GT vs SRH: ಗುಜರಾತ್ ಟೈಟನ್ಸ್ ಬಿಗಿ ಬೌಲಿಂಗ್ ದಾಳಿ; ಸವಾಲಿನ ಗುರಿ ನೀಡಿದ ಸನ್ ರೈಸರ್ಸ್ ಹೈದರಾಬಾದ್
ಭಾನುವಾರ, ಮಾರ್ಚ್ 31ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 12ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ (ಜಿಟಿ) ತಂಡದ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್) ತಂಡ ಸವಾಲಿನ ಮೊತ್ತವನ್ನು ಕಲೆಹಾಕಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 162 ರನ್ ಗಳಿಸಿದ್ದು, ಗುಜರಾತ್ ಟೈಟನ್ಸ್ ತಂಡಕ್ಕೆ 163 ರನ್‌ಗಳ ಗುರಿ ನೀಡಿದೆ.

ಸನ್ ರೈಸರ್ಸ್ ಹೈದರಾಬಾದ್ ತಂಡದ ಇನ್ನಿಂಗ್ಸ್ ಆರಂಭಿಸಿದ ಟ್ರಾವಿಸ್ ಹೆಡ್ ಮತ್ತು ಮಯಾಂಕ್ ಉತ್ತಮ ಆರಂಭದ ಮುನ್ಸೂಚನೆ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 4.2 ಓವರ್‌ಗಳಲ್ಲಿ 34 ರನ್‌ಗಳ ಜೊತೆಯಾಟ ನೀಡಿತು. ಈ ವೇಳೆ 17 ಎಸೆತಗಳಲ್ಲಿ 2 ಬೌಂಡರಿ ಮೂಲಕ 16 ರನ್ ಗಳಿಸಿದ್ದ ಮಯಾಂಕ್ ಅಗರ್ವಾಲ್ ವಿಕೆಟ್ ಒಪ್ಪಿಸಿದರು.
ಇದೇ ವೇಳೆ ಆಕ್ರಮಣಕಾರಿಯಾಗಿ ಆಡುತ್ತಿದ್ದ ಟ್ರಾವಿಸ್ ಹೆಡ್ 14 ಎಸೆತಗಳಲ್ಲಿ 3 ಬೌಂಡರಿ ಸಮೇತ 19 ರನ್ ಗಳಿಸಿ ಔಟಾದರು. ಮೂರನೇ ಕ್ರಮಾಂಕದಲ್ಲಿ ಬಂದ ಅಭಿಷೇಕ್ ಶರ್ಮಾ ಅವರು 20 ಎಸೆತಗಳಲ್ಲಿ 2 ಬೌಂಡರಿ ಮತ್ತು 2 ಸಿಕ್ಸರ್ ಸಮೇತ 29 ರನ್ ಬಾರಿಸಿದರು.
ಸನ್ ರೈಸರ್ಸ್ ಹೈದರಾಬಾದ್ ತಂಡದ ಇನ್ನಿಂಗ್ಸ್ ಆರಂಭಿಸಿದ ಟ್ರಾವಿಸ್ ಹೆಡ್ ಮತ್ತು ಮಯಾಂಕ್ ಉತ್ತಮ ಆರಂಭದ ಮುನ್ಸೂಚನೆ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 4.2 ಓವರ್‌ಗಳಲ್ಲಿ 34 ರನ್‌ಗಳ ಜೊತೆಯಾಟ ನೀಡಿತು. ಈ ವೇಳೆ 17 ಎಸೆತಗಳಲ್ಲಿ 2 ಬೌಂಡರಿ ಮೂಲಕ 16 ರನ್ ಗಳಿಸಿದ್ದ ಮಯಾಂಕ್ ಅಗರ್ವಾಲ್ ವಿಕೆಟ್ ಒಪ್ಪಿಸಿದರು.
ಇದೇ ವೇಳೆ ಆಕ್ರಮಣಕಾರಿಯಾಗಿ ಆಡುತ್ತಿದ್ದ ಟ್ರಾವಿಸ್ ಹೆಡ್ 14 ಎಸೆತಗಳಲ್ಲಿ 3 ಬೌಂಡರಿ ಸಮೇತ 19 ರನ್ ಗಳಿಸಿ ಔಟಾದರು. ಮೂರನೇ ಕ್ರಮಾಂಕದಲ್ಲಿ ಬಂದ ಅಭಿಷೇಕ್ ಶರ್ಮಾ ಅವರು 20 ಎಸೆತಗಳಲ್ಲಿ 2 ಬೌಂಡರಿ ಮತ್ತು 2 ಸಿಕ್ಸರ್ ಸಮೇತ 29 ರನ್ ಬಾರಿಸಿ ಔಟಾದರು.
ಬಳಿಕ ಕ್ರೀಸ್‌ಗೆ ಬಂದ ಏಡೆನ್ ಮಾರ್ಕ್ರಾಮ್ 19 ಎಸೆತಗಳಲ್ಲಿ 17 ರನ್ ಮಾತ್ರ ಗಳಿಸಿದರೆ, ಸ್ಫೋಟಕ ಬ್ಯಾಟರ್ ಹೆನ್ರಿಚ್ ಕ್ಲಾಸೆನ್ 13 ಎಸೆತಗಳಲ್ಲಿ 1 ಬೌಂಡರಿ ಹಾಗೂ 2 ಸಿಕ್ಸರ್ ಮೂಲಕ 24 ರನ್ ಗಳಿಸಿದರು. ಕೊನೆಯಲ್ಲಿ ಶಹಬಾಜ್ ಅಹ್ಮದ್ 20 ಎಸೆತಗಳಲ್ಲಿ 22 ರನ್ ಗಳಿಸಿದರೆ, ಅಬ್ದುಲ್ ಸಮದ್ 14 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 29 ರನ್ ಬಾರಿಸಿದರು.
ಇನ್ನು ಬೌಲಿಂಗ್‌ನಲ್ಲಿ ಗುಜರಾತ್ ಟೈಟನ್ಸ್ ತಂಡದ ಪರ ಮೋಹಿತ್ ಶರ್ಮಾ 4 ಓವರ್‌ಗಳಲ್ಲಿ 25 ರನ್ ನೀಡಿ 3 ವಿಕೆಟ್ ಕಬಳಿಸಿದರು. ಉಳಿದಂತೆ ಅಜ್ಮತುಲ್ಲಾ ಒಮರ್ಜಾಯ್, ಉಮೇಶ್ ಯಾದವ್ ಮತ್ತು ರಶೀದ್ ಖಾನ್ ತಲಾ ಒಂದೊಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications