Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2024: ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ ಖುಷಿ ಸುದ್ದಿ: ತವರಿನಲ್ಲಿ ನ್ಯೂಜಿಲೆಂಡ್ ಕಿವಿ ಹಿಂಡಿದ ಆಸೀಸ್‌

ಐಪಿಎಲ್‌ ಆರಂಭಕ್ಕೆ ಇನ್ನೇನು ದಿನಗಣನೆ ಆರಂಭವಾಗಿದೆ. ಎಲ್ಲ ತಂಡಗಳು ತಾಲೀಮು ನಡೆಸಿವೆ. ರಾಷ್ಟ್ರೀಯ ತಂಡದ ಪರ ಆಡುತ್ತಿರುವ ಆಟಗಾರರುವ ಆಟಗಾರರು ಮೈದಾನದಲ್ಲಿ ಅಬ್ಬರಿಸಿ, ತಮ್ಮ ಫ್ರಾಂಚೈಸಿ ಮುಖದಲ್ಲಿ ಮಂದಹಾಸ ಮೂಡಿಸಿದ್ದಾರೆ. ಐಪಿಎಲ್‌ ಶುರುವಾಗುವ ಮುನ್ನವೇ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಖುಷಿ ಸುದ್ದಿಯೊಂದು ಸಿಕ್ಕಿದೆ.

ಆಸ್ಟ್ರೇಲಿಯಾ ನ್ಯೂಜಿಲೆಂಡ್‌ ಪ್ರವಾಸವನ್ನು ಆರಂಭಿಸಿದೆ. ಈ ವೇಳೆ ಎರಡು ಟೆಸ್ಟ್‌ ಪಂದ್ಯಗಳ ಸರಣಿಯನ್ನು ಆಡಲಾಯಿತು. ಈ ಸರಣಿಯನ್ನು ಕಿವೀಸ್‌ ಸೋತಿದೆ. ಆಸ್ಟ್ರೇಲಿಯಾ, ನ್ಯೂಜಿಲೆಂಡ್ ತಂಡವನ್ನು ತವರಿನಲ್ಲಿ ಮಣಿಸಿ ಅಬ್ಬರಿಸಿದೆ. ಆಸೀಸ್‌ ಎರಡನೇ ಟೆಸ್ಟ್‌ನಲ್ಲಿ ಮಿಂಚಿದ ಆಟಗಾರರಲ್ಲಿ ಒಬ್ಬರು, ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಟಾರ್ ಆಟಗಾರ ಮಿಚೆಲ್ ಮಾರ್ಷ್..

IPL 2024 Good news for Delhi Capitals Aussies beat New Zealand at home

ಮಿಚೆಲ್‌ ಮಾರ್ಷ್‌ ಎರಡನೇ ಟೆಸ್ಟ್‌ನಲ್ಲಿ ವಿಕೆಟ್‌ ಪಡೆಯುವಲ್ಲಿ ವಿಫಲರಾಗಿದ್ದಾರೆ. ಆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ಅಬ್ಬರಿಸಿದ್ದಾರೆ. ಈ ಮೂಲಕ ಡೆಲ್ಲಿ ಫ್ಯಾನ್ಸ್‌ಗಳಿಗೆ ಖುಷಿ ನೀಡಿದ್ದಾರೆ. ಅಲ್ಲದೆ ಐಪಿಎಲ್‌ ಟ್ರೋಫಿ ಗೆಲ್ಲುವ ಆಸೆಯನ್ನು ಚಿಗುರಿಸಿದ್ದಾರೆ. ಎರಡನೇ ಇನಿಂಗ್ಸ್‌ನಲ್ಲಿ ಅಲೆಕ್ಸಾ ಜೊತೆಗೂಡಿ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿದ ಮಿಚೆಲ್ ಅಬ್ಬರಿಸಿದ್ದಾರೆ. ಈ ಮೂಲಕ ಆಸೀಸ್‌ ಪ್ರವಾಸದಲ್ಲಿ ಆಡಿದ ಎರಡೂ ಟೆಸ್ಟ್‌ ಪಂದ್ಯಗಳನ್ನು ಗೆದ್ದು ಕ್ಲೀಸ್ ಸ್ವೀಪ್ ಸಾಧನೆ ಮಾಡಿದೆ.

ಕಿವೀಸ್‌ಗೆ ಆಘಾತ

ಎರಡನೇ ಟೆಸ್ಟ್‌ ಮೊದಲ ಇನಿಂಗ್ಸ್‌ನಲ್ಲಿ ನ್ಯೂಜಿಲೆಂಡ್‌ 162 ರನ್‌ಗಳಿಗೆ ಆಲೌಟ್ ಆಯಿತು. ಮೊದಲ ಇನಿಂಗ್ಸ್‌ ಆರಂಭಿಸಿದ ಆಸ್ಟ್ರೇಲಿಯಾ 256 ರನ್‌ಗಳಿಗೆ ಸರ್ವಪತನ ಕಂಡಿತು. ಎರಡನೇ ಇನ್ನಿಂಗ್ಸ್‌ನಲ್ಲಿ ಸಮಯೋತಿತ ಬ್ಯಾಟಿಂಗ್ ಮಾಡಿದ ಉತ್ತಮ ಮೊತ್ತ ಕಲೆ ಹಾಕುವತ್ತ ದಾಪುಗಾಲು ಇಟ್ಟಿತು. ಟಾಮ್ ಲಾಥಮ್‌ (73), ರಚಿನ್ ರವೀಂದ್ರ (82), ಡೇರಿಲ್‌ ಮಿಚೆಲ್‌ (58) ತಂಡದ ಮೊತ್ತ ಹಿಗ್ಗಿಸಿದರು. ಗುರಿಯನ್ನು ಬೆನ್ನಟ್ಟಿದ ಆಸೀಸ್‌ 80 ರನ್‌ಗಳಿಗೆ ಐದು ವಿಕೆಟ್‌ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಈ ವೇಳೆ ಮಿಚೆಲ್ ಮಾರ್ಷ್ ಹಾಗೂ ಅಲೆಕ್ಸ್‌ ಕ್ಯಾರಿ ಭರ್ಜರಿ ಜೊತೆಯಾಟವನ್ನು ನೀಡಿ ತಂಡಕ್ಕೆ ಆಧಾರವಾದರು. ಈ ಜೋಡಿ ಆಸೀಸ್ ತಂಡದ ಗೆಲುವನ್ನು ಕನ್ಫರ್ಮ್‌ ಮಾಡಿತು.

ಭರ್ಜರಿ ಜೊತೆಯಾಟ

ಮಿಚೆಲ್‌ ಮಾರ್ಷ್‌ 10 ಬೌಂಡರಿ, 1 ಸಿಕ್ಸರ್ ಸಹಾಯದಿಂದ 80 ರನ್ ಸಿಡಿಸಿದರು. ಅಲೆಕ್ಸ್‌ ಕ್ಯಾರಿ ಅಜೇಯ 98 ರನ್‌ ಸಿಡಿಸಿ ಅಬ್ಬರಿಸಿದರು. ಈ ಗೆಲುವು ಬರೀ ಆಸೀಸ್‌ಗಷ್ಟೇ ಖುಷಿ ನೀಡಿಲ್ಲ ಬದಲಿಗೆ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಅಭಿಮಾನಿಗಳಿಗೂ ಸಂತಸ ತಂದಿದೆ.

IPL 2024 Good news for Delhi Capitals Aussies beat New Zealand at home

ಐಪಿಎಲ್‌ನಲ್ಲಿ ಮಿಚೆಲ್ ಮಾರ್ಷ್ ಸಾಧನೆ

ಇನ್ನು ಆಸ್ಟ್ರೇಲಿಯಾದ ಆಲ್‌ರೌಂಡರ್‌ ಮಿಚೆಲ್ ಮಾರ್ಷ್‌ ಆಡಿದ 38 ಪಂದ್ಯಗಳಲ್ಲಿ 605 ರನ್‌ ಸಿಡಿಸಿದ್ದಾರೆ. ಇದರಲ್ಲಿ 3 ಅರ್ಧಶತಕ ಬಾರಿಸಿದ್ದಾರೆ. ಇದರಲ್ಲಿ 39 ಬೌಂಡರಿ, 35 ಸಿಕ್ಸರ್‌ ಸಿಡಿಸಿದ್ದಾರೆ. ಇನ್ನು ಬೌಲಿಂಗ್‌ನಲ್ಲಿ ಮಿಚೆಲ್‌ 36 ವಿಕೆಟ್‌ ಪಡೆದಿದ್ದಾರೆ.

Story first published: Monday, March 11, 2024, 12:26 [IST]
Other articles published on Mar 11, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+