IPL 2024 Final: ಐಪಿಎಲ್ ಫೈನಲ್‌ನಲ್ಲಿ ಬೇಡದ ದಾಖಲೆ ಬರೆದು ಸಿಎಸ್‌ಕೆ ಹಿಂದಿಕ್ಕಿದ ಸನ್ ರೈಸರ್ಸ್
ಭಾನುವಾರ, ಮೇ 26ರಂದು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) ಫೈನಲ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು 8 ವಿಕೆಟ್‌ಗಳಿಂದ ಮಣಿಸಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಮೂರನೇ ಬಾರಿಗೆ ಐಪಿಎಲ್ ಚಾಂಪಿಯನ್ ಪಟ್ಟ ಅಲಂಕರಿಸಿತು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸ್ಟಾರ್-ಸ್ಟಡ್ ಸನ್ ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟರ್‌ಗಳು ಕೇವಲ 113 ರನ್‌ಗಳ ಐತಿಹಾಸಿಕ ಕಡಿಮೆ ಮೊತ್ತಕ್ಕೆ ಆಲೌಟ್ ಆದರು.

ಈ ಮುಜುಗರದೊಂದಿಗೆ, ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಎಸ್‌ಆರ್‌ಹೆಚ್ ತಂಡವು ಯಾವುದೇ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫೈನಲ್ ಪಂದ್ಯದಲ್ಲಿ ಕಡಿಮೆ ಮೊತ್ತ ಗಳಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡದ 11 ವರ್ಷಗಳ (125/9) ಹಳೆಯ ದಾಖಲೆಯನ್ನು ಮುರಿದಿದೆ.
ಇದೇ ಆವೃತ್ತಿಯಲ್ಲಿ ಆರ್‌ಸಿಬಿ ವಿರುದ್ಧ 3 ವಿಕೆಟ್‌ಗೆ 287 ರನ್ ಸಿಡಿಸುವ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ಮೊತ್ತವನ್ನು ಗಳಿಸಿದ ಸನ್ ರೈಸರ್ಸ್ ಹೈದರಾಬಾದ್ ಬ್ಯಾಟರ್‌ಗಳು, ಭಾನುವಾರದಂದು ಚೆನ್ನೈನಲ್ಲಿ ಕೆಕೆಆರ್ ಬೌಲರ್‌ಗಳ ವಿರುದ್ಧ ಪ್ರತಿರೋಧ ಒಡ್ಡಲು ವಿಫಲರಾದರು ಮತ್ತು ಐಪಿಎಲ್‌ನ ಫೈನಲ್‌ನಲ್ಲಿ ಸಿಡಿಯಲು ಸಾಧ್ಯವಾಗಲಿಲ್ಲ.
ಕೆಕೆಆರ್ ತಂಡದ ಪರ ಮಿಚೆಲ್ ಸ್ಟಾರ್ಕ್, ಆಂಡ್ರೆ ರಸೆಲ್ ಮತ್ತು ಹರ್ಷಿತ್ ರಾಣಾ ಅವರು ಎರಡಕ್ಕಿಂತ ಹೆಚ್ಚು ವಿಕೆಟ್‌ಗಳನ್ನು ಉರುಳಿಸಿದರು. ಕುತೂಹಲಕಾರಿಯಾಗಿ, ಐಪಿಎಲ್ 2024ರ ಫೈನಲ್‌ನಲ್ಲಿ ಎಸ್‌ಆರ್‌ಹೆಚ್ ವಿರುದ್ಧ ಕೆಕೆಆರ್‌ನ ಯಾವ ಬೌಲರ್‌ಗಳೂ ವಿಕೆಟ್ ರಹಿತರಾಗಲಿಲ್ಲ.

ಐಪಿಎಲ್ ಫೈನಲ್‌ನಲ್ಲಿ ಅತಿ ಕಡಿಮೆ ಮೊತ್ತ ಗಳಿಸಿದ ತಂಡ
- 113/10 - ಸನ್ ರೈಸರ್ಸ್ ಹೈದರಾಬಾದ್ vs ಕೋಲ್ಕತ್ತಾ ನೈಟ್ ರೈಡರ್ಸ್ - 2024
- 125/9 - ಚೆನ್ನೈ ಸೂಪರ್ ಕಿಂಗ್ಸ್ vs ಮುಂಬೈ ಇಂಡಿಯನ್ಸ್ - 2013
- 128/6 - ರೈಸಿಂಗ್ ಪುಣೆ ಸೂಪರ್‌ಜೈಂಟ್ vs ಮುಂಬೈ ಇಂಡಿಯನ್ಸ್ - 2017
- 129/8 - ಮುಂಬೈ ಇಂಡಿಯನ್ಸ್ vs ರೈಸಿಂಗ್ ಪುಣೆ ಸೂಪರ್‌ಜೈಂಟ್ - 2017
- 130/9 - ರಾಜಸ್ಥಾನ್ ರಾಯಲ್ಸ್ vs ಗುಜರಾತ್ ಟೈಟನ್ಸ್ - 2022
2013ರಲ್ಲಿ ಮುಂಬೈ ಇಂಡಿಯನ್ಸ್ ತಂಡದ 148 ರನ್‌ಗಳ ಸಾಧಾರಣ ಮೊತ್ತವನ್ನು ಬೆನ್ನಟ್ಟುವಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿಫಲವಾಯಿತು ಮತ್ತು ಐಪಿಎಲ್ 2013ರ ಫೈನಲ್‌ನಲ್ಲಿ 125 ರನ್ ಮಾತ್ರ ಗಳಿಸಿ 23 ರನ್‌ಗಳಿಂದ ಸೋತಿತು.
ಅದೇನೇ ಇದ್ದರೂ, ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತನ್ನ ಮೂರನೇ ಪ್ರಶಸ್ತಿಯನ್ನು ಗೆಲ್ಲಲು 114 ರನ್‌ಗಳ ಅಲ್ಪ ಮೊತ್ತವನ್ನು 10.3 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು ತಲುಪಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications