ಐಪಿಎಲ್ 2024 ಸೀಸನ್ ಪ್ರಾರಂಭವಾಗುವ ಮೊದಲು ಮುಂಬೈ ಇಂಡಿಯನ್ಸ್‌ಗೆ ತಂಡಕ್ಕೆ ಖುಷಿ ಸುದ್ದಿಯೊಂದು ಸಿಕ್ಕಿದೆ. ಈ ಸುದ್ದಿ ನಿಜಕ್ಕೂ ಹಾರ್ದಿಕ್ ಪಾಂಡ್ಯ ಅವರ ಅರ್ಧ ತಲೆ ನೋವು ದೂರ ಮಾಡುವುದರಲ್ಲಿ ಯಾವುದೇ ಸಂಶಯವೇ ಇಲ್ಲ. ಯಾವುದೇ ಬಿಗ್ ಸ್ಕೋರ್ ಚೇಸ್ ಮಾಡುವ ಹಾಗೂ ಮಿಡ್ಲ್ ಆರ್ಡರ್‌ನಲ್ಲಿ ಫಿಯರ್ ಲೆಸ್ ಕ್ರಿಕೆಟ್ ಆಡುವ ಆಟಗಾರನ ಫಿಟ್ನೆಸ್ ಬಗ್ಗೆ ಬಿಗ್ ಅಪ್‌ಡೇಟ್ ಸಿಕ್ಕಿದೆ.
ಮುಂಬೈ ಇಂಡಿಯನ್ಸ್ ಆಟಗಾರ ಸೂರ್ಯಕುಮಾರ್ ಯಾದವ್ ಅವರು ತಮ್ಮ ಗಾಯದ ಮಾಹಿ ನೀಡಿದ್ದಾರೆ. ಅವರು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿ ಮೂಲಕ ತಮ್ಮ ಚೇತರಿಕೆಯ ಬಗ್ಗೆ ಹೇಳಿಕೊಂಡಿದ್ದಾರೆ. ಸೂರ್ಯಕುಮಾರ್ ಯಾದವ್ ಅವರು ಇತ್ತೀಚೆಗೆ ಸ್ಪೋರ್ಟ್ಸ್ ಹರ್ನಿಯಾಕ್ಕೆ ಆಪರೇಷನ್ ಆಗಿದೆ. ಆದರೆ ಈಗ ಶೀಘ್ರವಾಗಿ ಚೇತರಿಸಿಕೊಳ್ಳುತ್ತಿರುವುದಾಗಿ ತಿಳಿಸಿದ್ದು, ಈ ಭಾರತೀಯ ಬ್ಯಾಟ್ಸ್‌ಮನ್ ಶೀಘ್ರದಲ್ಲೇ ಮೈದಾನದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಶುಭ ಸುದ್ದಿ ನೀಡಿದ್ದಾರೆ.

ಸೂರ್ಯಕುಮಾರ್ ಯಾದವ್ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಕೆಲವು ವಿಚಾರದ ಬಗ್ಗೆ ಮನ ಬಿಚ್ಚಿ ಮಾತನಾಡಿದ್ದಾರೆ. 'ಎಲ್ಲರಿಗೂ ಶುಭೋದಯ, ನೀವೆಲ್ಲರೂ ಚೆನ್ನಾಗಿರುತ್ತೀರಿ ಎಂದು ಭಾವಿಸುತ್ತೇವೆ. ನಾನು ಇಲ್ಲಿ ಕೆಲವು ವಿಷಯಗಳನ್ನು ಸ್ಪಷ್ಟಪಡಿಸಲು ಬಯಸುತ್ತೇನೆ, ಬಹುಶಃ ನಿಮಗೆ ತಿಳಿದಿಲ್ಲದಿರಬಹುದು ... ನಾನು ಇತ್ತೀಚೆಗೆ ಆಪರೇಷನ್ ಮಾಡಿದ್ದು ನನ್ನ ಪಾದಕ್ಕೆ ಅಲ್ಲ ಆದರೆ ಸ್ಪೋರ್ಟ್ಸ್ ಹರ್ನಿಯಾಕ್ಕೆ ಎಂದು ನಾನು ನಿಮಗೆ ಹೇಳಲು ಬಯಸುತ್ತೇನೆ. ಈಗ ನಾನು ನಿರಂತರವಾಗಿ ವೇಗವಾಗಿ ಸುಧಾರಿಸುತ್ತಿದ್ದೇನೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕಾಗಿ ಎಲ್ಲರಿಗೂ ಧನ್ಯವಾದಗಳು...ಶೀಘ್ರದಲ್ಲೇ ನಿಮ್ಮೆಲ್ಲರನ್ನೂ ಭೇಟಿ ಮಾಡುತ್ತೇನೆ. ಇದಲ್ಲದೇ ಸೂರ್ಯಕುಮಾರ್ ಯಾದವ್ ನೆಟ್ಸ್ ತರಬೇತಿ ಆರಂಭಿಸಿದ್ದಾರೆ. ಐಪಿಎಲ್ ಸೀಸನ್ ಆರಂಭವಾಗುವ ವೇಳೆಗೆ ಅವರು ಸಂಪೂರ್ಣ ಫಿಟ್ ಆಗುತ್ತಾರೆ ಎಂದು ನಂಬಲಾಗಿದೆ.
ಸೂರ್ಯಕುಮಾರ್ ಯಾದವ್ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ನ ಭಾಗವಾಗಿದ್ದಾರೆ. ಆದರೆ ಇತ್ತೀಚೆಗೆ ಈ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಗಾಯಗೊಂಡಿದ್ದರು. ಇದಾದ ಬಳಿಕ ಅಫ್ಘಾನಿಸ್ತಾನ ವಿರುದ್ಧದ ಸರಣಿಯಲ್ಲಿ ಆಡಲು ಸಾಧ್ಯವಾಗಲಿಲ್ಲ. ಕಳೆದ ತಿಂಗಳು, ಸೂರ್ಯಕುಮಾರ್ ಯಾದವ್ ಜರ್ಮನಿಯಲ್ಲಿ ತೊಡೆಸಂದು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಆಟಗಾರ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪುನರ್ವಸತಿ ಆರಂಭಿಸಿದ್ದಾರೆ. ಆದರೆ, ಐಪಿಎಲ್ ಸೀಸನ್ ಆರಂಭವಾಗುವ ವೇಳೆಗೆ ಸೂರ್ಯಕುಮಾರ್ ಯಾದವ್ ಸಂಪೂರ್ಣ ಚೇತರಿಸಿಕೊಳ್ಳಲಿ ಎಂದು ಮುಂಬೈ ಇಂಡಿಯನ್ಸ್ ಅಭಿಮಾನಿಗಳು ಹಾರೈಸಿದ್ದಾರೆ.