Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2024: ಆರ್‌ಸಿಬಿ ವಿರುದ್ಧ ಪಂದ್ಯಕ್ಕೆ ಡೆಲ್ಲಿ ನಾಯಕ ರಿಷಬ್‌ ಪಂತ್‌ ಬ್ಯಾನ್‌!

ಪ್ರಸ್ತುತ ನಡೆಯುತ್ತಿರುವ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌)ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಾಯಕ ರಿಷಬ್ ಪಂತ್‌ ಅವರಿಗೆ ಸಂಕಷ್ಟ ಎದುರಾಗಿದೆ.‌

ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ರಿಷಬ್ ಪಂತ್ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಒಂದು ಪಂದ್ಯಕ್ಕೆ ಬ್ಯಾನ್‌ ಮಾಡಿದ್ದು, 30 ಲಕ್ಷ ರೂ. ದಂಡವನ್ನು ವಿಧಿಸಲಾಗಿದೆ. ಮೇ 7 ರಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದ ವೇಳೆ ನಿಧಾನಗತಿಯ ಓವರ್ ರೇಟ್ ಮಾಡಿರುವುದು ಸಾಬೀತಾದ ಹಿನ್ನೆಲೆ ರಿಷಬ್ ಪಂತ್ ವಿರುದ್ಧ ಬಿಸಿಸಿಐ ಈ ನಿರ್ಧಾರ ಕೈಗೊಂಡಿದೆ.

IPL 2024 Delhi Capitals captain Rishabh Pant banned for one IPL match

ಭಾನುವಾರ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಹೈವೋಲ್ಟೇಜ್‌ ಪಂದ್ಯಕ್ಕೂ ಮುನ್ನ ರಿಷಬ್‌ ಪಂತ್‌ ತಂಡದಿಂದ ಹೊರಗುಳಿದರುವುದು ಡೆಲ್ಲಿ ಕ್ಯಾಪಿಟಲ್ಸ್‌ಗೆ ಭಾರೀ ಹಿನ್ನಡೆ ಉಂಟು ಮಾಡಿದೆ. ಜೊತೆಗೆ ಇಂಪ್ಯಾಕ್ಟ್ ಪ್ಲೇಯರ್ ಸೇರಿದಂತೆ ತಂಡದ ಆಡುವ ಹನ್ನೊಂದು ಉಳಿದ ಆಟಗಾರಿಗೆ ವೈಯಕ್ತಿಕವಾಗಿ 12 ಲಕ್ಷ ರೂ. ಅಥವಾ ಅವರ ಪಂದ್ಯದ ಶುಲ್ಕ, ಯಾವುದು ಕಡಿಮೆಯೋ ಅದನ್ನು ವಿಧಿಸಿಲಾಗಿದೆ.

ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 8 ರ ಪ್ರಕಾರ, ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದ ರೆಫರಿಯ ನಿರ್ಧಾರವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿತು. ನಂತರ ಈ ಮನವಿಯನ್ನು ಬಿಸಿಸಿಐ ಒಂಬುಡ್ಸ್‌ಮನ್‌ಗೆ ಕಳುಹಿಸಲಾಗಿತ್ತು. ಓಂಬುಡ್ಸ್‌ಮನ್ ವರ್ಚುವಲ್ ನಡೆಸಿ ವಿಚಾರಣೆಯಲ್ಲಿ ಪಂದ್ಯದ ರೆಫರಿಯ ನಿರ್ಧಾರವು ಅಂತಿಮ ಮತ್ತು ಬದ್ಧವಾಗಿದೆ ಎಂದು ತಿಳಿಸಲಾಗಿದೆ.

ಐಪಿಎಲ್‌ ನಿಯಮಗಳ ಪ್ರಕಾರ, ಒಂದೇ ಆವೃತ್ತಿಯಲ್ಲಿ ಮೂರು ಬಾರಿ ನಿಧಾನಗತಿಯ ಓವರ್ ರೇಟ್ ಮಾಡಿರುವ ತಂಡ ನಾಯಕ ತಪ್ಪಿತಸ್ಥರೆಂದು ಕಂಡುಬಂದರೆ, 30 ಲಕ್ಷ ರೂಪಾಯಿ ದಂಡದ ಹೊರತಾಗಿ, ನಾಯಕನಿಗೆ ಒಂದು ಪಂದ್ಯಕ್ಕೆ ನಿಷೇಧ ಹೇರಲಾಗುತ್ತದೆ. ಅಲ್ಲದೆ ಇಂಪ್ಯಾಕ್ಟ್ ಪ್ಲೇಯರ್ ಸೇರಿದಂತೆ ಆ ತಂಡದ ಇತರ ಆಟಗಾರರಿಗೆ ತಲಾ 12 ಲಕ್ಷ ರೂ. ಅಥವಾ ಅವರ ಪಂದ್ಯದ ಶುಲ್ಕ, ಯಾವುದು ಕಡಿಮೆಯೋ ಅದನ್ನು ವಿಧಿಸಲಾಗುತ್ತದೆ.

ಇದಕ್ಕೂ ಮುನ್ನ ಎರಡನೇ ಬಾರಿಗೆ ಏಪ್ರಿಲ್‌ 3 ರಂದು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್‌ಗಾಗಿ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಬ್ ಪಂತ್ ಅವರಿಗೆ 24 ಲಕ್ಷ ರೂಪಾಯಿ ದಂಡ ವಿಧಿಸಲಾಗಿತ್ತು. ಇಂಪ್ಯಾಕ್ಟ್ ಪ್ಲೇಯರ್ ಅಭಿಷೇಕ್ ಪೊರೆಲ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ಆಡುವ ಹನ್ನೊಂದರ ಇತರ ಆಟಗಾರರಿಗೆ ತಲಾ ರೂ 6 ಲಕ್ಷ ಅಥವಾ ಅವರ ಪಂದ್ಯ ಶುಲ್ಕದ 25% ದಂಡ ವಿಧಿಸಲಾಗಿತ್ತು.

Story first published: Saturday, May 11, 2024, 17:05 [IST]
Other articles published on May 11, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+