IPL 2024: ಮುಂಬೈ ಇಂಡಿಯನ್ಸ್ ತಂಡ ಸೇರಿದ ಮಾಜಿ ನಾಯಕ: ಹಾಲಿ ನಾಯಕನ ಆತಂಕ ದೂರ
ಮುಂಬೈ ಇಂಡಿಯನ್ಸ್.. ಐಪಿಎಲ್‌ನ ಯಶಸ್ವಿ ತಂಡಗಳಲ್ಲಿ ಒಂದು. ಐದು ಬಾರಿ ಚಾಂಪಿಯನ್ ತಂಡ.. ಸ್ಟಾರ್ ಆಟಗಾರರನ್ನು ತನ್ನ ಮಡಿಲೊಳಗೆ ಪೋಷಿಸುವ ತಂಡ.. ಈ ತಂಡದ ಬಗ್ಗೆ ಹಲವು ದಿನಗಳಿಂದ ಎದ್ದಿದ್ದ ಊಹಾಪೋಹಗಳು ಕೊನೆಗೂ ನಿರಾಳವಾಗಿವೆ. ಈ ಮೂಲಕ ಹಾಲಿ ನಾಯಕನ ಚಿಂತೆ ದೂರ ಮಾಡಿದೆ.
ಐಪಿಎಲ್ ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್ ತನ್ನ ಮಾಜಿ ಆಟಗಾರ ಹಾರ್ದಿಕ್ ಪಾಂಡ್ಯ ಅವರನ್ನು ಗುಜರಾತ್ ಟೈಟನ್ಸ್ ತಂಡದಿಂದ ಟ್ರೇಡ್ ಮಾಡಿತ್ತು. ಬಳಿಕ ಐದು ಬಾರಿ ತಂಡದ ನಾಯಕ ರೋಹಿತ್ ಶರ್ಮಾ ಅವರಿಂದ ತಂಡದ ನಾಯಕತ್ವವನ್ನು ಕಸಿದುಕೊಂಡು, ಗುಜರಾತ್ ನಿಂದ ಬಂದಿದ್ದ ಹಾರ್ದಿಕ್ ಪಾಂಡ್ಯ ಅವರಿಗೆ ನೀಡಲಾಯಿತು. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡದಲ್ಲಿ ಅಸಮಾಧಾನದ ಹೊಗೆ ಭುಗಿಲೆದ್ದಿತ್ತು.

ರೋಹಿತ್ ಬೇರೆ ತಂಡಕ್ಕೆ ಹೋಗುತ್ತಾರೆ ಎಂಬ ಊಹಾಪೋಹಗಳು ಆರಂಭದಿಂದಲೂ ಇದ್ದವು. ರೋಹಿತ್ ಶರ್ಮಾ ಅವರನ್ನು ಬೇರೆ ತಂಡಗಳು ಟ್ರೇಡ್ ಮಾಡಲಿವೆ ಎಂಬ ಮಾತುಗಳು ಸಹ ಕೇಳಿ ಬಂದಿದ್ದವು. ಆದರೆ ಈ ಎಲ್ಲ ಊಹಾಪೋಹಗಳಿಗೆ ಕೊನೆಗೂ ತೆರೆ ಬಿದ್ದಿದೆ. ಮುಂಬೈ ಇಂಡಿಯನ್ಸ್ ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿಕೊಂಡಿದ್ದಾರೆ. ಈ ಮೂಲಕ ಹಾಲಿ ನಾಯಕ ಹಾರ್ದಿಕ್ ಪಾಂಡ್ಯ ಅವರ ಮನದ್ದಲ್ಲಿದ್ದ ಆತಂಕ ದೂರವಾದಂತೆ ಆಗಿದೆ.
ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ಕ್ಯಾಂಪ್ ಸೇರಿದ್ದಾರೆ, ಆದರೆ ಇನ್ನೂ ಅಭ್ಯಾಸ ಆರಂಭಿಸಿಲ್ಲ. ಮಾರ್ಚ್ 19 ರಿಂದ ರೋಹಿತ್ ಅಭ್ಯಾಸ ಆರಂಭಿಸಬಹುದು ಎಂದು ತಿಳಿದು ಬಂದಿದೆ. ಈ ಸಮಯದಲ್ಲಿ ರೋಹಿತ್ ಶರ್ಮಾ ಮೊದಲ ಬಾರಿಗೆ ಹಾರ್ದಿಕ್ ಪಾಂಡ್ಯ ಅವರೊಂದಿಗೆ ಕಾಣಿಸಿಕೊಳ್ಳಬಹುದು. ಇವರಿಬ್ಬರು ಎದುರಾದಾಗ ಸನ್ನಿವೇಶ ಹೇಗಿರುತ್ತದೆ ಎಂಬುದನ್ನು ನೋಡುವ ಕುತೂಹಲ ಅಭಿಮಾನಿಗಳದ್ದಾಗಿದೆ.
ಮೌನವೇ ಉತ್ತರ
ರೋಹಿತ್ ಶಿಬಿರವನ್ನು ತಲುಪಿದ ನಂತರ, ಹಾರ್ದಿಕ್ ಪಾಂಡ್ಯ ಮತ್ತು ರೋಹಿತ್ ಶರ್ಮಾ ನಡುವಿನ ಸಂಬಂಧ ಹೇಗಿರುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ. ಮುಂಬೈ ಇಂಡಿಯನ್ಸ್‌ನ ನೂತನ ನಾಯಕ ಹಾರ್ದಿಕ್ ಪಾಂಡ್ಯ ಮತ್ತು ಕೋಚ್ ಮಾರ್ಕ್ ಬೌಚರ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಒಟ್ಟಿಗೆ ಬಂದರು. ಈ ಮಧ್ಯೆ, ರೋಹಿತ್ ಶರ್ಮಾ ನಾಯಕತ್ವದಿಂದ ಕೆಳಗಿಳಿಸಿದ ಬಗ್ಗೆ ಹಾರ್ದಿಕ್ ಪಾಂಡ್ಯಗೆ ಪ್ರಶ್ನೆಗಳನ್ನು ಕೇಳಲಾಯಿತು. ಈ ಬಗ್ಗೆ ಹಾರ್ದಿಕ್ ಪಾಂಡ್ಯ ಮತ್ತು ಕೋಚ್ ಮಾರ್ಕ್ ಬೌಚರ್ ಮೌನವಾಗಿದ್ದರು.
ಐದು ಬಾರಿ ಚಾಂಪಿಯನ್
ರೋಹಿತ್ ಶರ್ಮಾ 2013 ರಲ್ಲಿ ಮೊದಲ ಬಾರಿಗೆ ಮುಂಬೈ ಇಂಡಿಯನ್ಸ್ ನಾಯಕತ್ವವನ್ನು ವಹಿಸಿಕೊಂಡರು. ಅದೇ ಋತುವಿನಲ್ಲಿ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್‌ನ ತಂಡವನ್ನು ಮುನ್ನಡೆಸಿ ಪ್ರಶಸ್ತಿಯನ್ನು ತೊಡಿಸುವಲ್ಲಿ ಸಫಲರಾದರು. ಇದಾದ ಬಳಿಕ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡವನ್ನು ಐಪಿಎಲ್ ನಲ್ಲಿ ಐದು ಬಾರಿ ಚಾಂಪಿಯನ್ ಪಟ್ಟಕ್ಕೇರಿಸಿದ್ದಾರೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ಕೊನೆಯ ಬಾರಿಗೆ 2020 ರಲ್ಲಿ ಪ್ರಶಸ್ತಿಯನ್ನು ಗೆದ್ದುಕೊಂಡಿತು, ನಂತರ ಈ ತಂಡ ಪ್ರಶಸ್ತಿ ಬರವನ್ನು ಅನುಭವಿಸುತ್ತಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications