CSK vs KKR IPL 2024: ಬಲಿಷ್ಠ ತಂಡಗಳ ಕಾಳಗದಲ್ಲಿ ಗೆಲ್ಲುವರಾರು?; ಹೆಡ್-ಟು-ಹೆಡ್, ಸಂಭಾವ್ಯ ಆಡುವ 11ರ ಬಳಗ
ಸೋಮವಾರ, ಏಪ್ರಿಲ್ 8ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 22ನೇ ರೋಚಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡಗಳು ಸೆಣಸಾಡುತ್ತಿವೆ.
ಇನ್ನು ಐಪಿಎಲ್ ಟಿ20 ಲೀಗ್‌ನಲ್ಲಿ ಎರಡು ದೊಡ್ಡ ಪ್ರತಿಸ್ಪರ್ಧಿಗಳ ನಡುವಿನ ಹೈ-ವೋಲ್ಟೇಜ್ ಪಂದ್ಯವು ಈ ಆವೃತ್ತಿಯಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿವೆ. ಚೆಪಾಕ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಚೆಪಾಕ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಆತಿಥ್ಯ ವಹಿಸುತ್ತಿದೆ.

ಇನ್ನು ಎರಡು ತಂಡಗಳ ಮಾಜಿ ನಾಯಕರಾದ ಎಂಎಸ್ ಧೋನಿ ಮತ್ತು ಗೌತಮ್ ಗಂಭೀರ್, ಎರಡು ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆದರೂ ಒಬ್ಬರನ್ನೊಬ್ಬರು ಸೋಲಿಸುವ ಗುರಿಯನ್ನು ಇಬ್ಬರೂ ಹೊಂದಿದ್ದಾರೆ.
ರುತುರಾಜ್ ಗಾಯಕ್ವಾಡ್ ನಾಯಕತ್ವದ ಸಿಎಸ್‌ಕೆ ತಂಡ ಸತತವಾಗಿ ಎರಡು ಪಂದ್ಯಗಳನ್ನು ಸೋತಿದೆ ಮತ್ತು ಶ್ರೇಯಸ್ ಅಯ್ಯರ್ ನಾಯಕತ್ವದ ಕೆಕೆಆರ್ ತಂಡ ಆಡಿದ 3 ಪಂದ್ಯಗಳಲ್ಲಿ ಮೂರು ಗೆಲುವು ಸಾಧಿಸಿ ಅಜೇಯವಾಗಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಆಡಿದ 3 ಪಂದ್ಯಗಳಲ್ಲಿ 3 ಗೆಲುವು ಸಾಧಿಸಿ 6 ಅಂಕಗಳು ಮತ್ತು +2.518 ನೆಟ್ ರನ್ ರೇಟ್‌ನೊಂದಿಗೆ ಐಪಿಎಲ್ 2024ರ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡ ಆಡಿದ 4 ಪಂದ್ಯಗಳಲ್ಲಿ 2 ಗೆಲುವು ಹಾಗೂ 2 ಸೋಲು ಕಂಡಿದೆ. ಒಟ್ಟು 4 ಅಂಕಗಳು ಮತ್ತು +0.517 ನೆಟ್ ರನ್ ರೇಟ್‌ನೊಂದಿಗೆ ಐಪಿಎಲ್ 2024ರ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಇಳಿದಿದೆ.

ಸಿಎಸ್‌ಕೆ vs ಕೆಕೆಆರ್: ಹೆಡ್-ಟು-ಹೆಡ್ ದಾಖಲೆ
ಉಭಯ ತಂಡಗಳು ತಾವು ತೀವ್ರತೆಯಿಂದಾಗಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ದೊಡ್ಡ ಪ್ರತಿಸ್ಪರ್ಧಿಗಳಾಗಿವೆ. ಆದರೆ ಇಲ್ಲಿಯವರೆಗೆ ಮುಖಾಮುಖಿ ದಾಖಲೆ ವಿಷಯಕ್ಕೆ ಬಂದಾಗ, ಎರಡು ತಂಡಗಳ ನಡುವೆ ದೊಡ್ಡ ಅಂತರವಿದೆ.
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಐಪಿಎಲ್‌ನಲ್ಲಿ ಈವರೆಗೆ 28 ಬಾರಿ ಮುಖಾಮುಖಿಯಾಗಿದ್ದು, ಸಿಎಸ್‌ಕೆ ತಂಡ 18 ಬಾರಿ ಗೆಲುವು ಸಾಧಿಸಿದ್ದರೆ, ಕೆಕೆಆರ್ ತಂಡ ಕೇವಲ 10 ಬಾರಿ ಗೆದ್ದಿದೆ.
ಇನ್ನು ಚೆಪಾಕ್‌ನಲ್ಲಿ ಎರಡು ತಂಡಗಳು ಪರಸ್ಪರ ಹತ್ತು ಬಾರಿ ಮುಖಾಮುಖಿಯಾಗಿದ್ದು, ಅದರಲ್ಲಿ ಕೆಕೆಆರ್ ತಂಡ ಮೂರು ಬಾರಿ ಗೆದ್ದಿದ್ದರೆ, ಸಿಎಸ್‌ಕೆ 7 ಬಾರಿ ಗೆದ್ದು ಬೀಗಿದೆ.
ಸಿಎಸ್‌ಕೆ vs ಕೆಕೆಆರ್ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ
ಐಪಿಎಲ್ 2024ರ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ನೇರಪ್ರಸಾರವಾಗಲಿದ್ದರೆ, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಇರಲಿದೆ.
ಸಿಎಸ್‌ಕೆ vs ಕೆಕೆಆರ್ ಸಂಭಾವ್ಯ ಆಡುವ 11ರ ಬಳಗ
ಚೆನ್ನೈ ಸೂಪರ್ ಕಿಂಗ್ಸ್: ರಚಿನ್ ರವೀಂದ್ರ, ರುತುರಾಜ್ ಗಾಯಕ್ವಾಡ್ (ನಾಯಕ), ಅಜಿಂಕ್ಯ ರಹಾನೆ, ಶಿವಂ ದುಬೆ, ಡೇರಿಲ್ ಮಿಚೆಲ್, ರವೀಂದ್ರ ಜಡೇಜಾ, ಸಮೀರ್ ರಿಜ್ವಿ/ಮಿಚೆಲ್ ಸ್ಯಾಂಟ್ನರ್, ಎಂಎಸ್ ಧೋನಿ (ವಿಕೆಟ್ ಕೀಪರ್), ದೀಪಕ್ ಚಹಾರ್, ತುಷಾರ್ ದೇಶಪಾಂಡೆ, ಮಹೀಶ್ ತೀಕ್ಷಣ.
ಕೋಲ್ಕತ್ತಾ ನೈಟ್ ರೈಡರ್ಸ್: ಸುನಿಲ್ ನರೈನ್, ಫಿಲ್ ಸಾಲ್ಟ್ (ವಿಕೆಟ್ ಕೀಪರ್), ಆಂಗ್‌ಕ್ರಿಶ್ ರಘುವಂಶಿ, ಶ್ರೇಯಸ್ ಅಯ್ಯರ್ (ನಾಯಕ), ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications