ಭಾನುವಾರ, ಮೇ 12ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 61ನೇ ಪಂದ್ಯದಲ್ಲಿ ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪ್ರವಾಸಿ ರಾಜಸ್ಥಾನ್ ರಾಯಲ್ಸ್ ತಂಡಗಳು ನಿರ್ಣಾಯಕ ಪಂದ್ಯದಲ್ಲಿ ಸೆಣಸಾಡಲು ಸಜ್ಜಾಗಿವೆ.
ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋತರೆ, ರುತುರಾಜ್ ಗಾಯಕ್ವಾಡ್ ನಾಯಕತ್ವದ ಸಿಎಸ್‌ಕೆ ತಂಡ ಪ್ಲೇಆಫ್‌ಗೆ ಅರ್ಹತೆ ಪಡೆಯಲು ವಿಫಲವಾಗಲಿದೆ. ಆಗ ಈ ಆವೃತ್ತಿಯಲ್ಲಿ ಸಿಎಸ್‌ಕೆ ತವರಿನಲ್ಲಿ ಆಡುವ ಕೊನೆಯ ಪಂದ್ಯವಾಗಿರಲಿದೆ. ಅಷ್ಟೇ ಅಲ್ಲದೆ, ಮಾಜಿ ನಾಯಕ ಎಂಎಸ್ ಧೋನಿಗೂ ಚೆಪಾಕ್‌ನಲ್ಲಿ ಕೊನೆಯ ಐಪಿಎಲ್ ಪಂದ್ಯವಾಗಿರಲಿದೆ.

ಹೀಗಾಗಿ, ಸಿಎಸ್‌ಕೆ ಮತ್ತು ಎಂಎಸ್ ಧೋನಿ ಅಭಿಮಾನಿಗಳು ತಮ್ಮ ತಂಡವು ಲೀಗ್ ಹಂತದ ಉಳಿದಿರುವ ಎಲ್ಲಾ ಪಂದ್ಯಗಳನ್ನು ಗೆಲ್ಲಲು ಬಯಸುತ್ತಿದ್ದಾರೆ. ಐಪಿಎಲ್ 2024ರಲ್ಲಿ ಸಿಎಸ್‌ಕೆ ತಂಡ ಮಿಶ್ರ ಪ್ರದರ್ಶನ ನೀಡಿದ್ದು, ಈವರೆಗೆ ಆಡಿದ 12 ಪಂದ್ಯಗಳಲ್ಲಿ 6 ಗೆಲುವು ಮತ್ತು 6 ಸೋಲು ಅನುಭವಿಸಿದ್ದು, 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.
ಮತ್ತೊಂದೆಡೆ, ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ಇದುವರೆಗೆ ಐಪಿಎಲ್ 2024ರಲ್ಲಿ ಸ್ಥಿರ ಪ್ರದರ್ಶನ ನೀಡಿದ್ದು, ಆಡಿದ 11 ಪಂದ್ಯಗಳಲ್ಲಿ 8 ಗೆಲುವು ಮತ್ತು 3 ಸೋಲು ಕಂಡಿದ್ದು, 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ಇಂದಿನ ಪಂದ್ಯ ಗೆದ್ದರೆ, ಕೆಕೆಆರ್ ನಂತರ ಪ್ಲೇಆಫ್ ಪ್ರವೇಶಿಸಿದ 2ನೇ ತಂಡವಾಗಲಿದೆ.
ರುತುರಾಜ್ ಗಾಯಕ್ವಾಡ್ ನಾಯಕತ್ವದ ಸಿಎಸ್‌ಕೆ ತಂಡವು ಪ್ಲೇಆಫ್‌ನ ರೇಸ್‌ನಲ್ಲಿ ಉಳಿಸಿಕೊಳ್ಳಲು ಈ ಪಂದ್ಯವನ್ನು ಗೆಲ್ಲುವ ಅಗತ್ಯವಿದೆ. ಇತ್ತ ಸಂಜು ಸ್ಯಾಮ್ಸನ್ ನಾಯಕತ್ವದ ತಂಡಕ್ಕೆ ಪ್ರಸಕ್ತ ಪಂದ್ಯಾವಳಿಯ ಪ್ಲೇಆಫ್ ಹಂತಕ್ಕೆ ಎಷ್ಟು ವೇಗವಾಗಿ ಅರ್ಹತೆ ಪಡೆಯುತ್ತಾರೆ ಎಂಬುದು ವಿಷಯವಾಗಿದೆ.

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಐಪಿಎಲ್‌ನಲ್ಲಿ ನಿಕಟ ಮುಖಾಮುಖಿ ದಾಖಲೆಯನ್ನು ಹೊಂದಿವೆ. ಈವರೆಗಿನ 28 ಮುಖಾಮುಖಿಗಳಲ್ಲಿ ಸಿಎಸ್‌ಕೆ 15 ಪಂದ್ಯಗಳಲ್ಲಿ ಗೆದ್ದಿದ್ದರೆ, ರಾಜಸ್ಥಾನ್ ರಾಯಲ್ಸ್ ತಂಡ 13 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಆದಾಗ್ಯೂ, ಇತ್ತೀಚಿನ ಫಾರ್ಮ್ ರಾಜಸ್ಥಾನ್ ರಾಯಲ್ಸ್ ತಂಡ ಮುನ್ನಡೆ ಸಾಧಿಸಿದೆ. ಉಭಯ ತಂಡಗಳ ಕೊನೆಯ 5 ಮುಖಾಮುಖಿಗಳಲ್ಲಿ ರಾಜಸ್ಥಾನ್ 4 ಪಂದ್ಯಗಳನ್ನು ಗೆದ್ದಿದೆ.
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಿನ ಐಪಿಎಲ್ 2024ರ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ ಮತ್ತು ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.
ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ/ ವಿಕೆಟ್ ಕೀಪರ್), ರಿಯಾನ್ ಪರಾಗ್, ಶುಭಂ ದುಬೆ, ರೋವ್ಮನ್ ಪೊವೆಲ್, ಡೊನೊವನ್ ಫೆರೇರಾ/ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ಯುಜ್ವೇಂದ್ರ ಚಾಹಲ್, ಸಂದೀಪ್ ಶರ್ಮಾ.
ರುತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ಡ್ಯಾರಿಲ್ ಮಿಚೆಲ್, ಶಿವಂ ದುಬೆ, ಮೊಯಿನ್ ಅಲಿ, ರವೀಂದ್ರ ಜಡೇಜಾ, ಮಿಚೆಲ್ ಸ್ಯಾಂಟ್ನರ್, ಎಂಎಸ್ ಧೋನಿ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ತುಷಾರ್ ದೇಶಪಾಂಡೆ, ಸಿಮರ್ಜೀತ್ ಸಿಂಗ್.