GT vs SRH: IPL 2024: ಬಲಿಷ್ಠ ಹೈದರಾಬಾದ್ ವಿರುದ್ಧ ಗುಜರಾತ್ ಕಾಳಗ; ಸಂಭಾವ್ಯ ಆಡುವ 11ರ ಬಳಗ
ಭಾನುವಾರ, ಮಾರ್ಚ್ 31ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 12ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಸೆಣಸಾಡಲು ಸಜ್ಜಾಗಿವೆ.
ಪ್ರಸಕ್ತ ಆವೃತ್ತಿಯಲ್ಲಿ ಉಭಯ ತಂಡಗಳು ಒಂದು ಗೆಲುವು ಮತ್ತು ಒಂದು ಸೋಲಿನೊಂದಿಗೆ ಮುಖಾಮುಖಿಯಾಗುತ್ತಿವೆ. ಹೀಗಾಗಿ ಖಂಡಿತವಾಗಿಯೂ ಎರಡೂ ತಂಡಗಳು ಹೆಚ್ಚು ಅಗತ್ಯವಿರುವ ಎರಡು ಅಂಕಗಳನ್ನು ಪಡೆಯಲು ಎದುರು ನೋಡುತ್ತಿವೆ.

ತನ್ನ ಮೊದಲ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಈಡನ್ ಗಾರ್ಡನ್ಸ್‌ನಲ್ಲಿ 4 ರನ್‌ಗಳ ಆಘಾತಕಾರಿ ಸೋಲಿನೊಂದಿಗೆ ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್ ತಂಡ ಐಪಿಎಲ್ 2024ರ ಅಭಿಯಾನವನ್ನು ಆರಂಭಿಸಿತು.
ಹೆನ್ರಿಚ್ ಕ್ಲಾಸೆನ್ ಅವರ ಸ್ಫೋಟಕ ಅರ್ಧಶತಕದ ಹೊರತಾಗಿಯೂ, ಆರೆಂಜ್ ಆರ್ಮಿ 209 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿತು ಮತ್ತು ಗೆಲುವಿನ ಸಮೀಪ ಬಂದಿತ್ತು. ಹೆನ್ರಿಚ್ ಕ್ಲಾಸೆನ್ ಔಟಾಗುವುದರೊಂದಿಗೆ ಸೋಲು ಕಂಡಿತು.
ಕೊನೆಯ 4 ಎಸೆತಗಳಲ್ಲಿ ಕೇವಲ 6 ರನ್‌ಗಳ ಅಗತ್ಯವಿತ್ತು ಮತ್ತು ಐದು ವಿಕೆಟ್‌ಗಳು ಕೈಯಲ್ಲಿದ್ದವು. ಸನ್ ರೈಸರ್ಸ್ ಹೈದರಾಬಾದ್ ಗೆಲುವಿನ ಸಂಭ್ರಮಾಚರಣೆಗೆ ಸಜ್ಜಾಗಿತ್ತು. ಆದರೆ, ಹರ್ಷಿತ್ ರಾಣಾ ಬಿಗಿ ಬೌಲಿಂಗ್ ನೆರವಿನಿಂದ ಕೋಲ್ಕತ್ತಾ ನೈಟ್ ರೈಡರ್ಸ್ ರೋಚಕವಾಗಿ ಗೆದ್ದು ಬೀಗಿತು.

ಬಳಿಕ ತಮ್ಮ ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ದಾಖಲೆಯ 275 ರನ್‌ಗಳನ್ನು ಬಾರಿಸುವ ಮೂಲಕ ಸನ್ ರೈಸರ್ಸ್ ಹೈದರಾಬಾದ್ ತಂಡ ಅದ್ಭುತವಾಗಿ ಪುನರಾಗಮನ ಮಾಡಿತು. ಆದರೆ, ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 246 ರನ್‌ಗಳನ್ನು ಗಳಿಸಿದ ಕಾರಣ 31 ರನ್‌ಗಳಿಂದ ಗೆಲುವು ಸಾಧಿಸಿತು.
ಮತ್ತೊಂದೆಡೆ, ಶುಭ್ಮನ್ ಗಿಲ್ ನಾಯಕತ್ವದ ಗುಜರಾತ್ ಟೈಟನ್ಸ್ ತಂಡವು ತಮ್ಮ ಮೊದಲನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 6 ರನ್‌ಗಳ ರೋಚಕ ಗೆಲುವು ಸಾಧಿಸಿತು. ನಂತರ ತಮ್ಮ ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 63 ರನ್‌ಗಳಿಂದ ಹೀನಾಯ ಸೋಲು ಅನುಭವಿಸಿತು.
ಜಿಟಿ vs ಎಸ್‌ಆರ್‌ಎಚ್ ಪಂದ್ಯದ ವಿವರ
ಸ್ಥಳ ಮತ್ತು ದಿನಾಂಕ: ಗುಜರಾತ್ ಟೈಟನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಐಪಿಎಲ್ 2024ರ ಪಂದ್ಯವು ಭಾನುವಾರ, ಮಾರ್ಚ್ 31ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

ಪಂದ್ಯದ ಸಮಯ: ಗುಜರಾತ್ ಟೈಟನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ರೋಚಕ ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 3.30ಕ್ಕೆ ಆರಂಭವಾಗಲಿದೆ.
ಜಿಟಿ vs ಎಸ್‌ಆರ್‌ಎಚ್: ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ಮಾಹಿತಿ
ಐಪಿಎಲ್ 2024ರ ಗುಜರಾತ್ ಟೈಟನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯವು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ. ಇನ್ನು ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಲಭ್ಯವಿರಲಿದೆ.
ಜಿಟಿ vs ಎಸ್‌ಆರ್‌ಎಚ್ ಸಂಭಾವ್ಯ ಆಡುವ 11ರ ಬಳಗ
ಗುಜರಾತ್ ಟೈಟನ್ಸ್: ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಶುಭ್ಮನ್ ಗಿಲ್ (ನಾಯಕ), ವಿಜಯ್ ಶಂಕರ್, ಅಜ್ಮತುಲ್ಲಾ ಒಮರ್ಜಾಯ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಸಾಯಿ ಕಿಶೋರ್, ಉಮೇಶ್ ಯಾದವ್, ಮೋಹಿತ್ ಶರ್ಮಾ, ಸ್ಪೆನ್ಸರ್ ಜಾನ್ಸನ್, ಸಾಯಿ ಸುದರ್ಶನ್.
ಸನ್‌ರೈಸರ್ಸ್ ಹೈದರಾಬಾದ್: ಟ್ರಾವಿಸ್ ಹೆಡ್, ಮಯಾಂಕ್ ಅಗರ್ವಾಲ್, ಅಭಿಷೇಕ್ ಶರ್ಮಾ, ಏಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್(ವಿಕೆಟ್ ಕೀಪರ್), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಂಡೆ, ಜಯದೇವ್ ಉನಾದ್ಕಟ್, ಉಮ್ರಾನ್ ಮಲಿಕ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications