IPL 2024: ಸನ್‌ರೈಸರ್ಸ್ ತಂಡಕ್ಕೆ ಡಬಲ್ ಖುಷಿ: ಭರ್ಜರಿ ಫಾರ್ಮ್‌ಗೆ ಮರಳಿದ ಸ್ಟಾರ್ ಪ್ಲೇಯರ್
ಐಪಿಎಲ್ ಲೀಗ್ ಆರಂಭಕ್ಕೂ ಮುನ್ನವೇ ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಖುಷಿಯ ಸುದ್ದಿ ಸಿಕ್ಕಿದೆ. ಒಂದು ಅವರ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ನಾಯಕತ್ವದಲ್ಲಿ ಸನ್ ರೈಸರ್ಸ್ ಈಸ್ಟರ್ನ್ ಕೇಪ್ ತಂಡ ದಕ್ಷಿಣ ಆಫ್ರಿಕಾ ಟಿ20 ಲೀಗ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಇನ್ನೊಂದು ಇದೇ ತಂಡದ ಸ್ಟಾರ್ ಪ್ಲೇಯರ್ ಅಬ್ಬರದ ಆಟದ ಮೂಲಕ ಲೀಗ್‌ನಲ್ಲಿ ಎಲ್ಲರ ಚಿತ್ತ ಕದ್ದಿದ್ದಾರೆ.
ಸನ್‌ರೈಸರ್ಸ್ ಈಸ್ಟರ್ನ್ ಕೇಪ್ ದಕ್ಷಿಣ ಆಫ್ರಿಕಾ ಲೀಗ್ SA20 ಅನ್ನು ಸತತ ಎರಡನೇ ಬಾರಿಗೆ ಗೆದ್ದು ಇತಿಹಾಸ ನಿರ್ಮಿಸಿದೆ. ಫೈನಲ್ ಪಂದ್ಯದಲ್ಲಿ ಸನ್‌ರೈಸರ್ಸ್ 89 ರನ್ ಗಳಿಂದ ಡರ್ಬನ್ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸಿತು. ಲೀಗ್‌ನ ಮೊದಲ ಸೀಸನ್‌ನಲ್ಲಿ ಸನ್‌ರೈಸರ್ಸ್ ತಂಡವೂ ಚಾಂಪಿಯನ್ ಆಗಿತ್ತು.

ಕೇಪ್ ಟೌನ್ ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸನ್ ರೈಸರ್ಸ್ ಈಸ್ಟರ್ನ್ ಕೇಪ್ 20 ಓವರ್‌ಗಳಲ್ಲಿ 3 ವಿಕೆಟ್‌ಗೆ 204 ರನ್ ಸೇರಿಸಿತು. ಬೃಹತ್ ಗುರಿಯನ್ನು ಹಿಂಬಾಲಿಸಿದ ಡರ್ಬನ್ ಸೂಪರ್ ಜೈಂಟ್ಸ್ 17 ಓವರ್‌ಗಳಲ್ಲಿ 115 ರನ್‌ಗಳಿಗೆ ಸರ್ವಪತನ ಕಂಡಿತು. ಸನ್ ರೈಸರ್ಸ್ ತಂಡದ ಟಾಮ್ ಅಬೆಲ್ (55 ರನ್) ಪಂದ್ಯ ಶ್ರೇಷ್ಠರಾದರು. ಡರ್ಬನ್ ಸೂಪರ್ ಜೈಂಟ್ಸ್ ತಂಡದ ಹೆನ್ರಿಕ್ ಕ್ಲಾಸೆನ್ ಅವರು ಸರಣಿಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದರು.
ದಕ್ಷಿಣ ಆಫ್ರಿಕಾ ಟಿ20 ಕ್ರಿಕೆಟ್ ಲೀಗ್‌ನ ಪ್ರಶಸ್ತಿ ಪಂದ್ಯದಲ್ಲಿ ಟಾಸ್ ಗೆದ್ದ ಸನ್‌ರೈಸರ್ಸ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಆದರೆ, ಸನ್‌ರೈಸರ್ಸ್‌ಗೆ ಉತ್ತಮ ಆರಂಭ ಸಿಗಲಿಲ್ಲ. ಮತ್ತು ಡೇವಿಡ್ ಮಲಾನ್ ಕೇವಲ 15 ರನ್‌ಗಳಿಸಿ ಪೆವಿಲಿಯನ್‌ಗೆ ಮರಳಿದರು. ಎರಡನೇ ವಿಕಟ್‌ಗೆ ಸನ್ ರೈಸರ್ಸ್ ತಂಡದ ಟಾಮ್ ಬೆಲ್ ಮತ್ತು ಜೋರ್ಡಾನ್ (42 ರನ್) ಬಿರುಸಿನ ಬ್ಯಾಟಿಂಗ್ ಆರಂಭಿಸಿದರು. ಈ ಜೋಡಿ 52 ಎಸೆತಗಳಲ್ಲಿ 90 ರನ್ ಸೇರಿಸಿತು.

ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ ಟಾಮ್ ಬೆಲ್ 34 ಎಸೆತಗಳಲ್ಲಿ 8 ಬೌಂಡರಿ, 2 ಸಿಕ್ಸರ್ ಸಹಾಯದಿಂದ 55 ರನ್ ಸಿಡಿಸಿದರು.
ನಾಲ್ಕನೇ ವಿಕೆಟ್‌ಗೆ ಐಡೆನ್ ಮಾರ್ಕ್ರಾಮ್ ಮತ್ತು ಟ್ರಿಸ್ಟಾನ್ ಸ್ಟಬ್ಸ್ ಕೂಡ ಉತ್ತಮ ಜೊತೆಯಾಟವನ್ನು ನೀಡಿದರು. ಟ್ರಿಸ್ಟಾನ್ ಸ್ಟಬ್ಸ್ 30 ಎಸೆತಗಳಲ್ಲಿ 4 ಬೌಂಡರಿ, 3 ಸಿಕ್ಸರ್ ಸಹಾಯದಿಂದ 56 ರನ್ ಬಾರಿಸಿದರು. ನಾಯಕ ಮಾರ್ಕ್ರಮ್ 3 ಬೌಂಡರಿ, 2 ಸಿಕ್ಸರ್ ಸಹಾಯದಿಂದ 42 ರನ್ ಸಿಡಿಸಿದರು. ಅವರ ವೇಗದ ಬ್ಯಾಟಿಂಗ್‌ನಿಂದಾಗಿ ಸನ್‌ರೈಸರ್ಸ್ 20 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 204 ರನ್ ಗಳಿಸಿತು.
ಸನ್ ರೈಸರ್ಸ್ ತಂಡ ಬೌಲಿಂಗ್ ನಲ್ಲಿ ಅದ್ಭುತ ಪ್ರದರ್ಶನ ನೀಡಿತು.ಅದರಲ್ಲೂ ತಂಡದ ಸ್ಟಾರ್ ವೇಗಿ ಮಾರ್ಕೊ ಜಾನ್ಸನ್ ಅಪಾಯಕಾರಿ ಎಸೆತಗಳನ್ನು ಎದುರಿಸುವಲ್ಲಿ ಎದುರಾಳಿ ತಂಡ ವಿಫಲವಾಯಿತು. ಇವರು 30 ರನ್ ನೀಡಿ 5 ವಿಕೆಟ್ ಪಡೆದರು. ಡರ್ಬನ್ ತಂಡದ ಪರ ವಿಯಾನ್ ಮುಲ್ಡರ್ (38), ಡ್ವೈನ್ ಪ್ರಿಟೋರಿಯಸ್ (28) ಮಾತ್ರ ಕೊಂಚ ಹೊತ್ತು ಸನ್‌ರೈಸರ್ಸ್ ಬೌಲರ್‌ಗಳನ್ನು ಕಾಡಿದರು.
ಐಡೆನ್ ಮಾರ್ಕ್ರಾಮ್ ಅವರ ನಾಯಕತ್ವದಲ್ಲಿ, ಸನ್‌ರೈಸರ್ಸ್ ಈಸ್ಟರ್ನ್ ಕ್ಯಾಪ್ 2023 ರಲ್ಲಿ SAT20 ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications