For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್‌ಗೆ ಭಾರತ ತಂಡದ ಆಯ್ಕೆ; ಆಯ್ಕೆಗಾರರಿಗೆ ಸ್ಪಷ್ಟ ಸಂದೇಶ ಕಳಿಸಿದ ವಿರಾಟ್ ಕೊಹ್ಲಿ!

ಶನಿವಾರ, ಏಪ್ರಿಲ್ 6ರಂದು ಜೈಪುರದಲ್ಲಿ ನಡೆದ 2024ರ ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆರ್‌ಸಿಬಿ ತಂಡ 6 ವಿಕೆಟ್ ಸೋಲು ಅನುಭವಿಸಿದರೂ, ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಭರ್ಜರಿ ಶತಕ ಬಾರಿಸುವ ಮೂಲಕ ತಮ್ಮ ಅದ್ಭುತ ಫಾರ್ಮ್ ಅನ್ನು ಮುಂದುವರೆಸಿದ್ದಾರೆ.

ಈ ಮೂಲಕ ಮುಂಬರುವ 2024ರ ಐಸಿಸಿ ಟಿ20 ವಿಶ್ವಕಪ್‌ಗಾಗಿ ಭಾರತ ತಂಡದಲ್ಲಿ ಆಯ್ಕೆಗೆ ಬಿಸಿಸಿಐ ಆಯ್ಕೆಗಾರರಿಗೆ ವಿರಾಟ್ ಕೊಹ್ಲಿ ಸ್ಪಷ್ಟ ಸಂದೇಶ ಕಳಿಸಿದ್ದಾರೆ. ಕೆಲವು ವಾರಗಳ ಹಿಂದೆ ಟಿ20 ವಿಶ್ವಕಪ್‌ಗೆ ವಿರಾಟ್ ಕೊಹ್ಲಿ ಆಯ್ಕೆ ಬಗ್ಗೆ ಊಹಾಪೋಹಗಳಿದ್ದವು. ಇದೀಗ ಐಪಿಎಲ್ 2024ರಲ್ಲಿ ತಮ್ಮ ಬ್ಯಾಟಿಂಗ್ ಪ್ರದರ್ಶನದ ಮೂಲಕ ತಾವು ಆಯ್ಕೆಗೆ ಲಭ್ಯವಿರುವುದಾಗಿ ಪರೋಕ್ಷವಾಗಿ ತಿಳಿಸಿದ್ದಾರೆ.

IPL 2024 Indian Team Selection for T20 World Cup Virat Kohli Sent a Clear Message To the Selectors

ಐಪಿಎಲ್ 2024ರಲ್ಲಿ ಈವರೆಗೆ ವಿರಾಟ್ ಕೊಹ್ಲಿ ಆರ್‌ಸಿಬಿ ಪರ ಆಡಿದ 5 ಪಂದ್ಯಗಳಲ್ಲಿ 105ರ ಸರಾಸರಿಯಲ್ಲಿ 316 ರನ್ ಗಳಿಸಿ ಆರೇಂಜ್ ಕ್ಯಾಪ್ ಹೊಂದಿದ್ದಾರೆ.

ಇದೇ ಜೂನ್ 2ರಿಂದ ಯುಎಸ್ಎ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ನಡೆಯಲಿರುವ 2024ರ ಐಸಿಸಿ ಟಿ20 ವಿಶ್ವಕಪ್‌ಗಾಗಿ ಏಪ್ರಿಲ್ ಕೊನೆಯ ವಾರದಲ್ಲಿ ಭಾರತ ತಂಡವನ್ನು ಆಯ್ಕೆ ಮಾಡಲು ಬಿಸಿಸಿಐ ಆಯ್ಕೆ ಸಮಿತಿ ತಯಾರಿ ನಡೆಸುತ್ತಿದೆ. ಈಗಾಗಲೇ ರೋಹಿತ್ ಶರ್ಮಾ ಅವರೇ ಭಾರತ ತಂಡದ ನಾಯಕ ಎಂದು ಖಚಿತಪಡಿಸಲಾಗಿದೆ.

ಭಾರತ ತಂಡಕ್ಕೆ ಅಗ್ರ ಕ್ರಮಾಂಕದಲ್ಲಿ ರನ್ ಗಳಿಸುವ ಮತ್ತು ವಿಕೆಟ್ ಕಾಯ್ದುಕೊಳ್ಳುವ ಸಾಮರ್ಥ್ಯ ಹೊಂದಿರುವ ವಿರಾಟ್ ಕೊಹ್ಲಿ ಅವರ ಅನುಭವ ವಿಶ್ವಕಪ್‌ನಂತಹ ದೊಡ್ಡ ವೇದಿಕೆಗಳಲ್ಲಿ ಅಗತ್ಯವೆನಿಸಿದೆ. ಅದರಲ್ಲೂ ಕೆರಿಬಿಯನ್ ನಾಡಿನಲ್ಲಿ ಆಡಿದ ಅನುಭವವು ಭಾರತ ತಂಡಕ್ಕೆ ನೆರವಾಗಲಿದೆ.

IPL 2024 Indian Team Selection for T20 World Cup Virat Kohli Sent a Clear Message To the Selectors

2024ರ ಐಸಿಸಿ ಟಿ20 ವಿಶ್ವಕಪ್‌ಗಾಗಿ ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ ಉಪಸ್ಥಿತಿ ಮತ್ತು ಪ್ರಾಮುಖ್ಯತೆಯ ಬಗ್ಗೆ ಈಗಾಗಲೇ ಹಲವು ಮಾಜಿ ಕ್ರಿಕೆಟಿಗರು ವಿರಾಟ್ ಕೊಹ್ಲಿ ಪರ ಬ್ಯಾಟ್ ಬೀಸಿದ್ದಾರೆ. ಆದರೆ, ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ವಿರಾಟ್ ಕೊಹ್ಲಿ ಕುರಿತು ಯಾವ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನು ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ವಿರಾಟ್ ಕೊಹ್ಲಿ ಅಮೋಘ ಶತಕ ಬಾರಿಸಿ ಆರ್‌ಸಿಬಿ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಅನ್ನು ಏಕಾಂಗಿಯಾಗಿ ಮುನ್ನಡೆಸಿದರು. 72 ಎಸೆತಗಳಲ್ಲಿ 12 ಬೌಂಡರಿ ಹಾಗೂ 4 ಸಿಕ್ಸರ್‌ಗಳ ಸಮೇತ ಅಜೇಯ 113 ರನ್ ಗಳಿಸಿದರು.

ವಿರಾಟ್ ಕೊಹ್ಲಿ ಶತಕ ಮತ್ತು ಫಾಫ್ ಡು ಪ್ಲೆಸಿಸ್ ಅವರ 44 ರನ್‌ಗಳ ನೆರವಿನಿಂದ ಆರ್‌ಸಿಬಿ ತಂಡ 20 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 183 ರನ್ ಕಲೆಹಾಕಿತು.

ಆದರೆ 184 ರನ್‌ಗಳ ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಜೋಸ್ ಬಟ್ಲರ್ ಅಜೇಯ ಶತಕ ಮತ್ತು ಸಂಜು ಸ್ಯಾಮ್ಸನ್ ಅವರ ಅರ್ಧಶತಕವು ಆರ್‌ಸಿಬಿ ಗೆಲುವನ್ನು ಕಸಿದುಕೊಂಡಿತು.

ವಿರಾಟ್ ಕೊಹ್ಲಿ ಬ್ಯಾಟಿಂಗ್ ಮೆಚ್ಚಿದ ಆರ್‌ಸಿಬಿ ಕೋಚ್

ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರ ನಿಧಾನಗತಿಯ ಶತಕದ ಹೊರತಾಗಿಯೂ, ಇದು ಕ್ಲಾಸಿ ಇನ್ನಿಂಗ್ಸ್ ಮತ್ತು ವೀಕ್ಷಿಸಲು ಸುಂದರವಾಗಿದೆ ಎಂದು ಆರ್‌ಸಿಬಿ ಮುಖ್ಯ ಕೋಚ್ ಆಂಡಿ ಫ್ಲವರ್ ಪಂದ್ಯದ ನಂತರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಭಾರತದ ಟಿ20 ವಿಶ್ವಕಪ್ ಆಯ್ಕೆ ಕುರಿತು ಮಾತನಾಡಿದ ಆರ್‌ಸಿಬಿ ಕೋಚ್, ಈ ಸಮಯದಲ್ಲಿ ಭಾರತೀಯ ಆಯ್ಕೆಗಾರರು ಏನು ಯೋಚಿಸುತ್ತಿದ್ದಾರೆ ಎಂಬುದರ ಕುರಿತು ನನಗೆ ಖಚಿತವಿಲ್ಲ ಎಂದು ಹೇಳಿದರು.

ಆದರೆ, ಜೂನ್‌ನಲ್ಲಿ ನಡೆಯುವ ಐಸಿಸಿ ಪಂದ್ಯಾವಳಿಗೆ ಆಯ್ಕೆಯಾಗಲು ಲಭ್ಯವಿರುವ ಆಟಗಾರರಲ್ಲಿ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ ಎಂದು ಆಂಡಿ ಫ್ಲವರ್ ತಿಳಿಸಿದರು.

"ಟಿ20 ವಿಶ್ವಕಪ್‌ಗೆ ಭಾರತ ತಂಡದ ಆಯ್ಕೆಯ ಬಗ್ಗೆ ನಾನು ನಿಜವಾಗಿಯೂ ಪ್ರತಿಕ್ರಿಯಿಸುವುದಿಲ್ಲ. ಭಾರತೀಯ ಆಯ್ಕೆಗಾರರು ಏನು ಯೋಚಿಸುತ್ತಿದ್ದಾರೆಂದು ನನಗೆ ತಿಳಿದಿಲ್ಲ. ಅವರು ಆಯ್ಕೆ ಮಾಡಲು ತುಂಬಾ ಪ್ರತಿಭೆಗಳನ್ನು ಹೊಂದಿದ್ದಾರೆ. ಭಾರತವು ಹೇರಳವಾದ ಪ್ರತಿಭೆಗಳಿಂದ ತುಂಬಿದೆ ಮತ್ತು ವಿರಾಟ್ ಕೊಹ್ಲಿ ಅಗ್ರ ಕ್ರಮಾಂಕದಲ್ಲಿ ಅತ್ಯುತ್ತಮ ಬ್ಯಾಟರ್," ಎಂದು ಆಂಡಿ ಫ್ಲವರ್ ಅಭಿಪ್ರಾಯಪಟ್ಟರು.

Story first published: Sunday, April 7, 2024, 13:06 [IST]
Other articles published on Apr 7, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+