Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

DC vs KKR: ಕೋಲ್ಕತ್ತಾ ಗೆಲುವಿನ ಓಟ ಕಟ್ಟಿಹಾಕುವುದೇ ಡೆಲ್ಲಿ; ಟಾಸ್ ವರದಿ, ಆಡುವ 11ರ ಬಳಗ

ಬುಧವಾರ, ಏಪ್ರಿಲ್ 3ರಂದು ವಿಶಾಖಪಟ್ಟಣದ ಡಾ. ವೈಎಸ್ ರಾಜಶೇಖರ್‌ರೆಡ್ಡಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 16ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ.

ಟಾಸ್ ಗೆದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಅವರು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ರಿ‍ಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲು ಬೌಲಿಂಗ್ ಮಾಡಲಿದೆ.

IPL 2024 Delhi Capitals vs Kolkata Knight Riders Match Toss Report And Playing 11

ಐಪಿಎಲ್ 2024ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ತಮ್ಮ ಮೂರನೇ ಪಂದ್ಯವನ್ನು ವಿಶಾಖಪಟ್ಟಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸುವ ಮೂಲಕ ಹ್ಯಾಟ್ರಿಕ್ ಗೆಲುವು ಸಾಧಿಸುವ ಗುರಿಯನ್ನು ಹೊಂದಿದೆ. ಮತ್ತೊಂದೆಡೆ, ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೂಡ ಗೆಲುವಿನ ಹಾದಿಯಲ್ಲಿ ಉಳಿಯಲು ಎದುರು ನೋಡುತ್ತಿದೆ.

ಡೆಲ್ಲಿ ಕ್ಯಾಪಿಟಲ್ಸ್ ಎರಡು ಸೋಲಿನೊಂದಿಗೆ ಪಂದ್ಯಾವಳಿಯನ್ನು ಪ್ರಾರಂಭಿಸಿ ಬಳಿಕ ಗೆಲುವು ದಾಖಲಿಸಿದರೆ, ಕೆಕೆಆರ್ ತಂಡವು ಆಡಿದ ಎರಡು ಪಂದ್ಯಗಳನ್ನು ಗೆದ್ದು ಅಜೇಯವಾಗಿದೆ.

ಹತ್ತು ತಂಡಗಳ ಅಂಕಪಟ್ಟಿಯಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವದ ಕೆಕೆಆರ್ ತಂಡ ಎರಡನೇ ಸ್ಥಾನದಲ್ಲಿದ್ದರೆ, ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಏಳನೇ ಸ್ಥಾನದಲ್ಲಿದೆ.

ಡಿಸಿ vs ಕೆಕೆಆರ್ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ಮಾಹಿತಿ

ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ. ಮೊಬೈಲ್‌ನಲ್ಲಿ ಪಂದ್ಯವನ್ನು ವೀಕ್ಷಿಸಲು ಬಯಸುವ ವೀಕ್ಷಕರು JioCinema ಮೊಬೈಲ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮಿಂಗ್ ನೋಡಬಹುದು.

ಡೆಲ್ಲಿ ಕ್ಯಾಪಿಟಲ್ಸ್ vs ಕೆಕೆಆರ್ ಆಡುವ 11ರ ಬಳಗ

ಕೋಲ್ಕತ್ತಾ ನೈಟ್ ರೈಡರ್ಸ್: ಫಿಲಿಪ್ ಸಾಲ್ಟ್(ವಿಕೆಟ್ ಕೀಪರ್), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ರಿಂಕು ಸಿಂಗ್, ಅಂಗ್‌ಕ್ರಿಶ್ ರಘುವಂಶಿ, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.

ಡೆಲ್ಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ರಿಷಭ್ ಪಂತ್(ನಾಯಕ/ ವಿಕೆಟ್ ಕೀಪರ್), ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್, ಸುಮಿತ್ ಕುಮಾರ್, ರಸಿಖ್ ದಾರ್ ಸಲಾಂ, ಅನ್ರಿಚ್ ನಾರ್ಟ್ಜೆ, ಇಶಾಂತ್ ಶರ್ಮಾ, ಖಲೀಲ್ ಅಹ್ಮದ್.

Story first published: Wednesday, April 3, 2024, 19:12 [IST]
Other articles published on Apr 3, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+