Hardik Pandya: ಸ್ವತಃ ಮುಂಬೈ ಇಂಡಿಯನ್ಸ್ ಫ್ಯಾನ್ಸ್‌ನಿಂದಲೂ ಹಾರ್ದಿಕ್ ಪಾಂಡ್ಯ ಟ್ರೋಲ್!
ಬುಧವಾರ, ಮಾರ್ಚ್ 27ರಂದು ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆದ 2024ರ ಐಪಿಎಲ್‌ನ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಐಪಿಎಲ್ ಇತಿಹಾಸದಲ್ಲಿಯೇ 277 ರನ್‌ಗಳ ಅತ್ಯಧಿಕ ಮೊತ್ತವನ್ನು ದಾಖಲಿಸಿತು.
ಸನ್‌ರೈಸರ್ಸ್ ಹೈದರಾಬಾದ್ ನೀಡಿದ್ದ 278 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 5 ಕಳೆದುಕೊಂಡು 246 ರನ್ ಗಳಿಸಿ 31 ರನ್‌ಗಳಿಂದ ಸೋಲು ಅನುಭವಿಸಿತು.

ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಐಪಿಎಲ್ 2024ರಲ್ಲಿ ಸತತ ಎರಡನೇ ಸೋಲು ಕಂಡಿತು. ಇದೀಗ ಹೊಸ ನಾಯಕ ಹಾರ್ದಿಕ್ ಪಾಂಡ್ಯ ಮೇಲೆ ಒತ್ತಡವು ದ್ವಿಗುಣಗೊಳ್ಳುತ್ತಿದೆ. ಅವರು ಈಗ ಎಲ್ಲಾ ಕಡೆಗಳಿಂದ ಟೀಕೆ ಎದುರಿಸುತ್ತಿದ್ದಾರೆ.
ಹಾರ್ದಿಕ್ ಪಾಂಡ್ಯ ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್‌ಗಳಿಗೆ ಆಹಾರವಾಗಿದ್ದು, ಸ್ವತಃ ಮುಂಬೈ ಇಂಡಿಯನ್ಸ್ ಅಭಿಮಾನಿಗಳಿಂದಲೂ ಆಕ್ರೋಶ ಎದುರಿಸುತ್ತಿದ್ದಾರೆ. ಆರಂಭಿಕ ಎರಡು ಪಂದ್ಯಗಳ ಸೋಲಿ ಮುಂಬೈ ಇಂಡಿಯನ್ಸ್ ಮ್ಯಾನೇಜ್‌ಮೆಂಟ್‌ನನ್ನೂ ನಿರಾಶೆಗೊಳಿಸಿದೆ.
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ತನ್ನ ಹಿಂದಿನ ಗುಜರಾತ್ ಟೈಟನ್ಸ್ (ಜಿಟಿ) ತಂಡದ ವಿರುದ್ಧ ಮುಂಬೈ ಇಂಡಿಯನ್ಸ್‌ನ ಮೊದಲ ಪಂದ್ಯದ ಸಂದರ್ಭದಲ್ಲಿ 30 ವರ್ಷದ ಹಾರ್ದಿಕ್ ಪಾಂಡ್ಯ ಎರಡು ತಂಡಗಳ ಪ್ರೇಕ್ಷಕರ ಕೋಪವನ್ನು ಎದುರಿಸಿದರು.

ಗಮನಾರ್ಹವಾಗಿ, ಗುಜರಾತ್ ಟೈಟನ್ಸ್ ನಾಯಕರಾಗಿದ್ದ ಹಾರ್ದಿಕ್ ಪಾಂಡ್ಯ ಅವರನ್ನು ಐಪಿಎಲ್ 2024ರ ಮೊದಲು ಮುಂಬೈ ಇಂಡಿಯನ್ಸ್ ಭಾರೀ ಮೊತ್ತದ ವ್ಯಾಪಾರದ ಮೂಲಕ ಸೆಳೆದುಕೊಂಡಿತು.
ಆ ಬಳಿಕ ತಮ್ಮ ಐದು ಬಾರಿಯ ಟ್ರೋಫಿ ವಿಜೇತ ನಾಯಕ ರೋಹಿತ್ ಶರ್ಮಾ ಬದಲಿಗೆ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯರನ್ನು ತಂಡದ ನಾಯಕನನ್ನಾಗಿ ನೇಮಿಸಿತು. ಇದು ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯಿಂದ ರೋಹಿತ್ ಶರ್ಮಾ ಅವರನ್ನು ಸರಿಯಾಗಿ ನಡೆಸಿಕೊಂಡಿಲ್ಲ ಎಂದು ಭಾವಿಸಿದ ಮುಂಬೈ ಇಂಡಿಯನ್ಸ್ ಅಭಿಮಾನಿಗಳನ್ನು ಕೆರಳಿಸಿತು.
ಈ ಪ್ರಕ್ರಿಯೆ ಸಾಮಾಜಿಕ ಮಾಧ್ಯಮದಲ್ಲಿ ಹಾರ್ದಿಕ್ ಪಾಂಡ್ಯರನ್ನು ವ್ಯಾಪಕವಾಗಿ ಟ್ರೋಲ್ ಮಾಡಲಾಗುತ್ತಿದೆ. ಹೋದಲ್ಲಿ, ಬಂದಲ್ಲಿ ಹಾರ್ದಿಕ್ ಪಾಂಡ್ಯ ಅಭಿಮಾನಿಗಳಿಂದ ಟೀಕೆ ಎದುರಿಸುವಂತಾಗಿದೆ ಮತ್ತು ಇದೀಗ ಮೈದಾನದಲ್ಲಿಯೂ ಮುಂಬೈ ಇಂಡಿಯನ್ಸ್ ಅಭಿಮಾನಿಗಳು ಆಕ್ರೋಶ ಹೊರಹಾಕುತ್ತಿದ್ದಾರೆ.
ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಸೋತ ನಂತರ, ಪ್ರಶಸ್ತಿ ಸಮಾರಂಭದಲ್ಲಿ ಹಾರ್ದಿಕ್ ಪಾಂಡ್ಯ ತನ್ನ ಉತ್ತರಗಳಲ್ಲಿ ಶಾಂತವಾಗಿ ಕಂಡುಬಂದರು. ಆದರೆ ತಂಡದ ಫಲಿತಾಂಶಗಳ ಬಗ್ಗೆ ಚಿಂತಾಕ್ರಾಂತರಾಗಿದ್ದಾರೆ.
ಮುಂಬೈ ಇಂಡಿಯನ್ಸ್ 200ಕ್ಕಿಂತ ಹೆಚ್ಚಿನ ಗುರಿಯನ್ನು ಬೆನ್ನಟ್ಟಬಹುದು ಎಂಬ ದೃಷ್ಟಿಯಿಂದ ಬ್ಯಾಟಿಂಗ್ ಸ್ನೇಹಿ ವಿಕೆಟ್‌ನಲ್ಲಿ ಮೊದಲು ಬೌಲಿಂಗ್ ಮಾಡಲು ಹಾರ್ದಿಕ್ ಪಾಂಡ್ಯ ನಿರ್ಧರಿಸಿದರು.
ಆದರೆ, ಸನ್ ರೈಸರ್ಸ್ ಹೈದರಾಬಾದ್ ಬ್ಯಾಟರ್‌ಗಳು ಮುಂಬೈ ಇಂಡಿಯನ್ಸ್ ಬೌಲರ್‌ಗಳನ್ನು ದೂಳಿಪಟ ಮಾಡಿದರು. ಟ್ರಾವಿಸ್ ಹೆಡ್, ಹೆನ್ರಿಚ್ ಕ್ಲಾಸೆನ್, ಏಡೆನ್ ಮಾರ್ಕ್ರಾಮ್ ಮತ್ತು ಅಭಿಷೇಕ್ ಶರ್ಮಾ ಎಲ್ಲರೂ ಕೈಜೋಡಿಸಿ ಎಸ್‌ಆರ್‌ಎಚ್ ತಂಡವನ್ನು 20 ಓವರ್‌ಗಳಲ್ಲಿ 277 ರನ್‌ಗಳಿಗೆ ಏರಿಸಿದರು.
ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಅವರನ್ನು ಮೊದಲ ಓವರ್‌ನಲ್ಲಿ ದಾಳಿಗಿಳಿಸದಿರುವ ಹಾರ್ದಿಕ್ ಪಾಂಡ್ಯ ಯೋಜನೆಯು ಟಾಮ್ ಮೂಡಿ, ಇರ್ಫಾನ್ ಪಠಾಣ್ ಸೇರಿದಂತೆ ಹಲವಾರು ಕ್ರಿಕೆಟ್ ತಜ್ಞರಿಗೆ ಸರಿಯಾಗಿ ಕಾಣಲಿಲ್ಲ.
ಜಸ್ಪ್ರೀತ್ ಬುಮ್ರಾ ಎಸ್‌ಆರ್‌ಎಚ್ ವಿರುದ್ಧ ಅತ್ಯುತ್ತಮ ಮುಂಬೈ ಇಂಡಿಯನ್ಸ್ ಬೌಲರ್ ಆಗಿದ್ದರು. ತಮ್ಮ ಕೋಟಾದ 4 ಓವರ್‌ಗಳಲ್ಲಿ ಕೇವಲ 36 ರನ್ ನೀಡಿದರು ಮತ್ತು ಉಳಿದ ಬೌಲರ್‌ಗಳು ದುಬಾರಿಯಾದರು.
ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಮೀಮ್ಸ್ ಮತ್ತು ಟ್ರೋಲ್‌ಗಳಿಗೆ ಹಾರ್ದಿಕ್ ಪಾಂಡ್ಯ ಗುರಿಯಾಗಿದ್ದಾರೆ. ಗುಜರಾತ್ ಟೈಟನ್ಸ್ ತೊರೆದು ಮುಂಬೈ ಇಂಡಿಯನ್ಸ್‌ಗೆ ಹಿಂತಿರುಗುವ ನಿರ್ಧಾರದಿಂದಾಗಿ ಎರಡೂ ತಂಡಗಳ ಅಭಿಮಾನಿಗಳ ನಂಬಿಕೆಯನ್ನು ಕಳೆದುಕೊಂಡಿದ್ದಾರೆ.
ಎಸ್‌ಆರ್‌ಎಚ್ ವಿರುದ್ಧದ ಸೋಲಿನ ಪರಿಣಾಮವಾಗಿ, ಮುಂಬೈ ಇಂಡಿಯನ್ಸ್ ಐಪಿಎಲ್ 2024ರ ಅಂಕಗಳ ಪಟ್ಟಿಯಲ್ಲಿ 9ನೇ ಸ್ಥಾನಕ್ಕೆ ಕುಸಿದಿದೆ. ಅವರು ತಮ್ಮ ಎರಡೂ ಪಂದ್ಯಗಳನ್ನು ತವರಿನಿಂದ ಹೊರಗೆ ಆಡಿದ್ದಾರೆ.
ಮುಂಬೈ ಇಂಡಿಯನ್ಸ್ ಏಪ್ರಿಲ್ 1ರಂದು ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ವಿರುದ್ಧ ತವರಿನ ವಾಂಖೆಡೆಯಲ್ಲಿ ಆಡುತ್ತಾರೆ ಮತ್ತು ಋತುವಿನ ತಮ್ಮ ಮೊದಲ ಗೆಲುವನ್ನು ದಾಖಲಿಸುವ ಗುರಿಯನ್ನು ಹೊಂದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications