Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

CSK vs LSG IPL 2024: ಚೆನ್ನೈ vs ಲಕ್ನೋ ಹೈ-ವೋಲ್ಟೇಜ್ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ

ಮಂಗಳವಾರ, ಏಪ್ರಿಲ್ 23ರಂದು ಚೆನ್ನೈನ ಐಕಾನಿಕ್ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 39ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಮತ್ತು ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ತಂಡಗಳು ಮುಖಾಮುಖಿಯಾಗಿವೆ.

ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ರುತುರಾಜ್ ಗಾಯಕ್ವಾಡ್ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

IPL 2024 Chennai Super Kings vs Lucknow Super Giants Match Toss Report Playing 11 Details

ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ಸೆಣಸಾಡಿದ ಮೂರು ದಿನಗಳ ನಂತರ, ಉಭಯ ತಂಡಗಳು ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಸೆಣಸಾಡುತ್ತಿದ್ದು, ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಹಿಂದಿನ ಪಂದ್ಯದ ಸೋಲಿಗೆ ಪ್ರತೀಕಾರ ತೀರಿಸಿಕೊಳ್ಳಲು ಸಿಎಸ್‌ಕೆ ತಂಡ ಎದುರು ನೋಡುತ್ತಿದೆ.

ರುತುರಾಜ್ ಗಾಯಕ್ವಾಡ್ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈವರೆಗೆ ಆಡಿದ 7 ಪಂದ್ಯಗಳಲ್ಲಿ 4 ಗೆಲುವು ಮತ್ತು 3 ಸೋಲುಗಳೊಂದಿಗೆ ಪ್ರಸ್ತುತ ಐಪಿಎಲ್ 2024ರ ಅಂಕಪಟ್ಟಿಯಲ್ಲಿ ಅಗ್ರ 4ನೇ ಸ್ಥಾನದಲ್ಲಿದೆ.

IPL 2024 Chennai Super Kings vs Lucknow Super Giants Match Toss Report Playing 11 Details

ಮತ್ತೊಂದೆಡೆ, ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಆಡಿದ 7 ಪಂದ್ಯಗಳಲ್ಲಿ 4 ಪಂದ್ಯಗಳಲ್ಲಿ ಗೆಲುವು ಮತ್ತು 3 ಪಂದ್ಯಗಳಲ್ಲಿ ಸೋಲಿನ ನಂತರ, ಪ್ರಸ್ತುತ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.

ಸಿಎಸ್‌ಕೆ vs ಎಲ್‌ಎಸ್‌ಜಿ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಐಪಿಎಲ್ 2024ರ ರೋಚಕ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಿದ್ದರೆ, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.

ಸಿಎಸ್‌ಕೆ vs ಎಲ್‌ಎಸ್‌ಜಿ ಆಡುವ 11ರ ಬಳಗ

ಚೆನ್ನೈ ಸೂಪರ್ ಕಿಂಗ್ಸ್: ರುತುರಾಜ್ ಗಾಯಕ್ವಾಡ್ (ನಾಯಕ), ಡೇರಿಲ್ ಮಿಚೆಲ್, ಅಜಿಂಕ್ಯ ರಹಾನೆ, ಶಿವಂ ದುಬೆ, ಮೊಯಿನ್ ಅಲಿ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್ ಕೀಪರ್), ದೀಪಕ್ ಚಹಾರ್, ತುಷಾರ್ ದೇಶಪಾಂಡೆ, ಮುಸ್ತಾಫಿಜುರ್ ರೆಹಮಾನ್, ಮತೀಶ ಪತಿರಾನ.

ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ನಾಯಕ/ ವಿಕೆಟ್ ಕೀಪರ್), ಕ್ವಿಂಟನ್ ಡಿ ಕಾಕ್, ದೀಪಕ್ ಹೂಡಾ, ಮಾರ್ಕಸ್ ಸ್ಟೊಯಿನಿಸ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಮ್ಯಾಟ್ ಹೆನ್ರಿ, ರವಿ ಬಿಷ್ಣೋಯ್, ಯಶ್ ಠಾಕೂರ್, ಮೊಹ್ಸಿನ್ ಖಾನ್.

Story first published: Tuesday, April 23, 2024, 19:06 [IST]
Other articles published on Apr 23, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+