Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

CSK vs GT: ಗೆದ್ದ ತಂಡಗಳ ಕಾಳಗದಲ್ಲಿ ಗೆಲ್ಲುವರಾರು?; ಟಾಸ್ ವರದಿ, ಆಡುವ 11ರ ಬಳಗ

ಮಂಗಳವಾರ, ಮಾರ್ಚ್ 26ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) ಏಳನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡವು ಗುಜರಾತ್ ಟೈಟನ್ಸ್ ತಂಡವನ್ನು ಎದುರಿಸುತ್ತಿದೆ.

ಟಾಸ್ ಗೆದ್ದ ಗುಜರಾತ್ ಟೈಟನ್ಸ್ ತಂಡದ ನಾಯಕ ಶುಭ್ಮನ್ ಗಿಲ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ, ರುತುರಾಜ್ ಗಾಯಕ್ವಡ್ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

IPL 2024 Chennai Super Kings vs Gujarat Titans Match Toss Report And Playing 11 Details

ಗಮನಾರ್ಹವಾಗಿ, ಉಭಯ ತಂಡಗಳು ತಮ್ಮ ಹಿಂದಿನ ಪಂದ್ಯದಲ್ಲಿ ಗೆಲುವಿನ ಹಿನ್ನೆಲೆಯಿಂದ ಈ ಪಂದ್ಯಕ್ಕೆ ಬರುತ್ತಿವೆ. ಸಿಎಸ್‌ಕೆ ತನ್ನ ಮೊದಲ ಪಂದ್ಯದಲ್ಲಿ ಆರ್‌ಸಿಬಿ ತಂಡದ ವಿರುದ್ಧ ಗೆಲುವು ಸಾಧಿಸಿದ್ದರೆ, ಗುಜರಾತ್ ಟೈಟನ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ಸಾಧಿಸಿತು.

ಮತ್ತೊಂಡೆದೆ, ರುತುರಾಜ್ ಗಾಯಕ್ವಾಡ್ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ತವರಿನ ಅಂಗಳದಲ್ಲಿ ಆಡುತ್ತಿರುವುದರಿಂದ ದೊಡ್ಡ ಸಂಖ್ಯೆಯ ಅಭಿಮಾನಿಗಳ ಬೆಂಬಲದೊಂದಿಗೆ ಶುಭ್ಮನ್ ಗಿಲ್ ನಾಯಕತ್ವದ ಗುಜರಾತ್ ಟೈಟನ್ಸ್ ತಂಡವನ್ನು ಎದುರಿಸುವಾಗ ಹೆಚ್ಚಿನ ಆತ್ಮವಿಶ್ವಾಸದಲ್ಲಿರುತ್ತದೆ.

IPL 2024 Chennai Super Kings vs Gujarat Titans Match Toss Report And Playing 11 Details

ಸಿಎಸ್‌ಕೆ vs ಜಿಟಿ ಪಂದ್ಯದ ಟಿವಿ ಮತ್ತು ಲೈವ್ ಸ್ಟ್ರೀಮಿಂಗ್

ಚೆನ್ನೈ ಸೂಪರ್ ಕಿಂಗ್ಸ್ vs ಗುಜರಾತ್ ಟೈಟನ್ಸ್ ನಡುವಿನ ಐಪಿಎಲ್ 2024ರ ಆರನೇ ಪಂದ್ಯವು ಭಾರತೀಯ ಕಾಲಮಾನ ಸಂಜೆ 7.30ಕ್ಕೆ ಆರಂಭವಾಗುತ್ತಿದೆ. ಭಾರತದ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ.

ಮತ್ತೊಂದೆಡೆ, ಜಿಯೋಸಿನಿಮಾ ಐಪಿಎಲ್ ಲೈವ್ ಸ್ಟ್ರೀಮಿಂಗ್ ಹಕ್ಕುಗಳನ್ನು ಹೊಂದಿದ್ದು, ಪಂದ್ಯವನ್ನು ಮೊಬೈಲ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಸಂಪೂರ್ಣವಾಗಿ ಉಚಿತವಾಗಿ ಲಭ್ಯವಿರುತ್ತದೆ.

ಗುಜರಾತ್ ಟೈಟನ್ಸ್ vs ಚೆನ್ನೈ ಸೂಪರ್ ಕಿಂಗ್ಸ್ ಆಡುವ 11ರ ಬಳಗ

ಚೆನ್ನೈ ಸೂಪರ್ ಕಿಂಗ್ಸ್: ರುತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ಅಜಿಂಕ್ಯ ರಹಾನೆ, ಡೆರಿಲ್ ಮಿಚೆಲ್, ಶಿವಂ ದುಬೆ, ರವೀಂದ್ರ ಜಡೇಜಾ, ಸಮೀರ್ ರಿಜ್ವಿ, ಎಂಎಸ್ ಧೋನಿ(ವಿಕೆಟ್ ಕೀಪರ್), ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮುಸ್ತಫಿಜುರ್ ರೆಹಮಾನ್.

ಗುಜರಾತ್ ಟೈಟನ್ಸ್: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭ್ಮನ್ ಗಿಲ್ (ನಾಯಕ), ಅಜ್ಮತುಲ್ಲಾ ಒಮರ್ಜಾಯ್, ಡೇವಿಡ್ ಮಿಲ್ಲರ್, ವಿಜಯ್ ಶಂಕರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಉಮೇಶ್ ಯಾದವ್, ಮೋಹಿತ್ ಶರ್ಮಾ, ಸ್ಪೆನ್ಸರ್ ಜಾನ್ಸನ್.

Story first published: Tuesday, March 26, 2024, 19:11 [IST]
Other articles published on Mar 26, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+