ಗುರುವಾರ, ಏಪ್ರಿಲ್ 4ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 17ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ.
ಆತಿಥೇಯ ಗುಜರಾತ್ ಟೈಟನ್ಸ್ ತಂಡವು ಮತ್ತೊಂದು ಪಂದ್ಯವನ್ನು ಆಡುತ್ತಿರುವುದರಿಂದ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ಕೊನೆಯ ಸೀಟಿನವರೆಗೂ ತುಂಬಿರುತ್ತದೆ. ಎರಡೂ ತಂಡಗಳು ಕೆಲವು ಸ್ಫೋಟಕ ಬ್ಯಾಟರ್‌ಗಳನ್ನು ಹೊಂದಿರುವುದರಿಂದ ಕ್ರೀಡಾಂಗಣದಲ್ಲಿ ಹೆಚ್ಚಿನ ಸಿಕ್ಸರ್, ಬೌಂಡರಿಗಳನ್ನು ನಿರೀಕ್ಷಿಸಬಹುದು.

ಮೂರು ಪಂದ್ಯಗಳಲ್ಲಿ ಎರಡನ್ನು ಗೆದ್ದ ನಂತರ ಶುಭ್ಮನ್ ಗಿಲ್ ನಾಯಕತ್ವದ ಗುಜರಾತ್ ಟೈಟನ್ಸ್ ತಂಡವು ಪಂಜಾಬ್ ಕಿಂಗ್ಸ್ ತಂಡಕ್ಕಿಂತ ಹೆಚ್ಚು ಆತ್ಮವಿಶ್ವಾಸ ಹೊಂದಿದೆ. ಆದರೆ, ಶಿಖರ್ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್ ಸತತ ಸೋಲಿನಿಂದ ಕಂಗೆಟ್ಟಿದೆ.
ಪಂಜಾಬ್ ಕಿಂಗ್ಸ್ ತಂಡವು ಅತ್ಯುತ್ತಮ ಬ್ಯಾಟಿಂಗ್ ಪಡೆಯನ್ನು ಹೊಂದಿದೆ. ತಮ್ಮ ದಿನದಂದು ಯಾವುದೇ ತಂಡವನ್ನು ಸೋಲಿಸುವ ಸಾಮರ್ಥ್ಯ ಹೊಂದಿದೆ. ಆದರೂ ಈವರೆಗೆ ಆಡಿದ ಮೂರು ಪಂದ್ಯಗಳಲ್ಲಿ ಒಂದು ಗೆಲುವು ಮತ್ತು ಎರಡು ಸೋಲು ಅನುಭವಿಸಿದೆ.
ಈ ಪಂದ್ಯದಲ್ಲಿ ಯುವ ನಾಯಕ ಶುಭ್ಮನ್ ಗಿಲ್ ಮತ್ತು ಅನುಭವಿ ಬ್ಯಾಟರ್ ಶಿಖರ್ ಧವನ್ ನಡುವಿನ ಯುದ್ಧವಾಗಿದ್ದು, ಅಂತಿಮವಾಗಿ ಯಾರು ವಿಜಯ ಸಾಧಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಸ್ಥಳ ಮತ್ತು ದಿನಾಂಕ: ಗುಜರಾತ್ ಟೈಟನ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಗುರುವಾರ, ಏಪ್ರಿಲ್ 4ರಂದು ನಡೆಯಲಿದೆ.
ಪಂದ್ಯದ ಸಮಯ: ಗುಜರಾತ್ ಟೈಟನ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯವು ಭಾರತೀಯ ಕಾಲಮಾನ ಸಂಜೆ 7.30ಕ್ಕೆ ಆರಂಭವಾಗಲಿದೆ.
ಗುಜರಾತ್ ಟೈಟನ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ. ಮೊಬೈಲ್‌ನಲ್ಲಿ ಪಂದ್ಯವನ್ನು ವೀಕ್ಷಿಸಲು ಬಯಸುವ ವೀಕ್ಷಕರು JioCinema ಮೊಬೈಲ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮಿಂಗ್ ನೋಡಬಹುದು.
ಗುಜರಾತ್ ಟೈಟನ್ಸ್: ಶುಭಮನ್ ಗಿಲ್ (ನಾಯಕ), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಸಾಯಿ ಸುದರ್ಶನ್, ಅಜ್ಮತುಲ್ಲಾ ಒಮರ್ಜಾಯ್, ಡೇವಿಡ್ ಮಿಲ್ಲರ್, ವಿಜಯ್ ಶಂಕರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ನೂರ್ ಅಹಮದ್, ಉಮೇಶ್ ಯಾದವ್, ದರ್ಶನ್ ನಲ್ಕಂಡೆ.
ಪಂಜಾಬ್ ಕಿಂಗ್ಸ್: ಶಿಖರ್ ಧವನ್ (ನಾಯಕ), ಜಾನಿ ಬೈರ್‌ಸ್ಟೋವ್, ಪ್ರಭ್‌ಸಿಮ್ರಾನ್ ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರಾನ್, ಶಶಾಂಕ್ ಸಿಂಗ್, ಹರ್ಷಲ್ ಪಟೇಲ್, ಹರ್ಪೀತ್ ಬ್ರಾರ್, ಕಗಿಸೊ ರಬಾಡ, ರಾಹುಲ್ ಚಹಾರ್.