IPL 2024 Eliminator: ಆರ್‌ಸಿಬಿ vs ರಾಜಸ್ಥಾನ್ ರಾಯಲ್ಸ್ ಪಂದ್ಯಕ್ಕೆ ಮಳೆ ಭೀತಿಯೇ?; ಹವಾಮಾನ ವರದಿ
2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ತಮ್ಮ ಮೊದಲ ಒಂಬತ್ತು ಪಂದ್ಯಗಳಲ್ಲಿ ಎಂಟು ಪಂದ್ಯಗಳನ್ನು ಗೆದ್ದರೂ, ಅಂಕಪಟ್ಟಿಯಲ್ಲಿ ಅಗ್ರ ಎರಡು ಸ್ಥಾನಗಳನ್ನು ಗಳಿಸಲು ವಿಫಲವಾಗಿದೆ. ಇದೀಗ ಮೂರನೇ ಸ್ಥಾನವನ್ನು ಪಡೆದು ಎಲಿಮಿನೇಟರ್ ಪಂದ್ಯವನ್ನು ಆಡಬೇಕಾಗಿದೆ.
ಇದಕ್ಕೆ ವ್ಯತಿರಿಕ್ತವಾಗಿ, ಪ್ರಸಕ್ತ ಲೀಗ್‌ನಲ್ಲಿ ಆಡಿದ ಮೊದಲ ಎಂಟು ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯ ಮಾತ್ರ ಗೆಲ್ಲುವಲ್ಲಿ ಯಶಸ್ವಿಯಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಸತತವಾಗಿ ಆರು ಪಂದ್ಯಗಳನ್ನು ಗೆದ್ದು ಎಲ್ಲರ ಆಲೋಚನೆಗಳ ವಿರುದ್ಧ ಪ್ಲೇಆಫ್‌ಗೆ ಅರ್ಹತೆ ಗಳಿಸಿತು.

ಸದ್ಯ ಪರಸ್ಪರ ವಿರುದ್ಧ ಫಾರ್ಮ್ ಮತ್ತು ಪ್ರದರ್ಶನ ಹೊಂದಿರುವ ಉಭಯ ತಂಡಗಳು ಮೇ 22ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಎಲಿಮಿನೇಟರ್ ಪಂದ್ಯವನ್ನು ಆಡಲಿವೆ ಮತ್ತು ವಿಜೇತ ತಂಡ ಕ್ವಾಲಿಫೈಯರ್ 2ಗೆ ತೆರಳಲಿವೆ. ಇದೇ ವೇಳೆ ಸೋತ ತಂಡವು ಪಂದ್ಯಾವಳಿಯಿಂದ ಹೊರಬೀಳಲಿದೆ.
2024ರ ಪಂದ್ಯಾವಳಿಯಲ್ಲಿ ಅಸಾಧಾರಣ ಆರಂಭದ ನಂತರ, ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡವು ಲೀಗ್ ಹಂತದ ಅಂತ್ಯದ ವೇಳೆಗೆ ತಮ್ಮ ವೇಗವನ್ನು ಕಳೆದುಕೊಂಡಿತು. ಮಧ್ಯಮ ಕ್ರಮಾಂಕವು ಪ್ರತಿರೋಧ ಒಡ್ಡಲು ವಿಫಲವಾಯಿತು ಮತ್ತು ನಿರ್ಣಾಯಕ ಸಮಯದಲ್ಲಿ ಶಿಮ್ರಾನ್ ಹೆಟ್ಮೆಯರ್ ಅವರ ಗಾಯವು ಅಗ್ರ ಎರಡು ಸ್ಥಾನವನ್ನು ಕಳೆದುಕೊಳ್ಳುವಂತೆ ಮಾಡಿತು.
ಇದೀಗ, ಇಂಗ್ಲೆಂಡ್‌ನ ಜೋಸ್ ಬಟ್ಲರ್ ಅಂತರಾಷ್ಟ್ರೀಯ ಕರ್ತವ್ಯಕ್ಕೆ ತೆರಳುವುದರೊಂದಿಗೆ, ರಾಜಸ್ಥಾನ್ ರಾಯಲ್ಸ್ ತಂಡವು ಅಗ್ರಸ್ಥಾನದಲ್ಲಿ ಟಾಮ್ ಕೊಹ್ಲರ್-ಕ್ಯಾಡ್ಮೋರ್‌ನಲ್ಲಿ ನಂಬಿಕೆ ತೋರಿಸಿದೆ. ಇದೇ ವೇಳೆ ಬೌಲಿಂಗ್ ವಿಭಾಗವೂ ತಂಡಕ್ಕಾಗಿ ಕಡಿಮೆ ಪ್ರದರ್ಶನ ನೀಡುತ್ತಿದೆ.

ಮತ್ತೊಂದೆಡೆ, ಆರ್‌ಸಿಬಿ ತಂಡದ ವಿಷಯಕ್ಕೆ ಬಂದರೆ, ಸತತ ಆರು ಪಂದ್ಯಗಳ ಗೆಲುವಿನ ನಂತರ ಹೆಚ್ಚಿನ ಆತ್ಮವಿಶ್ವಾಸವನ್ನು ಹೊಂದಿರುತ್ತದೆ. ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಗಮನಾರ್ಹ ಬ್ಯಾಟಿಂಗ್ ಫಾರ್ಮ್‌ನಲ್ಲಿದ್ದಾರೆ. ಪ್ರಸ್ತುತ ಲೀಗ್‌ನ ಅಗ್ರ ಸ್ಕೋರರ್ ಆಗಿದ್ದಾರೆ. ಅಲ್ಲದೆ, ಫಾಫ್ ಡು ಪ್ಲೆಸಿಸ್ ಮತ್ತು ರಜತ್ ಪಾಟಿದಾರ್ ಇತ್ತೀಚಿನ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ.
ಆರ್‌ಸಿಬಿ ತಂಡದ ಬೌಲಿಂಗ್ ಸ್ವಲ್ಪಮಟ್ಟಿಗೆ ಸುಧಾರಿಸಿದೆ ಮತ್ತು ಸಂಪೂರ್ಣ ತಂಡವು ಮೈದಾನದಲ್ಲಿ ಸ್ವಲ್ಪ ಆವೇಗ ಕಂಡುಕೊಂಡಿದೆ. ಗ್ಲೆನ್ ಮ್ಯಾಕ್ಸ್‌ವೆಲ್ ಫಾರ್ಮ್‌ಗೆ ಮರಳಿದರೆ ಮತ್ತಷ್ಟು ಬಲಿಷ್ಠವಾಗಿ ಕಾಣಲಿದೆ.
ಹವಾಮಾನ ಮುನ್ಸೂಚನೆ ಮತ್ತು ಪಿಚ್ ವರದಿ
ಅಹಮದಾಬಾದ್‌ನ ತಾಪಮಾನವು 45 ಡಿಗ್ರಿ ಸೆಲ್ಸಿಯಸ್‌ವರೆಗೆ ಹೆಚ್ಚಾಗಬಹುದು. ಆದರೆ ರಾತ್ರಿ ವೇಳೆ 31 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವುದರಿಂದ ಇದು ಬಿಸಿಯಾದ ದಿನವಾಗಿದೆ ಎಂದು ನಿರೀಕ್ಷಿಸಲಾಗಿದೆ. ಹೀಗಾಗಿ ಮಳೆಯಾಗುವ ಯಾವುದೇ ಸಾಧ್ಯತೆಯಿಲ್ಲ.
ಅಕ್ಯುವೆದರ್ ಪ್ರಕಾರ, ಅಹಮದಾಬಾದ್‌ನ ಸುತ್ತಮುತ್ತ ಗಾಳಿಯು ಗಂಟೆಗೆ 35 ಕಿಮೀ ವೇಗದಲ್ಲಿ ಬೀಸುತ್ತದೆ ಮತ್ತು ಯಾವುದೇ ಮೋಡದ ಹೊದಿಕೆ ಇರುವುದಿಲ್ಲ.
ಇದೇ ವೇಳೆ, ಅಹಮದಾಬಾದ್ ಸ್ಟೇಡಿಯಂ ಕೆಂಪು-ಮಣ್ಣು ಮತ್ತು ಕಪ್ಪು-ಮಣ್ಣಿನ ಮೇಲ್ಮೈ ಪಿಚ್‌ಗಳನ್ನು ಹೊಂದಿದೆ. ಪಂದ್ಯವನ್ನು ಯಾವ ಪಿಚ್‌ನಲ್ಲಿ ಆಡಲಾಗುತ್ತದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ರಾಜಸ್ಥಾನ್ ರಾಯಲ್ಸ್ ತಂಡದ ಸಂಭಾವ್ಯ ಆಡುವ 11ರ ಬಳಗ
ಯಶಸ್ವಿ ಜೈಸ್ವಾಲ್, ಟಾಮ್ ಕೊಹ್ಲರ್-ಕಾಡ್ಮೋರ್, ಸಂಜು ಸ್ಯಾಮ್ಸನ್ (ನಾಯಕ/ ವಿಕೆಟ್ ಕೀಪರ್), ರಿಯಾನ್ ಪರಾಗ್, ಧ್ರುವ್ ಜುರೆಲ್, ಶುಭಂ ದುಬೆ, ರೋವ್ಮನ್ ಪೊವೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ಯುಜ್ವೇಂದ್ರ ಚಹಾಲ್.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭಾವ್ಯ ಆಡುವ 11ರ ಬಳಗ
ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಯಶ್ ದಯಾಳ್, ಮೊಹಮ್ಮದ್ ಸಿರಾಜ್, ಸ್ವಪ್ನಿಲ್ ಸಿಂಗ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications