ಶನಿವಾರ, ಮೇ 18ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 68ನೇ ಪ್ಲೇಆಫ್ ನಿರ್ಣಾಯಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ವಿರುದ್ಧ ಸವಾಲಿನ ಮೊತ್ತ ಕಲೆಹಾಕಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫಾಫ್ ಡು ಪ್ಲೆಸಿಸ್ ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 218 ರನ್ ಗಳಿಸಿದ್ದು, ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 219 ರನ್‌ಗಳ ಗುರಿ ನೀಡಿದೆ.

ಆರ್‌ಸಿಬಿ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ವಿರಾಟ್ ಕೊಹ್ಲಿ ಮತ್ತು ಫಾಫ್ ಡು ಪ್ಲೆಸಿಸ್ ಉತ್ತಮ ಆರಂಭ ನೀಡಿದರು. ಪವರ್‌ಪ್ಲೇನಲ್ಲಿ 3 ಓವರ್‌ಗಳಾಗಿದ್ದಾಗ ಮಳೆ ಬಂದು ಆಟ ನಿಲ್ಲಿಸಿದಾಗ ಈ ಜೋಡಿ 31 ರನ್ ಗಳಿಸಿತ್ತು. ಬಳಿಕ ಆಟ ಮುಂದುವರೆಸಿ 9.4 ಓವರ್‌ಗಳಲ್ಲಿ 78 ರನ್‌ಗಳ ಜೊತೆಯಾಟ ನಿರ್ಮಿಸಿದರು.
ಈ ವೇಳೆ 29 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್‌ಗಳ ಸಮೇತ 47 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಆನಂತರ ನಾಯಕ ಫಾಫ್ ಡು ಪ್ಲೆಸಿಸ್ 39 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 3 ಸಿಕ್ಸರ್‌ಗಳ ಮೂಲಕ 54 ರನ್ ಗಳಿಸಿ ಆಡುತ್ತಿದ್ದಾಗ ವಿವಾದಾತ್ಮಕ ರನೌಟ್ ತೀರ್ಪಿಗೆ ಔಟಾದರು.

ಬಳಿಕ ಬಂದ ರಜತ್ ಪಾಟಿದಾರ್ ಮತ್ತು ಕ್ಯಾಮೆರಾನ್ ಗ್ರೀನ್ ಜೋಡಿ ಮೂರನೇ ವಿಕೆಟ್‌ಗೆ 71 ರನ್‌ಗಳ ಜೊತೆಯಾಟ ನೀಡಿದರು. ಈ ವೇಳೆ 23 ಎಸೆತಗಳಲ್ಲಿ 2 ಬೌಂಡರಿ ಹಾಗೂ 4 ಸಿಕ್ಸರ್‌ಗಳ ಸಮೇತ 41 ರನ್ ಗಳಿಸಿ ದೊಡ್ಡ ಶಾಟ್‌ಗೆ ಯತ್ನಿಸಿ ಬೌಂಡರಿ ಲೈನ್‌ನಲ್ಲಿ ಕ್ಯಾಚ್ ನೀಡಿದರು.
ಇನ್ನು ಕ್ಯಾಮೆರಾನ್ ಗ್ರೀನ್ ಮತ್ತೊಮ್ಮೆ ತಮ್ಮ ಅಬ್ಬರ ಬ್ಯಾಟಿಂಗ್ ಮುಂದುವರೆಸಿದರು ಮತ್ತು 17 ಎಸೆತಗಳಲ್ಲಿ 3 ಬೌಂಡರಿ ಹಾಗೂ 3 ಸಿಕ್ಸರ್‌ಗಳ ನೆರವಿನಿಂದ ಅಜೇಯ 38 ರನ್ ಗಳಿಸಿದರೆ, ದಿನೇಶ್ ಕಾರ್ತಿಕ್ ಕೇವಲ 6 ಎಸೆತಗಳಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 14 ರನ್ ಗಳಿಸಿದರು. ಕೊನೆಯಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ 5 ಎಸೆತಗಳಲ್ಲಿ 2 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 16 ರನ್ ಬಾರಿಸಿದರು.
ಇನ್ನು ಬೌಲಿಂಗ್‌ನಲ್ಲಿ ಸಿಎಸ್‌ಕೆ ತಂಡದ ಪರ ಶಾರ್ದೂಲ್ ಠಾಕೂರ್ 4 ಓವರ್‌ಗಳಲ್ಲಿ 61 ರನ್ ನೀಡಿ 2 ವಿಕೆಟ್ ಪಡೆದರೆ, ತುಷಾರ್ ದೇಶಪಾಂಡೆ ಮತ್ತು ಮಿಚೆಲ್ ಸ್ಯಾಂಟ್ನರ್ ತಲಾ ಒಂದೊಂದು ವಿಕೆಟ್ ಪಡೆದರು.
ಆರ್‌ಸಿಬಿ ತಂಡದ ಪ್ಲೇಆಫ್ ಭವಿಷ್ಯ ಇದೀಗ ಬೌಲರ್‌ಗಳ ಕೈಯಲ್ಲಿದ್ದು, 2 ಅಮೂಲ್ಯ ಅಂಕಗಳ ಜೊತೆಗೆ ನೆಟ್ ರನ್ ರೇಟ್ ಉತ್ತಮಗೊಳ್ಳಬೇಕಾದರೆ ಸಿಎಸ್‌ಕೆ ತಂಡವನ್ನು 200 ರನ್‌ಗಳ ಒಳಗೆ ನಿಯಂತ್ರಿಸಬೇಕಿದೆ.