For Quick Alerts
ALLOW NOTIFICATIONS  
For Daily Alerts
 

CSK vs RR: ಸಿಎಸ್‌ಕೆ vs ರಾಜಸ್ಥಾನ್ ರಾಯಲ್ಸ್ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ

ಭಾನುವಾರ, ಮೇ 12ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 61ನೇ ಪಂದ್ಯದಲ್ಲಿ ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪ್ರವಾಸಿ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿವೆ.

ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ ಮಾಡಿದರು. ಹೀಗಾಗಿ ರುತುರಾಜ್ ಗಾಯಕ್ವಾಡ್ ನಾಯಕತ್ವದ ಸಿಎಸ್‌ಕೆ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

IPL 2024 Chennai Super Kings CSK vs Rajasthan Royals Match Toss Report And Playing 11 Of Both Teams

2024ರ ಐಪಿಎಲ್ ಆವೃತ್ತಿಯಲ್ಲಿ ಸಿಎಸ್‌ಕೆ ತಂಡ ತವರಿನಲ್ಲಿ ಆಡುತ್ತಿರುವ ಕೊನೆಯ ಪಂದ್ಯವಾಗಿರಲಿದೆ. ಅಷ್ಟೇ ಅಲ್ಲದೆ, ಮಾಜಿ ನಾಯಕ ಎಂಎಸ್ ಧೋನಿಗೂ ಚೆಪಾಕ್‌ನಲ್ಲಿ ಕೊನೆಯ ಐಪಿಎಲ್ ಪಂದ್ಯವಾಗಿರಲಿದೆ. ಮುಂದಿನ ವರ್ಷದಿಂದ ಆಡದಿರುವುದು ಬಹುತೇಕ ಖಚಿತವಾಗಿದೆ.

ಐಪಿಎಲ್ 2024ರಲ್ಲಿ ಸಿಎಸ್‌ಕೆ ತಂಡ ಮಿಶ್ರ ಪ್ರದರ್ಶನ ನೀಡಿದ್ದು, ಈವರೆಗೆ ಆಡಿದ 12 ಪಂದ್ಯಗಳಲ್ಲಿ 6 ಗೆಲುವು ಮತ್ತು 6 ಸೋಲು ಅನುಭವಿಸಿದ್ದು, 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ರುತುರಾಜ್ ಗಾಯಕ್ವಾಡ್ ನಾಯಕತ್ವದ ಸಿಎಸ್‌ಕೆ ತಂಡವು ಪ್ಲೇಆಫ್‌ನ ರೇಸ್‌ನಲ್ಲಿ ಉಳಿಯಲು ಈ ಪಂದ್ಯವನ್ನು ಗೆಲ್ಲುವ ಅಗತ್ಯವಿದೆ.

IPL 2024 Chennai Super Kings CSK vs Rajasthan Royals Match Toss Report And Playing 11 Of Both Teams

ಮತ್ತೊಂದೆಡೆ, ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ಇದುವರೆಗೆ ಐಪಿಎಲ್ 2024ರಲ್ಲಿ ಸ್ಥಿರ ಪ್ರದರ್ಶನ ನೀಡಿದ್ದು, ಆಡಿದ 11 ಪಂದ್ಯಗಳಲ್ಲಿ 8 ಗೆಲುವು ಮತ್ತು 3 ಸೋಲು ಕಂಡಿದ್ದು, 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ಇಂದಿನ ಪಂದ್ಯ ಗೆದ್ದರೆ, ಕೆಕೆಆರ್ ನಂತರ ಪ್ಲೇಆಫ್ ಪ್ರವೇಶಿಸಿದ 2ನೇ ತಂಡವಾಗಲಿದೆ.

ಸಿಎಸ್‌ಕೆ vs ಆರ್‌ಆರ್ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಿನ ಐಪಿಎಲ್ 2024ರ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ ಮತ್ತು ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.

ರಾಜಸ್ಥಾನ್ ರಾಯಲ್ಸ್ vs ಚೆನ್ನೈ ಸೂಪರ್ ಕಿಂಗ್ಸ್ ಆಡುವ 11ರ ಬಳಗ

ಚೆನ್ನೈ ಸೂಪರ್ ಕಿಂಗ್ಸ್: ರಚಿನ್ ರವೀಂದ್ರ, ರುತುರಾಜ್ ಗಾಯಕ್ವಾಡ್ (ನಾಯಕ), ಡ್ಯಾರಿಲ್ ಮಿಚೆಲ್, ಮೊಯಿನ್ ಅಲಿ, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ತುಷಾರ್ ದೇಶಪಾಂಡೆ, ಸಿಮರ್ಜೀತ್ ಸಿಂಗ್, ಮಹೀಶ್ ತೀಕ್ಷಣ.

ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ/ ವಿಕೆಟ್ ಕೀಪರ್), ರಿಯಾನ್ ಪರಾಗ್, ಶುಭಂ ದುಬೆ, ಧ್ರುವ ಜುರೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಹಾಲ್.

Story first published: Sunday, May 12, 2024, 15:16 [IST]
Other articles published on May 12, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+