ದಿಕ್ ಪಾಂಡ್ಯ, ಈ ಬಾರಿ ಗುಜರಾತ್ ತಂಡವನ್ನು ತೊರೆದಿದ್ದಾರೆ. ಇವರನ್ನು ಮುಂಬೈ ಇಂಡಿಯನ್ಸ್ ಟ್ರೇಡ್ ಮಾಡಿದ್ದು, ಅವರಿಗೆ ನಾಯಕತ್ವದ ಜವಾಬ್ದಾರಿ ನೀಡಲಾಗಿದೆ. ಇನ್ನು ಹಾರ್ದಿಕ್‌ರಿಂದ ತೆರವಾದ ಸ್ಥಾನವನ್ನು ಭರವಸೆಯ ಆಟಗಾರ ಶುಭಮನ್ ಗಿಲ್ ತುಂಬಿದ್ದಾರೆ. ಉಭಯ ತಂಡಗಳು ಮೊದಲ ಪಂದ್ಯವನ್ನು ಗೆದ್ದಿದ್ದರಿಂದ, ಎರಡನೇ ಗೆಲುವಿನ ಕನಸಿನಲ್ಲಿವೆ.

ಸಂಘಟಿತ ಆಟವೇ ಬಲ
ಸಿಎಸ್‌ಕೆ ತಂಡ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವನ್ನು ಮಣಿಸಿ ಶುಭಾರಂಭ ಮಾಡಿತ್ತು. ಈ ಪಂದ್ಯದಲ್ಲೂ ಸಂಘಟಿತ ಆಟ ಎದ್ದು ಕಂಡಿತ್ತು. ಐಪಿಎಲ್‌ಗೆ ಪದಾರ್ಪಣೆ ಮಾಡಿದ್ದ ರಚಿನ್ ರವೀಂದ್ರ ತಮ್ಮಲ್ಲಿ ಚುಟುಕು ಕ್ರಿಕೆಟ್ ಆಡುವ ಕಲೆ ಇದೆ ಎಂದು ಸಾರಿದ್ದಾರೆ. ನಾಯಕ ರುತುರಾಜ್ ಗಾಯಕ್ವಾಡ್ ಸಹ ಪರಿಸ್ಥಿತಿಗೆ ತಕ್ಕಂತೆ ಬ್ಯಾಟ್ ಮಾಡಬಲ್ಲರು. ಮಧ್ಯಮ ಕ್ರಮಾಂದಲ್ಲಿ ಅಜಿಂಕ್ಯ ರಹಾನೆ, ಡೆರಿಲ್ ಮಿಚಲ್ ತಂಡ ತಮ್ಮ ಮೇಲೆ ಇಟ್ಟ ನಂಬಿಕೆಗೆ ಪೂರಕವಾಗಿ ಬ್ಯಾಟ್ ಮಾಡಿದ್ದಾರೆ. ಯುವ ಆಟಗಾರ ಸಮೀರ್ ರಿಜ್ವಿ ಅವರ ಮೇಲೆ ಭರವಸೆ ಹೆಚ್ಚಿದೆ. ನಾಯಕ ಮಹೇಂದ್ರ ಸಿಂಗ್ ಧೋನಿ ತಮ್ಮ ಸ್ಥಾನಕ್ಕೆ ನ್ಯಾಯ ತುಂಬ ಬಲ್ಲ ಕ್ಷಮತೆಯನ್ನು ಹೊಂದಿದ್ದಾರೆ.
ವೇಗದ ಬೌಲರ್ ರೂಪದಲ್ಲಿ ಕಾಣಿಸಿಕೊಳ್ಳುವ ದೀಪಕ್ ಚಹಾರ್ ಹಾಗೂ ಮುಸ್ತಾಫಿಜುರ್ ರೆಹಮಾನ್ ಪವರ್ ಪ್ಲೇ ಹಾಗೂ ಡೆತ್ ಓವರ್‌ಗಳಲ್ಲಿ ಎದುರಾಳಿಗೆ ಕಾಟ ನೀಡಬಲ್ಲರು. ಮಿಡ್ಲ್ ಓವರ್‌ಗಳಲ್ಲಿ ತುಷಾರ್ ದೇಶಪಾಂಡೆ ಶಿಸ್ತು ಬದ್ಧ ದಾಳಿ ಸಂಘಟಿಸುವ ವಿಶ್ವಾಸ ಹೊಂದಿದ್ದಾರೆ. ಸ್ಪಿನ್ ಬೌಲಿಂಗ್ ರೂಪದಲ್ಲಿ ರವೀಂದ್ರ ಜಡೇಜಾ, ಮಹೇಶ್ ತೀಕ್ಷಣ ಕಾಣಿಸಿಕೊಳ್ಳಲಿದ್ದು, ರಚಿನ್ ರವೀಂದ್ರ ಸಹ ಇವರಿಗೆ ಸಾಥ್ ನೀಡಬಲ್ಲರು.
ಯುವ ಆಟಗಾರರ ಮೇಲೆ ಭರವಸೆ
ಯುವ ಆಟಗಾರರ ದಂಡನ್ನೇ ಹೊಂದಿರುವ ಗುಜರಾತ್ ಟೈಟನ್ಸ್ ಮತ್ತೊಂದು ಜಯದ ಕನಸಿನಲ್ಲಿದೆ. ನಾಯಕ ಶುಭಮನ್ ಗಿಲ್ ಹಾಗೂ ಅನುಭವಿ ವಿಕೆಟ್ ಕೀಪರ್ ಬ್ಯಾಟರ್ ವೃದ್ಧಿಮನ್ ಸಹಾ ಬಿಗ್ ಇನ್ನಿಂಗ್ಸ್ ಕಟ್ಟುವ ಸೂಚನೆ ನೀಡಿದ್ದಾರೆ. ಮಿಡ್ಲ್ ಆರ್ಡರ್‌ನಲ್ಲಿ ಅಜ್ಮತುಲ್ಲಾ ಒಮರ್ಜಾಯ್, ರಾಹುಲ್ ತೆವಾಟಿಯಾ ತಂಡದ ಬಲ ಹೆಚ್ಚಿಸಿದ್ದಾರೆ. ಇನ್ನು ಸ್ಟಾರ್ ಆಟಗಾರರಾ ಡೇವಿಡ್ ಮಿಲ್ಲರ್, ವಿಜಯ್ ಶಂಕರ್ ತಮ್ಮ ಘನತೆಗೆ ತಕ್ಕ ಆಟವನ್ನು ಆಡಬೇಕಿದೆ.

ವೇಗದ ಬೌಲಿಂಗ್ ವಿಭಾಗದಲ್ಲಿ ಉಮೇಶ್ ಯಾದವ್, ಮೋಹಿತ್ ಶರ್ಮಾ ಆರಂಭದಲ್ಲಿ ಹಾಗೂ ಅಂತ್ಯದಲ್ಲಿ ಎದುರಾಳಿ ಬ್ಯಾಟರ್‌ಗಳನ್ನು ಕಾಡಬಲ್ಲರು. ಅದ್ರಲ್ಲೂ ಉಮೇಶ್ ಯಾದವ್ ಭರ್ಜರಿ ಲಯದಲ್ಲಿರುವುದು ತಂಡಕ್ಕೆ ಬೂಸ್ಟ್ ಸಿಕ್ಕಂತೆ ಆಗಿದೆ. ಸ್ಪಿನ್ ಬೌಲರ್ ಆಗಿ ರಶೀದ್ ಖಾನ್ ಕಾಣಿಸಿಕೊಳ್ಳಲಿದ್ದು, ತಮ್ಮ ಪಿರ್ಕಿ ಸಹಾಯದಿಂದ ಬ್ಯಾಟ್ಸ್‌ಮನ್‌ಗಳನ್ನು ಕಾಡಬಲ್ಲರು.
ಸಿಎಸ್‌ಕೆ ಸಂಭಾವ್ಯ ತಂಡ: ರುತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ಅಜಿಂಕ್ಯ ರಹಾನೆ, ಡೆರಿಲ್ ಮಿಚೆಲ್, ರವೀಂದ್ರ ಜಡೇಜಾ, ಸಮೀರ್ ರಿಜ್ವಿ, ಮಹೇಂದ್ರ ಸಿಂಗ್ ಧೋನಿ (ವಿಕೆಟ್ ಕೀಪರ್), ದೀಪಕ್ ಚಹಾರ್, ಮಹೇಶ್ ತೀಕ್ಷಣ, ಮುಸ್ತಾಫಿಜುರ್ ರೆಹಮಾನ್ ಮತ್ತು ತುಷಾರ್ ದೇಶಪಾಂಡೆ.
ಗುಜರಾತ್ ಟೈಟಾನ್ಸ್ ಸಂಭಾವ್ಯ ತಂಡ: ಶುಭಮನ್ ಗಿಲ್ (ನಾಯಕ), ವೃದ್ಧಿಮಾನ್ ಸಹಾ, ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ಅಜ್ಮತುಲ್ಲಾ ಒಮರ್ಜಾಯ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಉಮೇಶ್ ಯಾದವ್, ಮೋಹಿತ್ ಶರ್ಮಾ, ಆರ್ ಸಾಯಿ ಕಿಶೋರ್/ ಸ್ಪೆನ್ಸರ್ ಜಾನ್ಸನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications