IPL 2024: ಅಹಮದಾಬಾದ್ ಅಲ್ಲ, ಐಪಿಎಲ್ 2024ರ ಫೈನಲ್‌ಗೆ ಈ ಸ್ಟೇಡಿಯಂ ಆತಿಥ್ಯ
2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 17ನೇ ಆವೃತ್ತಿಯ ಫೈನಲ್ ಪಂದ್ಯದ ಬಗ್ಗೆ ಕೆಲವು ದೊಡ್ಡ ಸುದ್ದಿಗಳು ಹರಿದಾಡುತ್ತಿದ್ದು, ಫೈನಲ್ ಪಂದ್ಯವು ಸಂಭಾವ್ಯವಾಗಿ ಮೇ 26ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದೆ ಎಂದು ಬಿಸಿಸಿಐ ಮೂಲಗಳು ಬಹಿರಂಗಪಡಿಸಿವೆ.
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಒಂದು ಕ್ವಾಲಿಫೈಯರ್ ಮತ್ತು ಒಂದು ಎಲಿಮಿನೇಟರ್ ಪಂದ್ಯ ನಡೆಯಲಿದ್ದು, ಇನ್ನೊಂದು ಕ್ವಾಲಿಫೈಯರ್ ಚೆನ್ನೈನಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.

ಲೆಜೆಂಡ್ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ತಮ್ಮ ಕೊನೆಯ ಐಪಿಎಲ್ ಆಡುತ್ತಿರುವುದರಿಂದ, ಚೆನ್ನೈನಲ್ಲಿ ನಾಕೌಟ್ ಪಂದ್ಯಗಳು ಎಲ್ಲಾ 'ಥಲಾ' ಅಭಿಮಾನಿಗಳಿಗೆ ರಸದೌತಣ ನೀಡಲಿವೆ.
ಭಾರತದ ಸಾರ್ವತ್ರಿಕ ಚುನಾವಣಾ ದಿನಾಂಕಗಳನ್ನು ಗಮನದಲ್ಲಿಟ್ಟುಕೊಂಡು ಐಪಿಎಲ್‌ನ ಉಳಿದ ವೇಳಾಪಟ್ಟಿಯನ್ನು ಅಂತಿಮಗೊಳಿಸಿದೆ ಮತ್ತು ಬಿಸಿಸಿಐ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ. ಮೊದಲ 21 ಪಂದ್ಯಗಳ ವೇಳಾಪಟ್ಟಿಯನ್ನು ತಿಂಗಳ ಹಿಂದೆ ಬಿಡುಗಡೆ ಮಾಡಿತ್ತು.
ಇತ್ತೀಚಿನ ವರದಿಗಳನ್ನು ನಂಬುವುದಾದರೆ, ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂ ಐಪಿಎಲ್ 2024ರ ಒಂದು ಕ್ವಾಲಿಫೈಯರ್ ಮತ್ತು ಫೈನಲ್ ಪಂದ್ಯವನ್ನು ಆಯೋಜಿಸಲು ಸಜ್ಜಾಗಿದೆ.

ಗಮನಿಸಬೇಕಾದ ಸಂಗತಿಯೆಂದರೆ, ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ಐಪಿಎಲ್ 2023ರ ಫೈನಲ್ ಪಂದ್ಯಕ್ಕೆ ಆತಿಥ್ಯ ವಹಿಸಿತ್ತು. ಅಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟನ್ಸ್ ತಂಡಗಳು ಸೆಣಸಾಡಿದ್ದವು ಮತ್ತು ಸಿಎಸ್‌ಕೆ ತಮ್ಮ ಐದನೇ ಐಪಿಎಲ್ ಟ್ರೋಫಿಯನ್ನು ಎತ್ತಿ ಹಿಡಿದಿತ್ತು.
"ಐಪಿಎಲ್ ಆಡಳಿತ ಮಂಡಳಿಯು ಕಳೆದ ವರ್ಷದ ಹಾಲಿ ಚಾಂಪಿಯನ್ ತಂಡದ ತವರು ಮೈದಾನದಲ್ಲಿ ಆರಂಭಿಕ ಪಂದ್ಯ ಮತ್ತು ಫೈನಲ್ ಪಂದ್ಯವನ್ನು ನಡೆಸುವ ಸಂಪ್ರದಾಯವನ್ನು ಅನುಸರಿಸಿದೆ. ಈ ಸಂದರ್ಭದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಸರದಿ," ಎಂದು ಹಿರಿಯ ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆರ್‌ಸಿಬಿ ವಿರುದ್ಧ ಮೊದಲ ಪಂದ್ಯ ಗೆದ್ದ ಸಿಎಸ್‌ಕೆ; ಮುಂಬೈ ವಿರುದ್ಧ ಗುಜರಾತ್ ಪಂದ್ಯ
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬಗ್ಗೆ ಮಾತನಾಡುವುದಾದರೆ, ಐಪಿಎಲ್ 2024ರಲ್ಲಿ ಸಿಎಸ್‌ಕೆ ಇಲ್ಲಿಯವರೆಗೆ ಒಂದು ಪಂದ್ಯವನ್ನು ಆಡಿದ್ದು, ಆರ್‌ಸಿಬಿ ವಿರುದ್ಧ 6 ವಿಕೆಟ್‌ಗಳ ಗೆಲುವು ಸಾಧಿಸಿದೆ.
ರುತುರಾಜ್ ಗಾಯಕ್ವಾಡ್ ನಾಯಕತ್ವದ ಸಿಎಸ್‌ಕೆ ಮಾರ್ಚ್ 22ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಉದ್ಘಾಟನಾ ಪಂದ್ಯದಲ್ಲಿ ಎದುರಿಸಿತು. ಚೆನ್ನೈ ತಂಡವು ಬೆಂಗಳೂರು ತಂಡದ ಮೇಲೆ ಪ್ರಾಬಲ್ಯ ಸಾಧಿಸಿತು ಮತ್ತು ಅಂಕಪಟ್ಟಿಯಲ್ಲಿ ತನ್ನ ಎರಡು ಅಂಕಗಳನ್ನು ದಾಖಲಿಸಿತು.
ಮತ್ತೊಂದೆಡೆ, ಗುಜರಾತ್ ಟೈಟನ್ಸ್ ಇನ್ನೂ ಐಪಿಎಲ್ 2024ರ ತಮ್ಮ ಮೊದಲ ಪಂದ್ಯಕ್ಕಾಗಿ ಕಾಯುತ್ತಿದೆ. ಮಾರ್ಚ್ 24ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಪಂದ್ಯಾವಳಿಯ ಐದನೇ ಪಂದ್ಯದಲ್ಲಿ ಎದುರಿಸಲಿದೆ.
ಈ ಹಣಾಹಣಿಯು ಉಭಯ ತಂಡಗಳಿಗೆ ಅವೃತ್ತಿಯ ಮೊದಲ ಪಂದ್ಯವಾಗಿದೆ ಮತ್ತು ಎರಡೂ ತಂಡಗಳು ತಮ್ಮ 2024ರ ಐಪಿಎಲ್ ಅಭಿಯಾನಗಳಲ್ಲಿ ಗೆಲುವಿನ ಆರಂಭವನ್ನು ಪಡೆಯುವ ಗುರಿ ಹೊಂದಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications